ಹಾಸನ ಅಭ್ಯರ್ಥಿ ಗೊಂದಲ: ಜೆಡಿಎಸ್ ಎರಡನೇ ಹಂತದ ಅಭ್ಯರ್ಥಿಗಳ ಪಟ್ಟಿ ವಿಳಂಬ

Social Share

ಬೆಂಗಳೂರು, ಜ.27-ಗೊಂದಲ ಬಗೆಹರಿಯದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಮೂರು ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆಗಳಿದ್ದು, ಎರಡನೇ ಹಂತದ ಅಭ್ಯರ್ಥಿಗಳ ಪಟ್ಟಿ ಪ್ರಕಟಣೆ ಸಂದರ್ಭದಲ್ಲೂ ಹಾಸನ ಜಿಲ್ಲೆ ಅಭ್ಯರ್ಥಿಗಳ ಆಯ್ಕೆ ಅಂತಿಮವಾಗುವ ಸಾಧ್ಯತೆ ವಿರಳ ಎನ್ನಲಾಗಿದೆ.

ಹಾಸನ, ಅರಸೀಕರೆ ಹಾಗೂ ಅರಕಲಗೂಡು ವಿಧಾನಸಭಾ ಕ್ಷೇತ್ರಗಳಲ್ಲಿ ಇನ್ನೂ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಂಡಿಲ್ಲ. ಹೀಗಾಗಿ ಅಭ್ಯರ್ಥಿ ಅಯ್ಕೆಗೆ ಸಂಬಂಧಿಸಿದಂತೆ ಬಹಿರಂಗವಾಗಿ ಯಾರು ಹೇಳಿಕೆ ನೀಡದಂತೆ ಪಕ್ಷದ ವರಿಷ್ಠರು ಸೂಚಿಸಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ಈ ಮೂರು ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದ ನಾಲ್ಕು ಕ್ಷೇತ್ರಗಳಲ್ಲಿ ಹಾಲಿ ಶಾಸಕರಿಗೆ ಟಿಕೆಟ್ ನೀಡುವುದು ಖಾತ್ರಿಯಾಗಿದೆ. ಗೊಂದಲ ಇಲ್ಲದಿದ್ದರೂ ಮೂರು ಕ್ಷೇತ್ರಗಳಿಂದಾಗಿ ಇಡೀ ಜಿಲ್ಲೆಯ ಅಭ್ಯರ್ಥಿಗಳ ಪಟ್ಟಿ ಪ್ರಕಟಣೆ ವಿಳಂಬ ಮಾಡಲಾಗುತ್ತಿದೆ.

ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ ಟೆಂಡರ್ ಆಹ್ವಾನ

ಮೊದಲ ಹಂತದಲ್ಲಿ 93 ಕ್ಷೇತ್ರಗಳ ಅಭ್ಯರ್ಥಿಗಳನ್ನು ಪ್ರಕಟಿಸಿ ವಿಧಾನಸಭೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಎರಡನೇ ಹಂತದಲ್ಲಿ ಸುಮಾರು 60 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲು ಸಿದ್ಧತೆ ನಡೆಸಲಾಗಿದೆ. ಆದರೂ ಹಾಸನ ಜಿಲ್ಲೆಯ ಅಭ್ಯರ್ಥಿಗಳ ಪಟ್ಟಿ ಬಜೆಟ್ ಅಧಿವೇಶನದ ಬಳಿಕ ಪ್ರಕಟವಾಗುವ ನಿರೀಕ್ಷೆಗಳಿವೆ.

ಅರಸೀಕೆರೆ ಕ್ಷೇತ್ರದ ಶಾಸಕ ಶಿವಲಿಂಗೇಗೌಡ ಅವರು ಪಕ್ಷದ ಚಟುವಟಿಕೆಗಳಿಂದ ದೂರ ಸರಿದು ಅಂತರ ಕಾಯ್ದುಕೊಂಡಿದ್ದಾರೆ. ಪಕ್ಷ ತೊರೆದು ಬೇರೆ ಪಕ್ಷದಿಂದ ಸ್ರ್ಪಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಹೀಗಾಗಿ ಹಾಲಿ ಶಾಸಕರಿಗೆ ಟಿಕೆಟ್ ನೀಡಬೇಕೆ ಅಥವಾ ಹೊಸಬರಿಗೆ ಅವಕಾಶ ಮಾಡಿಕೊಡಬೇಕೆ ಎಂಬ ಗೊಂದಲವಿದೆ.

ಹೊಸಬರಿಗೆ ಟಿಕೆಟ್ ನೀಡಿದರೆ ಹಾಲಿ ಶಾಸಕರನ್ನು ಕಡೆಗಣಿಸಿದರು ಎಂಬ ಆರೋಪ ಎದುರಿಸಬೇಕಾಗುತ್ತದೆ. ಅಂತಿಮ ನಿರ್ಧಾರವನ್ನು ಶಿವಲಿಂಗೇಗೌಡರು ಕೈಗೊಳ್ಳುವ ವರೆಗೂ ಕಾದು ನೋಡುವ ತಂತ್ರವನ್ನು ಜೆಡಿಎಸ್ ವರಿಷ್ಠರು ಅನುಸರಿಸುತ್ತಿದ್ದಾರೆ.

ಕೆಎಂಎಫ್‍ನಲ್ಲಿ ಹುದ್ದೆ ಕೊಡಿಸುವುದಾಗಿ ವಂಚನೆ: ನಿರ್ಮಾಪಕನ ಬಂಧನ

ಅರಕಲಗೂಡು ವಿಧಾನಸಭಾ ಕ್ಷೇತ್ರದ ಶಾಸಕ ಎ.ಟಿ.ರಾಮಸ್ವಾಮಿ ಅವರು ಸಧ್ಯಕ್ಕೆ ತಟಸ್ಥ ನಿಲುವನ್ನು ತಳೆದಿದ್ದಾರೆ. ಅವರೂ ಕೂಡ ಜೆಡಿಎಸ್ ತೊರೆಯಲಿದ್ದಾರೆ ಎಂಬ ಮಾತುಗಳು ಹಲವು ದಿನಗಳಿಂದ ಕೇಳಿಬರುತ್ತಿವೆ. ಆದರೂ ಈತನಕ ಅವರು ಗುಟ್ಟು ಬಿಟ್ಟುಕೊಟ್ಟಿಲ್ಲ. ಈ ಕ್ಷೇತ್ರದಲ್ಲೂ ಹಾಲಿ ಶಾಸಕರಿಗೆ ಕೊಡಬೇಕೆ ಅಥವಾ ಹೊಸಬರಿಗೆ ಮಣೆ ಹಾಕಬೇಕೆ ಎಂಬ ಗೊಂದಲ ನಿವಾರಣೆ ಆಗಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇನ್ನೂ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಮಾಜಿ ಶಾಸಕ ದಿ. ಎಚ್.ಎಸ್.ಪ್ರಕಾಶ್ ಅವರ ಪುತ್ರ ಸ್ವರೂಪ್ ಹಾಗೂ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರು ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಅಲ್ಲದೆ, ಬಾಗೂರು ಮಂಜೇಗೌಡ ಸೇರಿದಂತೆ ಹಲವರು ಜೆಡಿಎಸ್ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.

ಏರ್ ಷೋ ಸಂದರ್ಭದಲ್ಲಿ ಮಾನ ಹರಾಜಾಗದಂತೆ ನೋಡಿಕೊಳ್ಳಲು ಬಿಬಿಎಂಪಿ ಸಿದ್ಧತೆ

ಈ ಕ್ಷೇತ್ರದ ಅಭ್ಯರ್ಥಿಯಾಗಲು ಭವಾನಿ ರೇವಣ್ಣ ಹಾಗೂ ಸ್ವರೂಪ್ ಅವರ ನಡುವೆ ತೀವ್ರ ಪೈಪೋಟಿ ಇದ್ದು, ತೀವ್ರ ಗೊಂದಲವಾಗಿದೆ. ಇನ್ನೂ ಅಭ್ಯರ್ಥಿಯಾರಾಗಲಿದ್ದಾರೆ ಎಂಬುದು ಅಂತಿಮವಾಗಿಲ್ಲ. ಈ ಕ್ಷೇತ್ರದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ತೆಗೆದುಕೊಳ್ಳುವ ನಿರ್ಧಾರವೇ ಅಂತಿಮವಾಗಲಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

Hassan, candidate, JDS, list, delayed,

Articles You Might Like

Share This Article