ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ರದ್ದುಗೊಳಿಸುವಂತೆ ಎಚ್.ವಿಶ್ವನಾಥ್ ಆಗ್ರಹ

Spread the love

ಬೆಂಗಳೂರು,ಮೇ 24- ಪಠ್ಯ ಪುಸ್ತಕಗಳ ಪರಿಷ್ಕರಣೆಗೆ ರಚಿಸಲಾಗಿರುವ ಸಮಿತಿಯನ್ನು ರದ್ದುಗೊಳಿಸುವಂತೆ ಬಿಜೆಪಿಯ ವಿಧಾನಪರಿಷತ್ ಸದಸ್ಯ ಹಾಗೂ ಮಾಜಿ ಶಿಕ್ಷಣ ಸಚಿವ ಅಡುಗೂರು ಎಚ್.ವಿಶ್ವನಾಥ್ ಆಗ್ರಹಿಸಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೋಹಿತ್ ಚಕ್ರತೀರ್ಥ ಅವರ ಅಧ್ಯಕ್ಷತೆಯ ಪಠ್ಯ ಪರಿಕ್ಷಕರಣ ಸಮಿತಿಯನ್ನು ರದ್ದುಗೊಳಿಸಬೇಕು. ಅದರಲ್ಲಿ ಸರಿಯಾದ ಶಿಕ್ಷಣ ತಜ್ಞರಿಲ್ಲ. ಧರ್ಮಾಧಾರಿತವಾಗಿ ಪಠ್ಯಪುಸ್ತಕ ಪರಿಷ್ಕರಣೆ ಸರಿಯಲ್ಲ ಎಂದು ವ್ಯಾಖ್ಯಾನಿಸಿದ್ದಾರೆ.

ಹಿಂದೆ ರಚಿಸಲಾದ ಪಠ್ಯ ಪುಸ್ತಕಗಳು ಸಂಪೂರ್ಣವಾಗಿ ಸರಿಯಿವೆ ಎಂದು ನಾನು ಹೇಳುವುದಿಲ್ಲ. ಅದರಲ್ಲಿಯೂ ತಪ್ಪುಗಳಿರಬಹುದು. ಅವುಗಳನ್ನು ಸರಿಪಡಿಸಲು ಯಾವುದೇ ಅಡ್ಡಿಯಿಲ್ಲ. ಆದರೆ ಈ ವೇಳೆ ನಿಯಮ ಪಾಲನೆ ಅಗತ್ಯ. ನಿಯಮ ಕಡೆಗಣಿಸಿ ರಚಿಸಿರುವ ಸಮಿತಿಯನ್ನು ರದ್ದು ಮಾಡಬೇಕು. ಹೊಸದಾಗಿ ಸಮಿತಿ ರಚಿಸಬೇಕು ಎಂದು ಅವರು ಆಗ್ರಹಿಸಿದರು.

Facebook Comments