ಹರ್ ಘರ್ ತಿರಂಗ ಅಭಿಯಾನಕ್ಕೆ ರಾಜ್ಯದೆಲ್ಲೆಡೆ ಅದ್ದೂರಿ ಚಾಲನೆ

Social Share

ಬೆಂಗಳೂರು,ಆ.13-ದೇಶದ ಪ್ರಧಾನಿ ನರೇಂದ್ರ ಮೋದಿ ಅವರು 75ನೇ ಅಮೃತ ಮಹೋತ್ಸವದ ಪ್ರಯುಕ್ತ ಕರೆ ಕೊಟ್ಟಿದ್ದ ಹರ್ ಘರ್ ತಿರಂಗ ಅಭಿಯಾನಕ್ಕೆ ಇಂದು ರಾಜ್ಯದೆಲ್ಲೆಡೆ ಅದ್ದೂರಿಯಾಗಿ ಚಾಲನೆ ಕೊಡಲಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಶಾಲಾ ಮಕ್ಕಳು, ಎನ್ಜಿಒಗಳ ಸೇರಿದಂತೆ ಮತ್ತಿತರ ಸಂಘಟನೆಗಳ ಜೊತೆ ಈ ಅಭಿಯಾನಕ್ಕೆ ಚಾಲನೆ ಕೊಟ್ಟರು.

ವಿಧಾನಸೌಧ ಮುಂಭಾಗ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನಪರಿಷತ್ ಹಂಗಾಮಿ ಸಭಾಪತಿ ರಘುನಾಥ್ ಮಲ್ಕಾಪುರೆ, ಸಚಿವರಾದ ಡಾ.ಕೆ.ಸುಧಾಕರ್, ಕೆ.ಗೋಪಾಲಯ್ಯ, ಭೈರತಿ ಬಸವರಾಜ್ ಸೇರಿದಂತೆ ಸಾವಿರಾರು ಮಕ್ಕಳು ಬಲೂನ್ ಹಾರಿ ಬಿಡುವುದರೊಂದಿಗೆ ಚಾಲನೆ ನೀಡಲಾಯಿತು.

ಮಾಣಿಕ್ ಷಾ ಪರೇಡ್ನಲ್ಲಿ 10 ಮಂದಿ ಯೋಧರು ಪ್ಯಾರಚೂಟ್ ಮೂಲಕ ತಿರಂಗವನ್ನು ಹಾರಿಸಿ ದೇಶಾಭಿಮಾನವನ್ನು ಮೆರೆದರು. ಇದಕ್ಕೂ ಮೊದಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರ್.ಟಿ.ನಗರದ ತಮ್ಮ ನಿವಾಸದ ಎದುರು ತ್ರಿವರ್ಣ ಧ್ವಜ ಹಾರಿಸಿದರು. ಧ್ವಜಾರೋಹಣ ಮಾಡಿ ರಾಷ್ಟ್ರಗೀತೆ ಹಾಡಿದರು.

ಆ.13 ರಿಂದ ಆಗಸ್ಟ್ 15ರವರೆಗೆ ಪ್ರಧಾನಿ ಮೋದಿ ಕರೆಯಂತೆ ರಾಜ್ಯದಲ್ಲಿ ಒಂದು ಕೋಟಿ ತಿರಂಗಾ ಹಾರಿಸುವ ಗುರಿ ಹೊಂದಲಾಗಿದೆ. ಅದರಂತೆ ಇಂದು ಬೆಳಗ್ಗೆ ಸಿಎಂ ಸೇರಿದಂತೆ ಬಿಜೆಪಿ ನಾಯಕರು ತಮ್ಮ ಮನೆ ಮುಂದೆ ರಾಷ್ಟ್ರಧ್ವಜ ಹಾರಿಸಿದರು.

ಸಿಎಂ ಯಡಿಯೂರಪ್ಪ ತಮ್ಮ ಕಾವೇರಿ ನಿವಾಸದ ಮುಂದೆ ರಾಷ್ಟ್ರಧ್ವಜ ಹಾರಿಸಿದರೆ, ಸಚಿವ ಆರ್.ಅಶೋಕ್ ಜಾಲಹಳ್ಳಿಯ ಸ್ವಗೃಹದಲ್ಲಿ ಧ್ವಜಾರೋಹಣ ಮಾಡಿ ಸಿಹಿ ವಿತರಿಸಿದರು.ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ವಿ.ಸೋಮಣ್ಣ, ಬೈರತಿ ಬಸವರಾಜ್, ಅಶ್ವತ್ಥ ನಾರಾಯಣ್, ಎಸ್.ಟಿ.ಸೋಮಶೇಖರ್, ಗೋಪಾಲಯ್ಯ ಸೇರಿದಂತೆ ಸಚಿವರು ತಮ್ಮ ತಮ್ಮ ಮನೆಗಳ ಮುಂದೆ ತ್ರಿವರ್ಣ ಧ್ವಜ ಹಾರಿಸಿದರು.

ತಮ್ಮ ಮನೆ ಮುಂದೆ ರಾಷ್ಟ್ರಧ್ವಜ ಹಾರಿಸಿ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇಂದಿನಿಂದ ದೇಶದೆಲ್ಲೆಡೆ ಹರ್ ಘರ್ ತಿರಂಗಾ ನಡೀತಿದೆ. ರಾಜ್ಯದಲ್ಲಿ ಹರ್ ಘರ್ ತಿರಂಗಾ ಯಶಸ್ವಿಗೊಳಿಸಲು ಎಲ್ಲ ಕ್ರಮ ಕೈಗೊಳ್ಳಲಾಗಿದೆ. ಎಲ್ಲ ಗ್ರಾಮ ಪಂಚಾಯಿತಿಗಳಿಗೂ ಧ್ವಜ ವಿತರಣೆ ಮಾಡಲಾಗಿದೆ ಎಂದರು.

ಈಗಾಗಲೇ 1. 8 ಕೋಟಿ ಧ್ವಜಗಳನ್ನು ವಿತರಿಸಿದ್ದೇವೆ. ರಾಜ್ಯದಲ್ಲಿ 1.20 ಕೋಟಿಗೂ ಹೆಚ್ಚು ಕಡೆ ತಿರಂಗಾ ಹಾರಿಸಲಾಗುತ್ತದೆ ಎಂದು ತಿಳಿಸಿದರು.ಇದೇ ವೇಳೆ ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಸಮಾವೇಶ ನಡೆಸುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಮುಂಚೆ ದೊಡ್ಡಬಳ್ಳಾಪುರದಲ್ಲಿ ಸಮಾವೇಶ ರದ್ದು ಮಾಡಿದ್ದೆವು.

ಆದರೆ ಆ ಭಾಗದ ಜನ ಕಳೆದ ಹತ್ತು ಹನ್ನೆರಡು ದಿನಗಳಿಂದ ಒತ್ತಡ ಹಾಕುತ್ತಿದ್ದಾರೆ. ದೊಡ್ಡಬಳ್ಳಾಪುರದಲ್ಲೇ ಸಮಾವೇಶ ನಡೆಸಲು ಜನರ ಒತ್ತಡವಿತ್ತು. ಈ ಹಿನ್ನೆಲೆಯಲ್ಲಿ ಸಮಾವೇಶ ಮಾಡಲು ನಿರ್ಧರಿಸಿದ್ದೇವೆ. ಕೇಂದ್ರದ ನಾಯಕರಿಗೆ ಆಹ್ವಾನ ಕೊಡುವ ಬಗ್ಗೆ ಇವತ್ತು ನಿರ್ಧರಿಸ್ತೇವೆ ಎಂದರು.

Koo App

ಮನೆ ಮನೆಯಲ್ಲೂ ರಾಷ್ಟ್ರ ಧ್ವಜ, ಮನ ಮನದಲ್ಲೂ ರಾಷ್ಟ್ರ ಪ್ರೇಮ. #ಸ್ವಾತಂತ್ರ್ಯದಅಮೃತಮಹೋತ್ಸವ ಅಂಗವಾಗಿ ಸ್ವಗೃಹದಲ್ಲಿಂದು ತ್ರಿವರ್ಣ ಧ್ವಜ ಹಾರಿಸಿ ಗೌರವ ಸಲ್ಲಿಸಲಾಯಿತು. ಎಲ್ಲರೂ #ಮನೆಮನೆಯಲ್ಲೂತ್ರಿವರ್ಣಧ್ವಜ ಅಭಿಯಾನಕ್ಕೆ ಕೈ ಜೋಡಿಸಿ, ಸ್ವಾತಂತ್ರ್ಯದ ಸಂಭ್ರಮವನ್ನು ಅರ್ಥಪೂರ್ಣವಾಗಿ ಆಚರಿಸೋಣ. ಜೈ ಹಿಂದ್‌! @BJP4Karnataka @pmoind @CMOKarnataka @nalinkumarkateel @bsybjp

Dr. Ashwathnarayan C. N. | ಡಾ. ಅಶ್ವಥ್ ನಾರಾಯಣ್ ಸಿ.ಎನ್. (@drashwathnarayan) 13 Aug 2022

Articles You Might Like

Share This Article