ಹಾಸನ, ಫೆ.25- ತೀವ್ರ ಕುತೂಹಲ ಕೆರಳಿಸಿರುವ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಗೊಂದಲಕ್ಕೆ ನಾಳೆ ತೆರೆ ಬೀಳುವ ಸಾಧ್ಯತೆಗಳಿವೆ. ನಾಳೆ ಹಾಸನ ಕ್ಷೇತ್ರದ ಮುಖಂಡರ ಸಭೆಯಲ್ಲಿ ಅಭ್ಯರ್ಥಿ ಆಯ್ಕೆ ಅಂತಿಮಗೊಳ್ಳುವ ಸಾಧ್ಯತೆ ಇದ್ದು, ಹೀಗಾಗಿ ನಾಳಿನ ಸಭೆಯತ್ತ ಎಲ್ಲರ ಚಿತ್ತವಿದೆ.
ಹಾಸನ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಗೆಲ್ಲಿಸುವ ಶಕ್ತಿಯಿರೊ ಕಾರ್ಯಕರ್ತರ ಪಡೆಯೇ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಈಗಾಗಲೇ ಹೇಳಿದ್ದಾರೆ. ಅಭ್ಯರ್ಥಿ ಆಯ್ಕೆ ಸಂಬಂಧ ಅಭಿಪ್ರಾಯ ಕೇಳಲು ಪ್ರಮುಖ ಕಾರ್ಯಕರ್ತರ ಸಭೆಯನ್ನು ಬೆಂಗಳೂರಿನ ಜೆಪಿ ನಗರದಲ್ಲಿ ನಾಳೆ ಸಂಜೆ 4 ಗಂಟೆ ಕರೆಯಲಾಗಿದೆ.
ಮಾಜಿ ಶಾಸಕ ದಿ.ಎಚ್.ಎಸ್. ಪ್ರಕಾಶ್ ಅವರ ಪುತ್ರ ಹೆಚ್.ಪಿ.ಸ್ವರೂಪ್ ಪ್ರಕಾಶ್ ಹಾಗೂ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರು ಹಾಸನ ಕ್ಷೇತ್ರ ಟಿಕೆಟ್‍ನ ಪ್ರಬಲ ಆಕಾಂಕ್ಷಿಗಳು.
ಈ ಇಬ್ಬರು ಆಕಾಂಕ್ಷಿಗಳ ಜೊತೆ ಗುರುತಿಸಿಕೊಂಡಿರುವ ಎಲ್ಲಾ ಕಾರ್ಯಕರ್ತರ ಸಭೆಯನ್ನು ಕುಮಾರಸ್ವಾಮಿ ಕರೆದಿದ್ದಾರೆ.
ಸೋನಿಯಾ ಗಾಂಧಿ ರಾಜಕೀಯ ನಿವೃತ್ತಿ..?
ಕಳೆದ ಒಂದು ತಿಂಗಳಿಂದ ನಡೆಯುತ್ತಿವ ಅಭ್ಯರ್ಥಿ ಆಯ್ಕೆ ಗೊಂದಲಕ್ಕೆ ತೆರೆ ಎಳೆಯುವ ಉದ್ದೇಶದಿಂದ ಸಭೆ ನಡೆಸಲಾಗಿತ್ತಿದೆ. ಕಾರ್ಯಕರ್ತರ ಅಭಿಪ್ರಾಯದ ಜತೆಗರ ಹಾಸನ ಕ್ಷೇತ್ರದ ಬಗ್ಗೆ ನಡೆಸಿರುವ ಗೌಪ್ಯ ಸರ್ವೆ ಆಧರಿಸಿ ಟಿಕೇಟ್ ಹಂಚಿಕೆಯಾಗಲಿದೆ ಎಂದು ಹೇಳಲಾಗಿತ್ತಿದೆ.
ಎಲ್ಲರ ಅಭಿಪ್ರಾಯ ಪಡೆದ ಬಳಿಕ ಟಿಕೆಟ್ ಘೋಷಣೆ ಮಾಡಿದರೆ ಎಲ್ಲರೂ ಒಪ್ಪುತ್ತಾರೆ ಎಂಬ ಮಾತುಗಳು ಜೆಡಿಎಸ್ ನಲ್ಲಿ ಕೇಳಿ ಬರುತ್ತಿವೆ. ಎಲ್ಲರ ಅಭಿಪ್ರಾಯ ದಂತೆ ಅಭ್ಯರ್ಥಿ ಆಯ್ಕೆಯಾದರೆ, ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಾರೆ ಎಂಬ ಲೆಕ್ಕಾಚಾರವೂ ಇದೆ.
ಸಭೆಯಲ್ಲಿ ಕಾರ್ಯಕರ್ತರ ಅಭಿಪ್ರಾಯ ಪಡೆಯುವ ಜೊತೆಗೆ ಕ್ಷೇತ್ರದಲ್ಲಿ ಪಕ್ಷದ ಗೆಲುವಿನ ಮಹತ್ವ ಮತ್ತು ಅನಿವಾರ್ಯತೆ ಬಗ್ಗೆಯೂ ಗಂಭೀರ ಚರ್ಚೆಯಾಗಲಿದೆ. ಕೈಬಿಟ್ಟು ಹೋಗಿರುವ ಕ್ಷೇತ್ರವನ್ನು ಮರಳಿ ಪಡೆಯಲು ಯಾವತಂತ್ರ ಅನುಸರಿಸಿದರೆ ಸೂಕ್ತ ಎಂಬ ಬಗ್ಗೆ ಕಾರ್ಯಕರ್ತರಿಗೆ ಮನವರಿಕೆ ಮಾಡಲು ಚಿಂತನೆ ನಡೆಸಲಾಗಿದೆ.
ಮುಗಿಯದ ಮೆಟ್ರೋ ಅವಾಂತರ : ಅದೃಷ್ಟವಶಾತ್ ತಪ್ಪಿದ ಮತ್ತೊಂದು ದುರಂತ
ಪದೇ ಪದೇ ಅಭ್ಯರ್ಥಿ ಆಯ್ಕೆ ಗೊಂದಲದಿಂದ ಪಕ್ಷಕ್ಕೆ ಹಿನ್ನಡೆ ಬಗ್ಗೆ ಅರ್ಥಮಾಡಿಸಿ ಒಮ್ಮತದ ಅಭ್ಯರ್ಥಿ ಘೋಷಣೆ ಮಾಡುವ ಉದ್ದೇಶವಿದೆ. ಈಗಾಗಲೆ ತಾವೇ ಹಾಸನದ ಅಭ್ಯರ್ಥಿ ಎಂಬ ಅಚಲ ವಿಶ್ವಾಸದಿಂದ ಕ್ಷೇತ್ರದಲ್ಲಿ ಭವಾನಿ ರೇವಣ್ಣ ಪ್ರಚಾರ ನಡೆಸುತ್ತಿದ್ದಾರೆ.
ಇನ್ನೊಂದೆಡೆ ಕುಮಾರಸ್ವಾಮಿ ಆಶೀರ್ವಾದ ತಮ್ಮ ಮೇಲಿದೆ ಎನ್ನುವ ನಂಬಿಕೆಯಿಂದ ತಾವೇ ಅಭ್ಯರ್ಥಿ ಆಗುವ ನಿರೀಕ್ಷೆಯಲ್ಲಿ ಸ್ವರೂಪ್ ಪ್ರಕಾಶ್ ಇದ್ದಾರೆ. ಈ ನಡುವೆ ರೇವಣ್ಣರೇ ಅಭ್ಯರ್ಥಿ ಆಗುತ್ತಾರೆ ಎಂಬ ವಿಚಾರದ ಬಗ್ಗೆ ರಾಜಕೀಯವಾಗಿ ಚರ್ಚೆಯಾಗುತ್ತಿದೆ.
Hassan, Assembly Constituency, Bhavani Revanna, Swarup Gowda,