Wednesday, February 12, 2025
Homeರಾಜ್ಯಇಬ್ರಾಹಿಂ ಹೇಳಿಕೆ ಬಗ್ಗೆ ಚಿಂತಿಸುವ ಅಗತ್ಯ ಇಲ್ಲ : ಹೆಚ್ಡಿಕೆ

ಇಬ್ರಾಹಿಂ ಹೇಳಿಕೆ ಬಗ್ಗೆ ಚಿಂತಿಸುವ ಅಗತ್ಯ ಇಲ್ಲ : ಹೆಚ್ಡಿಕೆ

ಬೆಂಗಳೂರು, ಅ.17- ನಮ್ಮ ಪಕ್ಷದಲ್ಲಿರುವ ಹಿರಿಯರು ಸೂಕ್ತ ತೀರ್ಮಾನ ಕೈಗೊಳ್ಳಲಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರ ಹೇಳಿಕೆ ಬಗ್ಗೆ ಚಿಂತೆ ಮಾಡುವ ಅಗತ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಬ್ರಾಹಿಂ ಅವರ ಹೇಳಿಕೆ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ.

ಎಲ್ಲವನ್ನು ಸರಿ ಮಾಡುತ್ತೇವೆ ಎಂದರು. ಇಬ್ರಾಹಿಂ ಅವರೇ ಒರ್ಜಿನಲ್ ಜೆಡಿಎಸ್ ಎಂದು ಬೋರ್ಡ್ ಹಾಕಿಕೊಳ್ಳಲಿ. ಅವರು ಏನು ಬೇಕಾದರೂ ಮಾಡಿಕೊಳ್ಳಲಿ. ಅದು ಅವರಿಗೆ ಬಿಟ್ಟ ವಿಚಾರ. ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ಕೇಳಬೇಡಿ. ಅವರು ಫ್ರೀ ಇದ್ದಾರೆ. ಅವರ ಜೊತೆ ಮಾತನಾಡಿಕೊಳ್ಳಿ ಎಂದು ಸುದ್ದಿಗಾರರಿಗೆ ತಿಳಿಸಿದರು.

ವಿದ್ಯೆ ಕೇವಲ ಸರ್ಟಿಫಿಕೇಟ್ ಆಗಿರಬಾರದು, ಸಂಸ್ಕಾರ ಒಳಗೊಂಡಿರಬೇಕು : ಎಚ್‍ಡಿಡಿ

ನಿನ್ನೆ ಇಬ್ರಾಹಿಂ ಅವರು ಪಕ್ಷದ ಚಿಂತನ-ಮಂಥನ ಸಭೆ ನಡೆಸಿ ನಾನೇ ಪಕ್ಷದ ರಾಜ್ಯಾಧ್ಯಕ್ಷ. ನಮ್ಮದೇ ಒರ್ಜಿನಲ್. ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಕ್ಕೆ ತೀವ್ರ ವಿರೋದ ವ್ಯಕ್ತಪಡಿಸಿದರು. ಅಲ್ಲದೆ ಪಕ್ಷದಲ್ಲಿ ಮೈತ್ರಿ ಬಗ್ಗೆ ಚರ್ಚೆಯಾಗದೆ ಕುಮಾರಸ್ವಾಮಿ ಅವರು ಎನ್‍ಡಿಎ ಮೈತ್ರಿಕೂಟ ಸೇರುವ ಘೋಷಣೆ ಮಾಡಿದ್ದಾರೆ ಎಂದು ಆರೋಪಿಸಿದ್ದರು.

RELATED ARTICLES

Latest News