Thursday, June 20, 2024
Homeರಾಜ್ಯಎಚ್‌.ಡಿ.ಕುಮಾರಸ್ವಾಮಿಗೆ ಕೇಂದ್ರ ಸಚಿವ ಸ್ಥಾನ ಫಿಕ್ಸ್..?

ಎಚ್‌.ಡಿ.ಕುಮಾರಸ್ವಾಮಿಗೆ ಕೇಂದ್ರ ಸಚಿವ ಸ್ಥಾನ ಫಿಕ್ಸ್..?

ಬೆಂಗಳೂರು, ಜೂ.6- ಮೂರನೇ ಬಾರಿಗೆ ಲೋಕಸಭೆ ಪ್ರವೇಶಿಸಿರುವ ಜೆಡಿಎಸ್‌‍ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಅವರು ಮೊದಲ ಬಾರಿಗೆ ಕೇಂದ್ರ ಸಚಿವರಾಗುವುದು ಬಹುತೇಕ ಖಚಿತವಾಗಿದೆ.

ಲೋಕಸಭಾ ಚುನಾವಣಾ ಪೂರ್ವದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಎನ್‌ಡಿಎ ಮೈತ್ರಿ ಕೂಟ ಸೇರಿರುವ ಜೆಡಿಎಸ್‌‍ಗೆ ಒಂದು ಸಚಿವ ಸ್ಥಾನ ನೀಡಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿಯಾಗುತ್ತಿದ್ದು, ಅವರ ನೂತನ ಸಂಪುಟದಲ್ಲಿ ಕುಮಾರಸ್ವಾಮಿ ಸಚಿವರಾಗುವುದು ನಿಶ್ಚಿತ ಎಂದು ಜೆಡಿಎಸ್‌‍ ಮೂಲಗಳು ತಿಳಿಸಿವೆ.

ಕನಕಪುರ ಲೋಕಸಭಾ ಕ್ಷೇತ್ರದಿಂದ ಮೊದಲ ಬಾರಿ ಸಂಸದರಾಗಿದ್ದ ಕುಮಾರಸ್ವಾಮಿ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಎರಡನೇ ಬಾರಿ ಲೋಕಸಭೆ ಪ್ರವೇಶ ಮಾಡಿದ್ದರು. ಈಗ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಭಾರೀ ಅಂತರದಿಂದ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿದ್ದಾರೆ.

ಕೆಂದ್ರ ಸರ್ಕಾರ ರಚನೆ ಕುರಿತಂತೆ ನಿನ್ನೆ ನಡೆದ ಎನ್‌ಡಿಎ ಸಭೆಯಲ್ಲಿ ಭಾಗವಹಿಸಿದ್ದ ಕುಮಾರಸ್ವಾಮಿ ಅವರು ನಗರಕ್ಕೆ ಮರಳಿದ್ದಾರೆ. ನಾಳೆ ಮತ್ತೆ ದೆಹಲಿಗೆ ತೆರಳಲಿದ್ದು, ಜೂ.8ರಂದು ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಅವರೊಂದಿಗೆ ಎಷ್ಟು ಮಂದಿ ಸಚಿವರು ಪ್ರಮಾಣ ವಚನ ಸೀಕರಿಸಬೇಕು. ಯಾರ್ಯಾರು ಸಂಪುಟ ಸೇರಬೇಕು. ಯಾವ ಸಚಿವರಿಗೆ ಯಾವ ಖಾತೆ ನೀಡಬೇಕು ಎಂಬ ವಿಚಾರದ ಬಗ್ಗೆ ನಾಳೆ ಎನ್‌ಡಿಎ ನಾಯಕರು ಚರ್ಚೆ ನಡೆಸಿ ನಿರ್ಧಾರ ಮಾಡಲಿದ್ದಾರೆ ಎಂದು ಮೂಲಗಳು ಹೇಳಿವೆ.

ಶನಿವಾರ ನಡೆಯುವ ಪ್ರಮಾಣ ವಚನ ಸಮಾರಂಭದಲ್ಲೇ ಕುಮಾರಸ್ವಾಮಿ ಅವರು ಕೂಡ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

RELATED ARTICLES

Latest News