Thursday, May 2, 2024
Homeರಾಜ್ಯಹಣದ ಆಮಿಷವೊಡ್ಡಿ ಹಾನಗಲ್ ಪ್ರಕರಣ ಮುಚ್ಚಿಹಾಕಲು ಯತ್ನ

ಹಣದ ಆಮಿಷವೊಡ್ಡಿ ಹಾನಗಲ್ ಪ್ರಕರಣ ಮುಚ್ಚಿಹಾಕಲು ಯತ್ನ

ಹುಬ್ಬಳ್ಳಿ,ಜ.14- ಹಾವೇರಿ ಜಿಲ್ಲೆಯ ಹಾನಗಲ್‍ನಲ್ಲಿ ನಡೆದ ನೈತಿಕ ಪೊಲೀಸ್‍ಗಿರಿ ಪ್ರಕರಣವನ್ನು ಸಂತ್ರಸ್ತರಿಗೆ ಹಣ ಕೊಟ್ಟು ಮುಚ್ಚಿ ಹಾಕುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾನಗಲ್ ಪ್ರಕರಣವನ್ನು ಅಲ್ಲಿನ ಪೊಲೀಸರು ಸಂತ್ರಸ್ತರಿಗೆ ದುಡ್ಡಿನ ಆಮಿಷವೊಡ್ಡಿ ಮುಚ್ಚಿ ಹಾಕಲು ಯತ್ನಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾಳೆ ಹಾವೇರಿಗೆ ಭೇಟಿ ನೀಡುತ್ತಿದ್ದಾರೆ. ಈ ಸಂದರ್ಭದಲ್ಲಿಯಾದರೂ ಎಸ್‍ಐಟಿ ತನಿಖೆಗೆ ಘೋಷಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ತನಿಖೆ ನೆಪದಲ್ಲಿ ಸಂತ್ರಸ್ತೆಯನ್ನು ಶಿರಸಿಗೆ ಕರದೊಯ್ಯಲಾಗುತ್ತಿದೆ. ಬಿಜೆಪಿ ಮಹಿಳಾ ನಿಯೋಗ ಅಲ್ಲಿಗೆ ಭೇಟಿ ಕೊಡುತ್ತಿದ್ದಾರೆಂದು ಈ ರೀತಿ ಮಾಡುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್‍ನವರಿಂದ ನಾವೇನು ಜಾಸ್ತಿ ನಿರೀಕ್ಷೆ ಮಾಡಲು ಸಾಧ್ಯ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಮಮಂದಿರ ವಿಚಾರದಲ್ಲಿ ಮುಖ್ಯಮಂತ್ರಿಗಳು ಯೂಟರ್ನ್ ಹೊಡೆದಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸಿದ್ದರಾಮಯ್ಯ ನವರಿಗೆ ತಡವಾಗಿಯಾದರೂ ಬುದ್ಧಿ ಬಂದಿದೆ. ಅವರ ಹೆಸರಲ್ಲಿಯೇ ರಾಮ ಇದ್ದಾನೆ. ಅಕಾರದ ರಾಜಕಾರಣಕ್ಕಾಗಿ ತಮ್ಮ ಹೆಸರಿನಲ್ಲಿರುವ ರಾಮನನ್ನೇ ಅವರು ಕಡೆಗಣಿಸಿದರು ಎಂದು ವ್ಯಂಗ್ಯವಾಡಿದರು.

ದೇವಸ್ಥಾನದ ಆವರಣವನ್ನು ಸ್ವಚ್ಛಗೊಳಿಸಿದ ಬಿಜೆಪಿ ನಾಯಕರು

ಕೊನೆಗೂ ಸಿದ್ದರಾಮಯ್ಯನವರಿಗೆ ಜ್ಞಾನೋದಯವಾಗಿದೆ. ಜನವರಿ 22ರ ನಂತರ ಅಯೋಧ್ಯೆಗೆ ಹೋಗುವುದಾಗಿ ಹೇಳಿದ್ದರು. ಈಗ ಹೋಗುವುದಿಲ್ಲ ಎನ್ನುತ್ತಿದ್ದಾರೆ. ಅವರ ಆತ್ಮಸಾಕ್ಷಿ ಹೋಗಬೇಕಂತಿದೆ. ಆದರೆ ಹೈಕಮಾಂಡ್ ಬೇಡವೆನ್ನುತ್ತಿದೆ. ಸಿದ್ದರಾಮಯ್ಯ ಗೊಂದಲದಲ್ಲಿ ಸಿಲುಕಿಕೊಂಡಿದ್ದಾರೆ. ಅವರ ಗೊಂದಲಕ್ಕೆ ಇದೇ ಸಾಕ್ಷಿ ಎಂದು ಟೀಕಿಸಿದರು.

RELATED ARTICLES

Latest News