Thursday, December 12, 2024
Homeರಾಷ್ಟ್ರೀಯ | Nationalಗುಂಡಿಟ್ಟು ವ್ಯಕ್ತಿ ಹತ್ಯೆ, ಗ್ಯಾಂಗ್‍ವಾರ್ ಸಾಧ್ಯತೆ

ಗುಂಡಿಟ್ಟು ವ್ಯಕ್ತಿ ಹತ್ಯೆ, ಗ್ಯಾಂಗ್‍ವಾರ್ ಸಾಧ್ಯತೆ

ನವದೆಹಲಿ,ಮಾ.10- ಈಶಾನ್ಯ ದಿಲ್ಲಿಯ ಸೀಲಂಪುರ ಪ್ರದೇಶದಲ್ಲಿ ತಡರಾತ್ರಿ ಓರ್ವ ವ್ಯಕ್ತಿಯನ್ನು ಗುಂಡಿಟ್ಟು ಕೊಂದು ಹಾಕಲಾಗಿದೆ. ಈ ಘಟನೆಯಲ್ಲಿ ಮತ್ತೊಬ್ಬ ವ್ಯಕ್ತಿ ಕೂಡ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾತ್ರಿ 8.45ಕ್ಕೆ ಈ ದಾಳಿ ನಡೆದಿದೆ ಎನ್ನಲಾಗಿದೆ. ಅರ್ಬಾಜ್ ಮತ್ತು ಅಬಿದ್‍ಗೆ ಹಲವು ಸುತ್ತು ಗುಂಡು ಹಾರಿಸಲಾಗಿದೆ.

25 ರಿಂದ 30 ವರ್ಷ ವಯಸ್ಸಿನ ಸಂತ್ರಸ್ತರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅರ್ಬಾಜ್ ಸತ್ತಿದ್ದಾರೆ ಎಂದು ಘೋಷಿಸಿದರು ಎಂದು ಅಧಿಕಾರಿ ಹೇಳಿದರು. ಅಬಿದ್ ಅವರನ್ನು ಜಿಟಿಬಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಅವರು ಹೇಳಿದರು. ಕೊಲೆ ಪ್ರಕರಣವನ್ನು ದಾಖಲಿಸಿಕೊಳ್ಳಲಾಗುತ್ತಿದೆ ಎಂದು ಉಪ ಪೊಲೀಸ್ ಆಯುಕ್ತ (ಈಶಾನ್ಯ) ಜಾಯ್ ಟಿರ್ಕಿ ಹೇಳಿದ್ದಾರೆ.

ಅರ್ಬಾಜ್ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದು, ಅಬಿದ್ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅವರು ಹೇಳಿದರು. ಶೂಟರ್‍ಗಳನ್ನು ಗುರುತಿಸಲು ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ವಿಶ್ಲೇಷಿಸಲಾಗುತ್ತಿದೆ ಮತ್ತು ಇತರ ಇನ್‍ಪುಟ್‍ಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅವರು ಹೇಳಿದರು. ಗ್ಯಾಂಗ್ ವಾರ್ ನಡೆಯುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ಮತ್ತೊಬ್ಬ ಅಧಿಕಾರಿ ಹೇಳಿದ್ದಾರೆ.

RELATED ARTICLES

Latest News