ಅಹಮಾದಾಬಾದ್,ನ.30- ಗುಜರಾತ್ 89 ವಿಧಾನಸಭಾ ಕ್ಷೇತ್ರಗಳಿಗೆ ನಾಳೆ ಮೊದಲ ಹಂತದ ಚುನಾವಣೆ ನಡೆಯಲಿದ್ದು, 788 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಚ್ ಮತ್ತು ಸೌ ರಾಷ್ಟ್ರ ವಲಯದ ಈ ಚುನಾವಣೆ ರಾಜ್ಯ ರಾಜಕಾರಣದಲ್ಲಿ ಮಹತ್ವವೆನಿಸಿದೆ. ಅಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಇಸುಧನ್ ಗಾಡ್ವಿ ಸೇರಿದಂತೆ ಅನೇಕ ಪ್ರಮುಖ ಅಭ್ಯರ್ಥಿಗಳು ಕಣದಲ್ಲಿದ್ದಾರೆ.
2,39,76,760 ಮತದಾರರು ನಾಳೆ ಮತದಾನ ಮಾಡಲಿದ್ದಾರೆ. ಡಿ.5ರಂದು ನಡೆಯುವ 2ನೇ ಹಂತದ ಚುನಾವಣೆಗೆ ಅಬ್ಬರದ ಪ್ರಚಾರದ ಜೊತೆಗೆ ಮೊದಲ ಹಂತಕ್ಕೆ ಚುನಾವಣೆ ನಡೆಯುತ್ತಿದೆ. ಒಟ್ಟು 182 ವಿಧಾನಸಭಾ ಕ್ಷೇತ್ರಗಳ ಪೈಕಿ ಕೇಂದ್ರ ವಲಯದ ಗುಜರಾತ್‍ನ 61 ಸ್ಥಾನಗಳು ಬಿಜೆಪಿ ಪಾಲಿಗೆ ನಿರ್ಣಾಯಕವಾಗಿದೆ.
ಬುಡಕಟ್ಟು ಮತ್ತು ನಗರೀಕರಣದ ಮಿಶ್ರ ಸಂಸ್ಕøತಿ ಹೊಂದಿರುವ ವಲಯದಲ್ಲಿ 2017ರ ಚುನಾವಣೆಯಲ್ಲಿ ಬಿಜೆಪಿ ಪ್ರಾಬಲ್ಯ ಸಾಧಿಸಿತ್ತು. ನಂತರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲೂ ಬಿಜೆಪಿ ನಿರಂತರವಾಗಿ ಮೇಲುಗೈ ಸಾಧಿಸಿದೆ. ಮೊದಲ ಹಂತದ ಚುನಾವಣೆ ನಡೆಯುತ್ತಿರುವ 89 ಕ್ಷೇತ್ರಗಳ ಪೈಕಿ 37 ಕ್ಷೇತ್ರಗಳಲ್ಲಿ ಕಳೆದ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದೆ. ಕಾಂಗ್ರೆಸ್ 22 ಕ್ಷೇತ್ರಗಳಲ್ಲಿ ಗೆದಿತ್ತು. ಇವುಗಳಲ್ಲಿ 10 ಮೀಸಲು ಕ್ಷೇತ್ರಗಳಾಗಿವೆ.
ಲಂಚ ಪಡೆಯುತ್ತಿದ್ದ ಇಬ್ಬರು ಪೊಲೀಸರ ಬಂಧನ
ಈ ಬಾರಿ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಸ್ಪರ್ಧೆ ನಡುವೆ ಅಮ್ ಆದ್ಮಿ ಪೈಪೋಟಿ ನೀಡುತ್ತಿದೆ. ಪ್ರಧಾನಿ ನರೇಂದ್ರಮೋದಿ ಕೇಂದ್ರ ಗೃಹ ಸಚಿವ ಅಮಿತ್ ಷಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಬಿಜೆಪಿ ಪರವಾಗಿ ಪ್ರಚಾರ ನಡೆಸಿದರೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ಹಿರಿಯ ನಾಯಕರು ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದ್ದಾರೆ.
ಭಾರತದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದ : ರಿಷಿ ಸುನಕ್
ಈ ಬಾರಿ ಗಾಂಧಿ ಕುಟುಂಬದ ಯಾರೂ ಗುಜರಾತ್‍ನತ್ತ ತಲೆ ಹಾಕಿಲ್ಲ.ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯಲ್ಲಿ ಮುಂದುವರೆದಿದ್ದಾರೆ. ಸೋನಿಯಾ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಬಳಿಕ ವಿಶ್ರಾಂತಿ ಪಡೆಯುತ್ತಿದ್ದಾರೆ.
ಹೀಗಾಗಿ ಕಾಂಗ್ರೆಸ್ ಅಜಯ್ ಮಕೇನ್, ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಲ್ಹೋಟ್ ಸೇರಿದಂತೆ ಇತರರು ಪ್ರಚಾರ ನಡೆಸಿದ್ದಾರೆ. ಹಮ್ ಆದ್ಮಿ ಪಕ್ಷದ ಅಭ್ಯರ್ಥಿ ಪರವಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಂಚಾಬ್ ಮುಖ್ಯಮಂತ್ರಿ ಭಗವಾನ್ ಮಾನ್ ಸೇರಿದಂತೆ ಅನೇಕರು ಪ್ರಚಾರ ನಡೆಸಿದ್ದಾರೆ.
ವೋಟರ್ ಐಡಿ ಹಗರಣ: ಬಿಬಿಎಂಪಿ ಮುಖ್ಯ ಆಯುಕ್ತರ ಎತ್ತಂಗಡಿ ಸಾಧ್ಯತೆ
ಸತತವಾಗಿ 27 ವರ್ಷಗಳ ಕಾಲ ಗುಜರಾತ್‍ನಲ್ಲಿ ಭಾರೀ ಬಹುಮತದೊಂದಿಗೆ ಅಧಿಕಾರ ಹಿಡಿದಿರುವ ಬಿಜೆಪಿ 6ನೇ ಅವಧಿಗೂ ಸರ್ಕಾರ ರಚಿಸುವ ಉಮೇದಿನಲ್ಲಿದೆ.
Gujarat, Assembly, Election, voting, phase 1, tomorrow,