ಅಂಬಾಲಾ, ಮಾ.4-ಹರಿಯಾಣದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿ, ಇತರ ಹಲವಾರು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಸಾವು-ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ.
ಹರಿಯಾಣದ ಅಂಬಾಲಾದ ಯಮುನಾ ನಗರ-ಪಂಚಕುಲ ಹೆದ್ದಾರಿಯಲ್ಲಿ ಟ್ರೇಲರ್ ಟ್ರಕ್ ಹಿಂಬದಿಯಿಂದ ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ಶಹಜಾದ್‍ಪುರ ಪೊಲೀಸರು ತಿಳಿಸಿದ್ದಾರೆ.
ಟ್ರಕ್ ಚಾಲಕ ನಿದ್ದೆ ಮಂಪರಿನಲ್ಲಿ ಚಲಿಸುತ್ತಿದ್ದ ಬಸ್‍ಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾ.8ಕ್ಕೆ ಆಸ್ಟ್ರೇಲಿಯಾ ಪ್ರಧಾನಿ ಭಾರತ ಭೇಟಿ
ಬಸ್‍ಗೆ ಡಿಕ್ಕಿ ಹೊಡೆದ ಟ್ರಕ್ ರಸ್ತೆಯ ಮತ್ತೊಂದು ಬದಿಗೆ ಉರುಳಿಬಿದ್ದಿದೆ. ಅಪಘಾತ ಸಂಭವಿಸಿದ ಎರಡು ವಾಹನಗಳ ಚಾಲಕರು ಅಪಾಯದಿಂದ ಪಾರಾಗಿದ್ದಾರೆ. ಆದರೆ, ಏಳು ಮಂದಿ ಸಾವನ್ನಪ್ಪಿದ್ದು, ತೀವ್ರವಾಗಿ ಗಾಯಗೊಂಡಿರುವ ನಾಲ್ಕಕ್ಕೂ ಹೆಚ್ಚು ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
Haryana, 7 dead, four, injured, truck, rams, bus,