ರಾಜ್ ಪಿಪ್ಲಾ, ಜು.6-ಗುತರಾತ್‌ನ ನರ್ಮದ ಜಿಲ್ಲೆಯ ದೇಡಿಯಾಪದದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಎಎಪಿ ಶಾಸಕ ಚೈತರ್ ವಾಸವ ಅವರನ್ನು ಕೊಲೆ ಯತ್ನದ ಆರೋಪದ ಮೇಲೆ ಬಂಧಿಸಲಾಗಿದೆ. ದೇಡಿಯಾಪದ ಪಕ್ಷದ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಹಲ್ಲೆ ಘಟನೆ ನಡೆದಿದ್ದು, ಶಾಸಕರನ್ನು ತಡರಾತ್ರಿಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಕುರಿತಂತೆ ದೇಡಿಯಾಪದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳೀಯ ಮಟ್ಟದ ಸಮನ್ವಯ ಸಮಿತಿಗೆ ತಮ್ಮ ನಾಮನಿರ್ದೇಶಿತರನ್ನು ಪರಿಗಣಿಸಲಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿಕೆರಳಿಸಿದರು.
ಸಭೆಯಲ್ಲಿ ಭಾಗವಹಿಸಿದ್ದ ದೇಡಿಯಾಪ್ಪಾ ತಾಲೂಕು ಪಂಚಾಯತ್ ಅಧ್ಯಕ್ಷ ಸಂಜಯ್ ವಾಸವ ಅವರು ಶಾಸಕರ ನಡೆ ಪ್ರಶ್ನಿಸಿದಾಗ ಅವರ ಮೇಲೆ ಮೊಬೈಲ್ ಫೋನ್ ಎಸೆದು ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಶಾಸಕರು ಗಾಜಿನಿಂದ ಹಲ್ಲೆ ನಡೆಸಲು ಪ್ರಯತ್ನಿಸಿದರು ಆದರೆ ಅಲ್ಲಿದ್ದ ಪೊಲೀಸ್ ಸಿಬ್ಬಂದಿ ಅದನ್ನು ತಡೆದರು ಎಂದು ಎಫ್‌ಐಆರ್ ನಲ್ಲಿ ಉಲ್ಲೇಖಿಸಲಾಗಿದೆ. ಆದರೆ, ಗಾಜು ಒಡೆದಾಗ, ಶಾಸಕರು ಗಾಜಿನ ಚೂರುಗಳನ್ನು ಎತ್ತಿಕೊಂಡು ಸಂಜಯ್ ವಾಸವ ಅವರ ಬಳಿಗೆ ಬಂದು ಕೊಲ್ಲುವುದಾಗಿ ಬೆದರಿಕೆ ಹಾಕಿದರು. ದೂರುದಾರರು ಹೇಗೋ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು ಎಂದು ಅದು ಹೇಳಿದೆ.
ಶಾಸಕರು ಕಚೇರಿಯಲ್ಲಿ ಇರಿಸಲಾಗಿದ್ದ ಕುರ್ಚಿಯನ್ನು ಹಾನಿಗೊಳಿಸಿದ್ದಾರೆ. ಏತನ್ಮಧ್ಯೆ, ಚೈರ್ತ ವಾಸವ ಅವರ ಬಂಧನದ ನಂತರ ದೇಡಿಯಾಪಾಡದಲ್ಲಿ ಉದ್ವಿಗ್ನತೆ ಹೆಚ್ಚಾದಾಗ, ಸ್ಥಳೀಯ ಆಡಳಿತವು ಕಠಿಣ ಕ್ರಮ ಕೈಗೊಂಡಿದೆ.
- ಬೆಂಗಳೂರಲ್ಲಿ ಇಂದು ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರ ಸಾವು
- ಶಾಲೆಗಳಿಗೆ ಬಾಂಬ್ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ : ಗೃಹಸಚಿವ ಪರಮೇಶ್ವರ
- ನೈರುತ್ಯ ಮುಂಗಾರು ಚೇತರಿಕೆ, ರಾಜ್ಯದ ಹಲವೆಡೆ ಮಳೆ
- 20 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ, ಬೆಚ್ಚಿ ಬಿದ್ದ ದೆಹಲಿ
- ಟಿಆರ್ಎಫ್ನ್ನು ಜಾಗತಿಕ ಭಯೋತ್ಪಾದಕ ಸಂಘಟನೆಗೆ ಎಂದು ಘೋಷಿಸಿದ ಅಮೆರಿಕ ; ಭಾರತ ಸ್ವಾಗತ