ಹಾಸನ,ಜೂನ್.7-ಕಾಂಪ್‍ನಲ್ಲಿ ಮಧ್ಯಾಹ್ನದ ಊಟ ಮಡಿದ ಸೇನಾ ಯೋಧರು ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಘಟನೆ ಸಕಲೇಶಪುರ ತಾಲ್ಲೂಕಿನ, ಕುಡುಗರಹಳ್ಳಿಯಲ್ಲಿ ನಡೆದಿದೆ. ಸುಮಾರು 35 ಸೈನಿಕರನ್ನು ಸದ್ಯ ಸಕಲೇಶಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿ ಸ್ವೀಕರಿಸುತ್ತೇವೆ : ಸಿಎಂ ಸಿದ್ದರಾಮಯ್ಯ
ವಾಹನ ಚಾಲನಾ ತರಬೇತಿಗೆ ಸೈನಿಕ ತಂಡ ಇಲ್ಲಿಗೆ ಬಂದಿತ್ತು ಮದ್ಯಾಹ್ನ ಕ್ಯಾಂಪ್‍ನಲ್ಲೆ ತಯಾರಾದ ಆಹಾರ ಸೇವಿಸಿದ ಬಳಿಕ ಸೈನಿಕರು ವಾಂತಿ ಮಾಡಿಕೊಂಡಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ ಸುದ್ದಿ ತಿಳಿದು ಶಾಸಕ ಸಿಮೆಂಟ್ ಮಂಜು ಆಸ್ಪತ್ರೆಗೆ ಭೇಟಿ ನೀಡಿದ್ದು, ಅಸ್ವಸ್ಥಗೊಂಡಿರುವ ಸೈನಿಕರ ಆರೋಗ್ಯ ವಿಚಾರಿಸಿದ್ದಾರೆ.
Hasan, #Meals, #Sick, #Soldiers,