Sunday, April 28, 2024
Homeರಾಜಕೀಯರಾಜ್ಯ ಸರ್ಕಾರ ದ್ವಿಮುಖ ನೀತಿ ಅನುಸರಿಸುತ್ತಿದೆ : ಬೊಮ್ಮಾಯಿ

ರಾಜ್ಯ ಸರ್ಕಾರ ದ್ವಿಮುಖ ನೀತಿ ಅನುಸರಿಸುತ್ತಿದೆ : ಬೊಮ್ಮಾಯಿ

ಬೆಂಗಳೂರು,ಜ.12-ಹಾವೇರಿ ನೈತಿಕ ಪೊಲೀಸ್‍ಗಿರಿ ಬಗ್ಗೆ ರಾಜ್ಯ ಸರ್ಕಾರ ದ್ವಿಮುಖ ನೀತಿ ಅನುಸರಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿ ಭಾಗದಲ್ಲಿ ನೈತಿಕ ಪೊಲೀಸ್‍ಗಿರಿ ನಡೆದಾಗ ಮಾತನಾಡುತ್ತಿದ್ದರು. ಈಗ ಹಾವೇರಿ ಪ್ರಕರಣದಲ್ಲಿ ಸಿಎಂ ಯಾವುದೇ ಮಾತನಾಡುತ್ತಿಲ್ಲ. ಇದರಿಂದ ಏನು ಸಂದೇಶ ಹೋಗುತ್ತದೆ ಎಂದು ಪ್ರಶ್ನಿಸಿದರು.

ಯುವತಿಯೇ ತನ್ನ ಮೇಲೆ ಅತ್ಯಾಚಾರವಾಗಿದೆ ಎಂದು ಹೇಳಿಕೆ ನೀಡಿರುವುದನ್ನು ಗಂಭೀರವಾಗಿ ಪರಿಗಣಿಸಿ ಮತ್ತೊಂದು ಬಾರಿ ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.
ಅಲ್ಪ ಸಂಖ್ಯಾತ ಯುವತಿಯ ಮೇಲೆ ಅತ್ಯಾಚಾರವಾಗಿರುವ ಆರೋಪ ಕೇಳಿಬಂದಿದ್ದು, ಆ ಯುವತಿಯ ರಕ್ಷಣೆಗೂ ಮುಂದಾಗುತ್ತಿಲ್ಲ. ರಾಜ್ಯದಲ್ಲಿ ಒಂಬತ್ತು ತಿಂಗಳಲ್ಲಿ ಶೇ.30ರಷ್ಟು ಅಪರಾಧ ಪ್ರಕರಣಗಳು ಹೆಚ್ಚಳವಾಗಿವೆ. ಈ ಗ್ಯಾಂಗ್ ಈ ಹಿಂದೆಯೂ ಇದೇ ರೀತಿಯ ಪ್ರಕರಣದಲ್ಲಿ ಭಾಗಿಯಾಗಿದೆ. ಅದನ್ನು ಮುಚ್ಚಿ ಹಾಕಲಾಗಿದೆ. ಅದನ್ನೂ ಪ್ರತ್ಯೇಕ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು. ಈ ಪ್ರಕರಣಗಳ ಕುರಿತು ತನಿಖೆ ನಡೆಸಲು ಪ್ರತ್ಯೇಕ ತಂಡ ರಚಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯ ಸರ್ಕಾರ ಯಾವುದೇ ಬರಪರಿಹಾರ ಕ್ರಮ ಕೈಗೊಳ್ಳುತ್ತಿಲ್ಲ. ಸಿಎಂ ಆರ್ಥಿಕ ಪರಿಸ್ಥಿತಿ ಸರಿಯಾಗಿದೆ ಎನ್ನುತ್ತಾರೆ. ಹಾಗಿದ್ದರೆ ಬರ ಪರಿಹಾರ, ಶಾಲಾ ಕಟ್ಟಡ ನಿರ್ಮಾಣ, ಅಭಿವೃದ್ಧಿ ಕಾಮಗಾರಿಗಗಳಿಗೆ ಅನುದಾನ ಬಿಡುಗಡೆ ಮಾಡಬೇಕಿತ್ತು. ಕಲ್ಯಾಣ ಕರ್ನಾಟಕ ಭಾಗಕ್ಕೆ 3000 ಕೋಟಿ ರೂ. ಒಪ್ಪಿಗೆ ದೊರೆತಿದ್ದರೂ ಇದುವರೆಗೂ ಬಿಡುಗಡೆ ಮಾಡಿಲ್ಲ ಎಂದು ದೂರಿದರು.

ರಾಮಮಂದಿರ ಉದ್ಘಾಟನೆಗೆ ಯೋಗಿ ಬಿಟ್ಟರೆ ಬೇರೆ ಯಾವ ಸಿಎಂಗೂ ಇಲ್ಲ ಆಹ್ವಾನ

ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತರಲು ಕಾರ್ಯಕರ್ತರನ್ನು ಬಳಸಿಕೊಳ್ಳುತ್ತಿದ್ದಾರೆ. ಅಕಾರಕ್ಕೆ ಬಂದ ಮೇಲೆ ಕಾರ್ಯಕರ್ತರನ್ನು ಮರೆತ್ತಿದ್ದರು. ಅವರು ಆಕ್ರೋಶಗೊಂಡಿದ್ದರಿಂದ ಸಮಾಧಾನಪಡಿಸಲು ಸಂವಿಧಾನ ಬಾಹಿರವಾಗಿ ಈ ಹುದ್ದೆ ನೀಡುತ್ತಿದ್ದು, ಬಹಿರಂಗವಾಗಿಯೇ ಭ್ರಷ್ಟಾಚಾರ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಗ್ಯಾರೆಂಟಿ ಉಸ್ತುವಾರಿಗೆ ಕ್ಯಾಬಿನೆಟ್ ರ್ಯಾಂಕ್ ನೀಡುವುದು ಸಂವಿಧಾನಬಾಹಿರ. ಇದನ್ನು ಸಂಪುಟದ ಸಚಿವರು ಗಂಭೀರವಾಗಿ ಯೋಚಿಸಬೇಕು. ಸಂಪುಟದ ಮರ್ಯಾದೆ ಹಾಳಾಗುತ್ತಿದೆ. ಲೋಕಸಭೆಗೆ ಎಲ್ಲರ ಅಭಿಪ್ರಾಯ ಪಡೆಯಲಾಗಿದೆ. ಬಹುತೇಕ ಸಂಸದರು ಚುನಾವಣೆಯಲ್ಲಿ ಸ್ರ್ಪಧಿಸಲಿದ್ದಾರೆ. ಆಕಾಂಕ್ಷಿಗಳ ಬಗ್ಗೆ ಕೇಂದ್ರ ಸಮಿತಿಯಲ್ಲಿ ಚರ್ಚಿಸಿ ತೀರ್ಮಾನ ಮಾಡುತ್ತಾರೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.

RELATED ARTICLES

Latest News