ಬೆಂಗಳೂರು, ಅ. 25- ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಗಾಯದ ಸಮಸ್ಯೆಗೆ ಒಳಗಾಗಿರುವ ಟೀಮ್ ಇಂಡಿಯಾದ ಉಪನಾಯಕ ಹಾರ್ದಿಕ್ ಪಾಂಡ್ಯ ಮತ್ತೆರಡು ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಅಕ್ಟೋಬರ್ 19 ರಂದು ಪುಣೆಯ ಎಂಸಿಎ ಕ್ರೀಡಾಂಗಣದಲ್ಲಿ ಬಾಂಗ್ಲಾದೇಶ ವಿರುದ್ಧ ನಡೆದಿದ್ದ ಪಂದ್ಯದಲ್ಲಿ ತಮ್ಮದೇ ಬೌಲಿಂಗ್‍ನಲ್ಲಿಲಿಟನ್ ದಾಸ್ ಹೊಡೆದ ಚೆಂಡನ್ನು ಕಾಲಿನಲ್ಲಿ ತಡೆಯಲು ಹೋದ ಹಾರ್ದಿಕ್ ಪಾಂಡ್ಯ ಪಾದದ ಗಾಯದ ಸಮಸ್ಯೆ ಒಳಗಾಗಿ ಅಂದಿನ ಪಂದ್ಯದಿಂದ ಹೊರಗುಳಿದಿದ್ದರು.
ಅಕ್ಟೋಬರ್ 22 ರಂದು ಧರ್ಮಶಾಲಾದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದಿದ್ದ ಪಂದ್ಯದಿಂದಲೂ ಹೊರಗುಳಿದಿದ್ದ ಹಾರ್ದಿಕ್ ಪಾಂಡ್ಯ, ಸಂಪೂರ್ಣವಾಗಿ ಚೇತರಿಸಿ ಕೊಂಡಿದ್ದು ಅಕ್ಟೋಬರ್ 29 ರಂದು ಲಖನೌದ ಏಕನಾ ಕ್ರೀಡಾಂಗಣದಲ್ಲಿ ಡಿಫೆಂಡಿಂಗ್ ಚಾಂಪಿಯನ್ಸ್ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಪ್ಲೇಯಿಂಗ್ 11ಗೆ ಲಭ್ಯರಾಗಲಿದ್ದಾರೆ ಎಂದು ಹೇಳಲಾಗಿತ್ತು.
ಬಿಜೆಪಿ-ಜೆಡಿಎಸ್ ನಡುವೆ ಕ್ಷೇತ್ರ ಹಂಚಿಕೆ ವಿಳಂಬ
ಆದರೆ ಈಗ ತಾನೇ ಗಾಯದ ಸಮಸ್ಯೆಯಿಂದ ಚೇತರಿಸಿಕೊಳ್ಳುತ್ತಿರುವ ಹಾರ್ದಿಕ್ ಪಾಂಡ್ಯ, ಇಂಗ್ಲೆಂಡ್ ಪಂದ್ಯವು ಸೇರಿದಂತೆ ನವೆಂಬರ್ 2 ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದಿಂದಲೂ ಹೊರಗುಳಿಯಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಸದ್ಯ ಬೆಂಗಳೂರಿನ ಎನ್‍ಸಿಎಯಲ್ಲಿ ಪುನಶ್ಚೇತನ ಶಿಬಿರದಲ್ಲಿರುವ ಹಾರ್ದಿಕ್ ಪಾಂಡ್ಯ, ದಕ್ಷಿಣ ಆಫ್ರಿಕಾ ಹಾಗೂ ನೆದರ್‍ಲ್ಯಾಂಡ್ಸ್ ವಿರುದ್ಧದ ಪಂದ್ಯಕ್ಕೆ ಪಾಂಡ್ಯ ಲಭ್ಯರಾಗಲಿದ್ದಾರೆ.