Friday, December 1, 2023
Homeರಾಜ್ಯಹಾಸನಾಂಬೆ ದರ್ಶನೋತ್ಸವಕ್ಕೆ ತೆರೆ

ಹಾಸನಾಂಬೆ ದರ್ಶನೋತ್ಸವಕ್ಕೆ ತೆರೆ

ಹಾಸನ, ನ.15- ಕಳೆದ 12 ದಿನಗಳಿಂದ ಭಕ್ತರಿಗೆ ದರ್ಶನ ನೀಡಿದ್ದ ನಗರದ ಅದೇವತೆ ಹಾಸನಾಂಬಾ ದೇವಾಲದ ಗರ್ಭಗುಡಿಯ ಬಾಗಿಲನ್ನು ಇಂದು ಧಾರ್ಮಿಕ ವಿಧಿವಿಧಾನಗಳೊಂದಿಗೆ ದರ್ಶನೋತ್ಸವಕ್ಕೆ ತೆರೆ ಎಳೆಯಲಾಯಿತು.

ನ.2ರಿಂದ ಆರಂಭವಾಗಿದ್ದ ಹಾಸನಾಂಬ ದರ್ಶನೋತ್ಸವಕ್ಕೆ ಇಂದು ತೆರೆ ಬಿದ್ದಿದ್ದು, ಮತ್ತೆ ದರ್ಶನಕ್ಕೆ ಒಂದು ವರ್ಷ ಕಾಯಬೇಕಾಗಿದೆ. ಈ ಬಾರಿ 13. 5 ಲಕ್ಷ ಭಕ್ತರು ದರ್ಶನ ಪಡೆದು ಪುನೀತರಾಗಿರುವುದು ದಾಖಲೆಯಾಗಿದೆ. ನಿನ್ನೆ ಬೆಳಗ್ಗೆ 6 ಗಂಟೆವರೆಗೂ ವಿಶೇಷ ದರ್ಶನ ಸಾವಿರ ರೂ. ಹಾಗೂ 300 ರೂ. ಮತ್ತು ಲಾಡು ಪ್ರಸಾದ ಮಾರಾಟದಿಂದ 5,79,56,460 ರೂ. ಹಣ ಸಂಗ್ರಹವಾಗಿದ್ದು ದಾಖಲೆಯಾಗಿದೆ.

ಹೂವಿನ ಹಾಸಿಗೆಯಲ್ಲ ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾದಿ

ಇಂದು ಮಧ್ಯಾಹ್ನ 12 ಗಂಟೆ ಸಮಯದಲ್ಲಿ ದೇವಿಗೆ ಅಲಂಕಾರ ಮಾಡಲಾಗಿದ್ದ ಆಭರಣಗಳನ್ನು ತೆಗೆದು ಪೂಜೆ ಸಲ್ಲಿಸಿ ದೀಪ ಹಚ್ಚಿ ಹೂ ನೈವೇದ್ಯವಿಟ್ಟು ವಿವಿಧ ಗಣ್ಯರು ಅಕಾರಿಗಳ ಸಮ್ಮುಖದಲ್ಲಿ ವಿಶ್ವರೂಪ ದರ್ಶನದ ಬಳಿಕ ಗರ್ಭಗುಡಿಯ ಬಾಗಿಲನ್ನು ಮುಚ್ಚಲಾಯಿತು.

ಶಕ್ತಿ ಯೋಜನೆ ಜಾರಿಯಲ್ಲಿರುವುದರಿಂದ ಈ ಬಾರಿ ರಾಜ್ಯದ ವಿವಿಧ ಮೂಲೆಗಳಿಂದ ಮಹಿಳಾ ಭಕ್ತರ ಸಂಖ್ಯೆ ಹೆಚ್ಚಾಗಿದ್ದು, ಪ್ರಾರಂಭದಲ್ಲಿ ಕೆಲ ಗೊಂದಲಗಳಾಗಿದ್ದು, ನೂಕುನುಗ್ಗುಲು ಉಂಟಾಗಿತ್ತು. ಭಕ್ತರನ್ನು ನಿಯಂತ್ರಿಸಲು ಪೊಲೀಸರು, ಭದ್ರತಾ ಸಿಬ್ಬಂದಿಗಳು ಹರಸಾಹಸ ಪಡಬೇಕಾಯಿತು. ಕೊನೆಗೆ ಜಿಲ್ಲಾಧಿಕಾರಿಗಳೇ ದೇವಾಲಯದ ಆವರಣದಲ್ಲಿ ನಿಂತು ಭಕ್ತರಿಗೆ ಮಾರ್ಗದರ್ಶನ ನೀಡುತ್ತ ದೇವಿಯ ಸುಗಮ ದರ್ಶನಕ್ಕೆ ಅನುವು ಮಾಡಿಕೊಟ್ಟಿದ್ದರು.

ಹಾಸನಾಂಬೆ ದರ್ಶನೋತ್ಸವಕ್ಕೆ ವಿದ್ಯುಕ್ತ ತೆರೆ: 14.20 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ

ಹಾಸನಾಂಬ ದರ್ಶನಕ್ಕೆ ಇಂದು ವಿದ್ಯುಕ್ತ ತೆರೆ ಎಳೆಯಲಾಯಿತು. ಇಂದು ಮಧ್ಯಾಹ್ನ 12.30 ಗಂಟೆ ಸುಮಾರಿಗೆ ಗರ್ಭಗುಡಿ ಬಾಗಿಲನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಹಾಗೂ ಅಕಾರಿಗಳ ಸಮ್ಮುಖದಲ್ಲಿ ಮುಚ್ಚಲಾಯಿತು.ಹಾಸನಾಂಬಾ ಜಾತ್ರಾ ಮಹೋತ್ಸವದ ಕಡೇ ದಿನದ ಹಿನ್ನೆಲೆಯಲ್ಲಿ ಅರ್ಚಕರು ಗರ್ಭಗುಡಿ ಬಾಗಿಲು ಮುಚ್ಚುವ ಮುನ್ನ ದೇವರ ಮುಂದೆ ದೀಪ ಹಚ್ಚಿ, ಹೂವು, ನೈವೇದ್ಯ ಇಟ್ಟು ವಿಶೇಷ ಪೂಜೆ ಸಲ್ಲಿಸಿದರು. ಮುಂದಿನ ವರ್ಷ ಬಾಗಿಲು ತೆರೆಯುವವರೆಗೂ ಅರ್ಚಕರು ಇಟ್ಟ ಹೂವು ಬಾಡುವುದಿಲ್ಲ, ದೀಪ ಆರುವುದಿಲ್ಲ ಎಂಬ ಪ್ರತೀತಿ ಇದೆ.

ಗರ್ಭಗುಡಿ ಬಾಗಿಲನ್ನು ನ.2 ರಿಂದ 15ರ ವರೆಗೆ ತೆರೆದಿದ್ದು, 14 ದಿನಗಳಲ್ಲಿ 12 ದಿನ ಮಾತ್ರ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಇದುವರೆಗೆ ಸುಮಾರು 14.20 ಲಕ್ಷ ಭಕ್ತರು ದೇವಿ ದರ್ಶನ ಪಡೆದಿದ್ದಾರೆ ಎಂದು ಅಂದಾಜಿಸಲಾಗಿದೆ. 1000, 300ರೂ. ವಿಶೇಷ ಟಿಕೆಟï, ಲಾಡು ಮಾರಾಟದಿಂದ ದಾಖಲೆಯೆ 6 ಕೋಟಿಗೂ ಅಕ ಆದಾಯ ಬರಲಿದೆ ಎಂದು ಅಂದಾಜಿಸಲಾಗಿದ್ದು , ಹುಂಡಿ ಕಾಣಿಕೆಯಿಂದ ಹೆಚ್ಚು ಆದಾಯ ಬರುವ ನಿರೀಕ್ಷೆ ಇದೆ.

ಧಾರ್ಮಿಕ ವಿ-ವಿಧಾನಗಳೊಂದಿಗೆ ಹಾಸನಾಂಬ ದೇವಿ ಬಾಗಿಲು ಹಾಕಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಅವರು ಹಾಸನಾಂಬೆ ದರ್ಶನೋತ್ಸವ ಅದ್ಧೂರಿಯಾಗಿ ಮುಕ್ತಾಯಗೊಂಡಿದೆ. ಜಿಲ್ಲಾಡಳಿತ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಸಹಕಾರದಿಂದ ಯಶಸ್ವಿ ಕಂಡಿದೆ. 12 ದಿನಗಳ ಸಾರ್ವಜನಿಕ ದರ್ಶನದಲ್ಲಿ ಪ್ರತಿಯೊಬ್ಬ ಭಕ್ತರಿಗೂ ದರ್ಶನ ಪಡೆಯಲು ಉತ್ತಮ ರೀತಿಯ ಅವಕಾಶ ಕಲ್ಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳಿಗೆ ಧನ್ಯವಾದ ತಿಳಿಸುತ್ತೇನೆ ಎಂದರು.

ಮುಂದಿನ ಬಾರಿ 11 ದಿನ ಮಾತ್ರ ದರ್ಶನ: 2014 ಅಕ್ಟೋಬರ್ 23 ರಿಂದ ನವೆಂಬರ್ 3ರ ವರೆಗೆ ಹಾಸನಾಂಬೆ ದೇವಿಯ ದೇವಾಲಯ ಗರ್ಭಗುಡಿಯ ಬಾಗಿಲು ತೆರೆಯಲಿದ್ದು, 11 ದಿನ ಮಾತ್ರ ಸಾರ್ವಜನಿಕ ದರ್ಶನಕ್ಕೆ ಅವಕಾಶವಿರುತ್ತದೆ.

RELATED ARTICLES

Latest News