Thursday, December 12, 2024
Homeರಾಷ್ಟ್ರೀಯ | NationalBIG NEWS : ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್ ಸಾಧನೆ, ಜಮ್ಮು-ಕಾಶ್ಮೀರದಲ್ಲಿ ಮೈತ್ರಿ ಮೇಲುಗೈ

BIG NEWS : ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್ ಸಾಧನೆ, ಜಮ್ಮು-ಕಾಶ್ಮೀರದಲ್ಲಿ ಮೈತ್ರಿ ಮೇಲುಗೈ

Haryana Election Result

ನವದೆಹಲಿ,ಅ.8- ಹಲವು ನಾಟಕೀಯ ಬೆಳವಣಿಗೆಗಳನ್ನು ಕಂಡ ಹರಿಯಾಣ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ 3ನೇ ಬಾರಿಗೆ ಅಧಿಕಾರ ಚುಕ್ಕಾಣಿ ಹಿಡಿಯುವ ಸನಿಹದಲ್ಲಿದ್ದು ಆರಂಭದಲ್ಲಿ ಮುನ್ನಡೆ ಕಂಡಿದ್ದ ಕಾಂಗ್ರೆಸ್‍ಗೆ ಭಾರೀ ಮರ್ಮಾಘಾತವಾಗಿದೆ.

ಒಂದು ದಶಕದ ನಂತರ ಸಂವಿಧಾನದ 370ನೇ ವಿಶೇಷ ಕಾಯ್ದೆ ರದ್ದುಪಡಿಸಿದ ನಂತರ ಮೊದಲ ಬಾರಿಗೆ ನಡೆದ ಜಮ್ಮುಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಎನ್‍ಸಿಪಿ-ಕಾಂಗ್ರೆಸ್ ಇಂಡಿಯಾ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚನೆ ಮಾಡಲಿದೆ.

ಹರಿಯಾಣದ ಒಟ್ಟು 90 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 50, ಕಾಂಗ್ರೆಸ್ 34, ಐಎನ್‍ಎಲ್‍ಡಿ 2 ಹಾಗೂ ಇತರರು 4 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಅದೇ ರೀತಿ ಜಮ್ಮುಕಾಶ್ಮೀರದ ಒಟ್ಟು 90 ವಿಧಾನಸಭಾ ಕ್ಷೇತ್ರಗಳಲ್ಲಿ ಎನ್‍ಸಿ-ಕಾಂಗ್ರೆಸ್ ಇಂಡಿಯಾ ಮೈತ್ರಿಕೂಟ 52, ಬಿಜೆಪಿ 27, ಪಿಡಿಪಿ 2 ಹಾಗೂ ಇತರರು 8 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಎರಡೂ ರಾಜ್ಯಗಳಲ್ಲಿ ಸರ್ಕಾರ ರಚನೆಗೆ ತೀವ್ರ ಕಸರತ್ತು ಆರಂಭವಾಗಿದ್ದು, ಗೆದ್ದಿರುವ ಶಾಸಕರನ್ನು ತಕ್ಷಣವೇ ರಾಜಧಾನಿಗೆ ಆಗಮಿಸುವಂತೆ ಸೂಚಿಸಲಾಗಿದೆ.

ಕುಸ್ತಿಪಟುಗಳ ನಾಡು ಎಂದೇ ಹೆಸರಾಗಿರುವ ಹರಿಯಾಣದಲ್ಲಿ ಮತಗಟ್ಟೆ ಸಮೀಕ್ಷೆಗಳ ಲೆಕ್ಕಾಚಾರವನ್ನೇ ಬುಡಮೇಲು ಮಾಡಿರುವ ಬಿಜೆಪಿ ಮೂರನೇ ಬಾರಿಗೆ ಅ„ಕಾರದ ಗದ್ದುಗೆ ಹಿಡಿಯುವ ಸಾಧ್ಯತೆ ಇದೆ. ಅಧಿಕಾರಕ್ಕೆ ಬಂದೇ ಬರುತ್ತೇವೆ ಎಂಬ ಅತಿಯಾದ ಆತ್ಮವಿಶ್ವಾಸವೇ ಕಾಂಗ್ರೆಸ್‍ಗೆ ಮುಳುವಾಗಿ ಪರಿಣಾಮಿಸಿದೆ.

ಪಕ್ಷದಲ್ಲಿನ ಆಂತರಿಕ ಕಚ್ಚಾಟ, ಮಾಜಿ ಮುಖ್ಯಮಂತ್ರಿ ಭುಪಿಂದರ್ ಸಿಂಗ್ ಹೂಡ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೆವಾಲ, ದಲಿತ ನಾಯಕಿ ಸೆಲ್ಜಾ ನಡುವೆ ಉಂಟಾದ ಮನಸ್ಥಾಪ ಫಲಿತಾಂಶದ ಮೇಲೂ ಬೀರಿದೆ.

ರಾಜ್ಯದಲ್ಲಿ ಪ್ರಭಾವಿಯಾಗಿರುವ ಜಾಟ್ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ಕಾಂಗ್ರೆಸ್ ವಿಫಲವಾಗಿತ್ತು. ಬದಲಿಗೆ ಬಿಜೆಪಿ ಆ ಸಮುದಾಯಕ್ಕೆ ಸೇರಿದವರಿಗೆ ಹೆಚ್ಚಿನ ಪ್ರಮಾಣದಲ್ಲಿ ಟಿಕೆಟ್‍ಗಳನ್ನು ನೀಡಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು ವರವಾಗಿ ಪರಿಣಮಿಸಿದೆ.

ಚುನಾವಣೆಯಲ್ಲಿ ಸೋಲಬಹುದೆಂಬುದನ್ನು ಅರಿತಿದ್ದ ಬಿಜೆಪಿ ಕೆಲವರಿಗೆ ನಿರ್ದಾಕ್ಷಿಣ್ಯವಾಗಿ ಟಿಕೆಟ್ ನೀಡದೆ ಹೊಸ ಮುಖಗಳಿಗೂ ಕೊಟ್ಟಿದ್ದು ಕೈ ಹಿಡಿದಿದೆ. ಆಡಳಿತ ವಿರೋಧಿ ಅಲೆಯನ್ನು ಮೆಟ್ಟಿ ರಾಜ್ಯಲದಲ್ಲಿ 3ನೇ ಬಾರಿಗೆ ಬಿಜೆಪಿ ಅ„ಕಾರ ಹಿಡಿಯುತ್ತಿದ್ದು ಈಗಾಗಲೇ ಚಟುವಟಿಕೆಗಳು ಗರಿಗೆದರಿವೆ. ಈಗಾಗಲೇ ಕೇಂದ್ರ ಸಚಿವ ಧರ್ಮೇಂದ್ರ ಪ್ರದಾನ್ ಅವರು ಮತ್ತೋರ್ವ ಕೇಂದ್ರ ಸಚಿವ ಮನೋಹರ್ ಲಾಲ್ ಕಟ್ಟರ್ ಜೊತೆ ಸರ್ಕಾರ ರಚನೆ ಮಾಡುವ ಸಂಬಂಧ ಮಾತುಕತೆ ನಡೆಸಿದ್ದಾರೆ.

ಎಲ್ಲ ಶಾಸಕರು ತಕ್ಷಣವೇ ರಾಜಧಾನಿ ಚಂಡೀಘಡಕ್ಕೆ ಬರುವಂತೆ ಸೂಚಿಸಲಾಗಿದೆ. ಮೂಲಗಳ ಪ್ರಕಾರ ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹಾಲಿ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರೇ ನೂತನ ಮುಖ್ಯಮಂತ್ರಿಯಾಗುವ ಸಾಧ್ಯತೆ ಇದೆ.

ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾಗುತ್ತಿದ್ದಂತೆ ಕಾಂಗ್ರೆಸ್ ಪ್ರಚಂಡ ಮುನ್ನಡೆ ಸಾಧಿಸಿತ್ತು. 66 ಕ್ಷೇತ್ರಗಳಲ್ಲಿ ಕೈ ಅಭ್ಯರ್ಥಿಗಳು ಮುನ್ನಡೆ ಸಾ„ಸುತ್ತಿದ್ದಂತೆ ದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಲಾಗಿತ್ತು.

10 ಗಂಟೆ ನಂತರ ಪರಿಸ್ಥಿತಿ ಸಂಪೂರ್ಣವಾಗಿ ಉಲ್ಟಾ ಆಯಿತು. ಹಿನ್ನಡೆ ಸಾಧಿಸಿದ್ದ ಬಿಜೆಪಿ ನಿಧಾನವಾಗಿ ಚೇತರಿಸಿಕೊಂಡು ಕಾಂಗ್ರೆಸ್ ಹಿಂದಿಕ್ಕಿ ಮುನ್ನಡೆ ಕಾಯ್ದುಕೊಂಡಿತು.

ಹರಿಯಾಣದಲ್ಲಿ ಪ್ರಬಲವಾಗಿ ಕೇಳಿಬಂದಿದ್ದ ರೈತರ ಪ್ರತಿಭಟನೆ, ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ, ರಾಜ್ಯದಲ್ಲಿ ಹೆಚ್ಚಾಗಿರುವ ಭ್ರಷ್ಟಾಚಾರ, ಬೆಲೆ ಏರಿಕೆ ಇತ್ಯಾದಿ ಕಾರಣಗಳಿಂದ ಬಿಜೆಪಿ ಅ„ಕಾರ ಕಳೆದುಕೊಳ್ಳುವುದು ಖಚಿತ ಎಂದು ಹೇಳಲಾಗಿತ್ತು.

ಸಾಲದಕ್ಕೆ ಮತಗಟ್ಟೆ ಸಮೀಕ್ಷೆಗಳು ಈ ಬಾರಿ ಕಾಂಗ್ರೆಸ್ ಅಧಿಕಾರ ಹಿಡಿಯಲಿದ್ದು, ಬಿಜೆಪಿ ಒಂದು ದಶಕದ ನಂತರ ಅಧಿಕಾರ ಕಳೆದುಕೊಳ್ಳಲಿದೆ ಎಂಬ ಭವಿಷ್ಯ ವಾಣಿಯು ಸುಳ್ಳಾಗಿದೆ.

ಕೈಕೊಟ್ಟ ಬಿಜೆಪಿ ಲೆಕ್ಕಾಚಾರ
ಒಂದು ದಶಕದ ಬಳಿಕ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಎನ್‍ಸಿಪಿ-ಕಾಂಗ್ರೆಸ್ ಇಂಡಿಯಾ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಸಜ್ಜಾಗಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ಸಂವಿಧಾನದ 370ನೇ , ಭಯೋತ್ಪಾದನೆ ಚಟುವಟಿಕೆಗಳಿಗೆ ಕಡಿವಾಣ, ರಾಜ್ಯದಲ್ಲಿ ವಿದೇಶಿ ಬಂಡವಾಳ ಹೂಡಿಕೆ, ಪ್ರವಾಸೋದ್ಯಮ ಅಭಿವೃದ್ಧಿ ಹೀಗೆ ಹಲವಾರು ಕಾರಣಗಳಿಂದ ಅ„ಕಾರ ಹಿಡಿಯುವ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ಅಲ್ಲಿನ ಮತದಾರ ಕೈ ಹಿಡಿದಿಲ್ಲ. ಜಮ್ಮು ಪ್ರಾಂತ್ಯದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗಳಿಸಿದ್ದರೆ ಕಾಶ್ಮೀರದಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಮತದಾರ ಜೈ ಎಂದಿದ್ದಾನೆ.

ಈ ಹಿಂದೆ ಜಮ್ಮುಕಾಶ್ಮೀರದಲ್ಲಿ ಹಲವು ಬಾರಿ ಆಡಳಿತ ನಡೆಸಿದ್ದ ಮಾಜಿ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ನೇತೃತ್ವದ ಪಿಡಿಪಿ ಸಂಪೂರ್ಣವಾಗಿ ನೆಲಕಚ್ಚಿದೆ. ರಾಜ್ಯದಲ್ಲಿ ಹಲವು ಬಾರಿ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಗೃಹಸಚಿವ ಅಮಿತ್ ಷಾ ರಣತಂತ್ರ ಮತದಾರರ ಮೇಲೆ ಅಷ್ಟೊಂದು ಪರಿಣಾಮ ಬೀರಿಲ್ಲ. ಮಾಜಿ ಮುಖ್ಯಮಂತ್ರಿ ಸಯ್ಯದ್ ಮುಫ್ತಿ ಪುತ್ರಿ ಇಲ್ತಿಯಾಸ್ ಮುಫ್ತಿ ಪರಾಭವಗೊಂಡಿದ್ದರೆ, ಎನ್‍ಸಿ ಮುಖಂಡ ಒಮರ್ ಅಬ್ದುಲ್ಲಾ ಗೆಲುವು ಸಾಧಿಸಿದ್ದಾರೆ.

RELATED ARTICLES

Latest News