ಬೆಂಗಳೂರು,ಡಿ.8- ಗುಜರಾತ್ ವಿಧಾನಸಭೆ ಚುನಾವಣೆ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ಬೀರಲಿದ್ದು, ಜನರು ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ. ನಮ್ಮ ನಿರೀಕ್ಷೆಗೂ ಮೀರಿ ಫಲಿತಾಂಶ ಬಂದಿದೆ. ಹಿಂದಿನ ದಾಖಲೆಯನ್ನು ಅಳಿಸಿ ಹಾಕಿ ಅಭೂತಪೂರ್ವ ಗೆಲುವು ಕಂಡಿದ್ದೇವೆ ಎಂದರು.
ಕಳೆದ ಬಾರಿಗಿಂತಲೂ ನಾವು ಹೆಚ್ಚಿನ ಸ್ಥಾನಗಳನ್ನು ಗೆದ್ದಿದ್ದೇವೆ. ಜನತೆ ಅಭಿವೃದ್ಧಿಗೆ ಗಮನ ಕೊಡುತ್ತಾರೆ ಹೊರತು ಸುಳ್ಳು ಆರೋಪಗಳಿಗಲ್ಲ ಎಂಬುದು ಫಲಿತಾಂಶದಿಂದಲೇ ಸಾಬೀತಾಗಿದೆ ಎಂದು ಹೇಳಿದರು. ಒಂದು ರಾಜ್ಯದಲ್ಲಿ ಸತತವಾಗಿ 7 ಬಾರಿ ಅಧಿಕಾರಕ್ಕೆ ಬರುವುದು ಸುಲಭದ ಮಾತಲ್ಲ. ಅಲ್ಲಿನ ಜನತೆ ಬಿಜೆಪಿ ಮೇಲೆ ನಂಬಿಕೆ ಇಟ್ಟಿರುವುದಕ್ಕೆ ಇಂದಿನ ಫಲಿತಾಂಶವೇ ಸಾಕ್ಷಿ ಎಂದು ಹೇಳಿದರು.
ಕಾಂಗ್ರೆಸ್ ಸೋಲಿಸಲು ಆಮ್‍ಆದ್ಮಿ ಪಕ್ಷಕ್ಕೆ ಬಿಜೆಪಿ ಫಂಡಿಂಗ್ ಮಾಡಿದೆ : ಸಿದ್ದರಾಮಯ್ಯ
ಮತದಾನೋತ್ತರ ಸಮೀಕ್ಷೆಗಳು ಕೂಡ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದವು. ಎಕ್ಸಿಟ್ ಪೋಲ್ ಗಳಲ್ಲಿಯೂ ಇದೇ ಹೇಳಿತ್ತು. ಉತ್ತಮ ಆಡಳಿತ ನೀಡಿದ್ದಕ್ಕೆ ಗುಜರಾತ್‍ನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿದೆ. ಇದಕ್ಕೆ ಆಡಿಪಾಯ ಹಾಕಿದ್ದು ನಮ್ಮ ನೆಚ್ಚಿನ ನಾಯಕ ನರೇಂದ್ರ ಮೋದಿಯವರು. ಹಳೇ ಮತ್ತು ಹೊಸ ಪೀಳಿಗೆಯ ಜನರು ಮೋದಿಯವರ ಆಡಳಿತವನ್ನು ಒಪ್ಪಿಕೊಂಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ದೆಹಲಿಯಲ್ಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ 15 ವರ್ಷ ಆಡಳಿತ ಮಾಡಿರುವುದೇ ದೊಡ್ಡ ಸಾಧನೆ. ಒಂದೊಂದು ವಾರ್ಡ್‍ನಲ್ಲಿ ಒಂದು ರೀತಿ ಸಮಸ್ಯೆ ಇರುತ್ತದೆ, ಮತದಾರರ ಸಂಖ್ಯೆ ಸಹ ಕಡಿಮೆ.
ಮಹಾನಗರ ಪಾಲಿಕೆ ಚುನಾವಣೆಗೂ, ವಿಧಾನಸಭೆ ಚುನಾವಣೆಗೂ ಸಾಕಷ್ಟು ವ್ಯತ್ಯಾಸವಿರುತ್ತದೆ. ಒಂದಕ್ಕೊಂದು ಹೋಲಿಕೆ ಮಾಡುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.
ಗುಜರಾತ್ ಚುನಾವಣೆ ಮೇಲೆ ಪರಿಣಾಮ ಬೀರದ ಮೊರ್ಬಿ ಸೇತುವೆ ದುರಂತ
ಗುಜರಾತ್ ಚುನಾವಣೆ ರಾಜ್ಯದ ಮೇಲೆ ಪರಿಣಾಮ ಬೀರುವುದಿಲ್ಲ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಅವರು ಹಾಗೆಯೇ ಹೇಳಬೇಕು. ಅದುಬಿಟ್ಟು ಬೇರೆ ರೀತಿ ಹೇಳಲು ಹೇಗೆ ಸಾಧ್ಯ..? ವಿಪಕ್ಷಗಳು ಹೇಳಿದ್ದು ಯಾವುದು ನಿಜವಾಗಿದೆ? ಅವರ ಹೇಳಿಕೆಗಳಿಗೆಲ್ಲ ತಲೆಕಡೆಸಿಕೊಳ್ಳಬೇಡಿ ಎಂದರು.
ಗ್ರಾಮ ವಸ್ತಾವ್ಯ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ಇದು ಇನ್ನೂ ಅಂತಿಮವಾಗಿಲ್ಲಿ ಮುಂದಿನ ದಿನಗಳಲ್ಲಿ ನೋಡೋಣ ಎಂದು ಹೇಳಿದರು.
Gujarat assembly election, Karnataka, CM Bommai,