ಗುಜರಾತ್ ಮೊದಲ ಹಂತದ ಚುನಾವಣೆ : 1362 ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Social Share

ಅಹಮದಾಬಾದ್,ನ.15-ಗುಜರಾತ್‍ನ ವಿಧಾನಸಭೆಗೆ ಮೊದಲ ಹಂತದಲ್ಲಿ ನಡೆಯುತ್ತಿರುವ ಚುನಾವಣೆಯಲ್ಲಿ ಸ್ರ್ಪಧಿಸಲು 1362 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಡಿಸೆಂಬರ್ 1ರಂದು 89 ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದೆ. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಅಹಮದಾಬಾದ್‍ನ ಗಟ್ಲೋಡಿಯ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.

ಅಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಈಸುದನ್ ಘಾದ್ವಿ ಅವರು ದೇವಭೂಮಿ ದ್ವಾರಕ ಜಿಲ್ಲೆಯ ಕಂಬಾಲಿಯ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ನವೆಂಬರ್ 5ರಿಂದ ಶುರುವಾದ ನಾಮಪತ್ರ ಸಲ್ಲಿಕೆಗೆ ನಿನ್ನೆ ಕೊನೆಯ ದಿನವಾಗಿತ್ತು.

ಸರ್ಕಾರ – ಕೆಎಂಎಫ್ ನಡುವೆ ಸಮನ್ವಯ ಕೊರತೆ

ಹಲವು ಗಣ್ಯರು ಪ್ರಥಮ ಹಂತದಲ್ಲಿ ಚುನಾವಣಾ ಕಣದಲ್ಲಿದ್ದಾರೆ. 2ನೇ ಹಂತದಲ್ಲಿ 93 ಕ್ಷೇತ್ರಗಳಿಗೆ ಡಿಸೆಂಬರ್ 5ರಂದು ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ನ.17 ಕೊನೆಯ ದಿನವಾಗಿದೆ.
ಚುನಾವಣೆ ಮುಗಿದ ಬಳಿಕ ಡಿ.8ರಂದು ಮತ ಎಣಿಕೆ ನಡೆಯಲಿದೆ.

ಕಾಂಗ್ರೆಸ್ ಟಿಕೆಟ್‍ಗೆ ಅರ್ಜಿ ಸಲ್ಲಿಕೆಯ ಗಡುವು ವಿಸ್ತರಣೆ

Articles You Might Like

Share This Article