ಇನ್ನೂ ಗುಟ್ಟಾಗೇ ಉಳಿದ ಹಾಸನ ಜಿಲ್ಲೆಯ ಜೆಡಿಎಸ್ ಅಭ್ಯರ್ಥಿಗಳ ಹೆಸರು

Social Share

ಬೆಂಗಳೂರು, ಡಿ.24- ಮುಂಬರುವ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿ ವಾರ ಕಳೆದರೂ ಹಾಸನ ಜಿಲ್ಲೆಯ ಅಭ್ಯರ್ಥಿಗಳ ಆಯ್ಕೆ ಅಂತಿಮವಾಗಿಲ್ಲ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ 93 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ.

ಮುಂಬರುವ ವಿಧಾನಸಭೆ ಚುನಾವಣೆಗೆ 123 ಕ್ಷೇತ್ರಗಳಲ್ಲಿ ಗೆಲ್ಲಬೇಕೆಂಬ ಗುರಿ ಹೊಂದಿರುವ ಜೆಡಿಎಸ್‍ಗೆ ಅಭ್ಯರ್ಥಿಗಳ ಆಯ್ಕೆಯ ಗೊಂದಲ ಬಗೆಹರಿದಿಲ್ಲ. ಆಯಾ ಕ್ಷೇತ್ರಗಳಲ್ಲಿ ಪಂಚರತ್ನ ಯಾತ್ರೆಯ ಹೊಣೆಯನ್ನು ಅಭ್ಯರ್ಥಿಗಳಿಗೆ ನೀಡಿದ್ದಾರೆ. ಹಾಸನ ಜಿಲ್ಲೆಯ ಅರಸೀಕೆರೆ ಹಾಗೂ ಅರಕಲಗೂಡು ವಿಧಾನಸಭಾ ಕ್ಷೇತ್ರಗಳಲ್ಲಿ ಇನ್ನೂ ಗೊಂದಲ ಮುಂದುವರೆದಿದೆ. ಈ ಮೂರು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ವರಿಷ್ಠರಿಗೆ ತಲೆನೋವಾಗಿ ಪರಿಣಮಿಸಿದೆ.

ಅರಕಲಗೂಡು ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕ ಎ.ಟಿ.ರಾಮಸ್ವಾಮಿ ಅವರಿಗೆ ಟಿಕೆಟ್ ನೀಡಲು ಪಕ್ಷ ಸಿದ್ಧವಾಗಿದೆ. ಆದರೆ, ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎಂಬ ವದಂತಿಗಳು ಕೇಳಿಬರುತ್ತಿವೆ. ಸದ್ಯಕ್ಕೆ ಯಾವುದೇ ಗುಟ್ಟುಬಿಟ್ಟುಕೊಡದೆ ಜೆಡಿಎಸ್‍ನಲ್ಲಿ ರಾಮಸ್ವಾಮಿ ಮುಂದುವರೆಯುತ್ತಿದ್ದಾರೆ. ಆದರೆ, ಅರಸೀಕೆರೆ ಶಾಸಕ ಶಿವಲಿಂಗೇ ಗೌಡರು ಜೆಡಿಎಸ್‍ನಿಂದ ಅಂತರ ಕಾಯ್ದುಕೊಂಡಿದ್ದಾರೆ.

ಬಿಬಿಎಂಪಿ ವಾರ್ಡ್ ಮರುವಿಂಗಡಣೆಗೆ ಕೋಟಿ ಕೋಟಿ ಖರ್ಚು

ಈ ಎರಡು ಕ್ಷೇತ್ರಗಳಲ್ಲಿ ಹಾಲಿ ಶಾಸಕರಿಗೆ ಟಿಕೆಟ್ ನೀಡಿದರೂ ಅವರು ಕೊನೆ ಗಳಿಗೆಯಲ್ಲಿ ಪಕ್ಷದಲ್ಲಿ ಉಳಿಯದೆ ಪಕ್ಷಾಂತರಗೊಳ್ಳಬಹುದು. ಆಗ ಮುಜುಗರ ಅನುಭವಿಸಬೇಕಾಗುತ್ತದೆ. ಒಂದು ವೇಳೆ ಟಿಕೆಟ್ ನೀಡದಿದ್ದರೆ ಹಾಲಿ ಶಾಸಕರಿಗೆ ನೀಡಲಿಲ್ಲ ಎಂಬ ಆರೋಪ ಎದುರಿಸಬೇಕಾಗುತ್ತದೆ.

ಈ ಗೊಂದಲದಿಂದಾಗಿ ಅಭ್ಯರ್ಥಿಗಳ ಆಯ್ಕೆ ಅಂತಿಮವಾಗಿಲ್ಲ. ಎರಡೂ ಕ್ಷೇತ್ರಗಳಲ್ಲೂ ಆಕಾಂಕ್ಷಿಗಳಿದ್ದರೂ ಶಾಸಕರ ನಡೆ ಯಾವ ಕಡೆಗೆ ಎಂಬುದನ್ನು ಎದುರು ನೋಡುತ್ತಿದ್ದಾರೆ. ಹಾಸನ ಕ್ಷೇತ್ರ ಹೊರತುಪಡಿಸಿ ಉಳಿದೆಲ್ಲ ಕ್ಷೇತ್ರಗಳಲ್ಲಿ ಜೆಡಿಎಸ್ ಶಾಸಕರಿದ್ದಾರೆ. ಹಾಸನ ಕ್ಷೇತ್ರಕ್ಕೆ ಮಾಜಿ ಶಾಸಕ ಎಚ್.ಎಸ್.ಪ್ರಕಾಶ್ ಅವರ ಪುತ್ರ ಎಚ್.ಪಿ. ಸ್ವರೂಪ್ ಅವರು ಜೆಡಿಎಸ್ ಟಿಕೆಟ್‍ನ ಪ್ರಬಲ ಆಕಾಂಕ್ಷಿಯಾಗಿದ್ದಾರೆ.

ಸೋಮವಾರದೊಳಗೆ ಬೂತ್ ಮಟ್ಟದ ಏಜೆಂಟರ ಪಟ್ಟಿ ನೀಡುವಂತೆ ಸೂಚನೆ

ಜೊತೆಗೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರಿಗೆ ಟಿಕೆಟ್ ನೀಡುವಂತೆ ಒತ್ತಡ ಹೆಚ್ಚಾಗಿದೆ. ಆದರೆ, ವರಿಷ್ಠರು ಸ್ವರೂಪ್ ಅವರನ್ನು ಕಣಕ್ಕಿಳಿಸಿದರೆ, ಸಹಾನುಭೂತಿಯ ಜತೆಗೆ ಜಿಲ್ಲಾಯ ಎಲ್ಲಾ ಕ್ಷೇತ್ರಗಳಲ್ಲೂ ಪಕ್ಷಕ್ಕೆ ಅನುಕೂಲವಾಗಲಿದೆ. ಇಲ್ಲದಿದ್ದರೆ ಕುಟುಂಬದವರಿಗೆ ಟಿಕೆಟ್ ನೀಡಿದರೂ ಎಂಬ ಅಪವಾದ ಎದುರಿಸಬೇಕಾಗುತ್ತದೆ ಎಂಬ ಲೆಕ್ಕಾಚಾರದಲ್ಲಿ ನಾಯಕರಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

Hassan, district, JDS, assembly elections, candidates,

Articles You Might Like

Share This Article