Friday, May 3, 2024
Homeರಾಜ್ಯಹಾಸನ ಲೋಕಸಭೆ ಸಭೆ ಕ್ಷೇತ್ರದಿಂದ ಶಾಸಕ ಶಿವಲಿಂಗೇಗೌಡ ಕಣಕ್ಕೆ..?

ಹಾಸನ ಲೋಕಸಭೆ ಸಭೆ ಕ್ಷೇತ್ರದಿಂದ ಶಾಸಕ ಶಿವಲಿಂಗೇಗೌಡ ಕಣಕ್ಕೆ..?

ಹಾಸನ,ಜ.15- ಜೆಡಿಎಸ್‍ನ ಭದ್ರಕೋಟೆ ಹಾಸನದಲ್ಲಿ ಲೋಕಸಭೆ ಚುನಾವಣೆಯಲ್ಲಿ ಸಮರ್ಥ ಅಭ್ಯರ್ಥಿಯ ಕೊರತೆ ಎದುರಿಸುತ್ತಿರುವ ಕಾಂಗ್ರೆಸ್ ಹಾಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರನ್ನು ಕಣಕ್ಕಿಳಿಸುವ ಚಿಂತನೆ ನಡೆಸಿದೆ. ಪ್ರತಿ ಅವಧಿಯ ಚುನಾವಣೆಯಲ್ಲೂ ಕಾಂಗ್ರೆಸ್‍ನಲ್ಲಿ ಲೋಕಸಭೆ ಅಭ್ಯರ್ಥಿಗೆ ಸಂಬಂಧಪಟ್ಟಂತೆ ಬೇರೆ ಬೇರೆ ಅಭ್ಯರ್ಥಿಗಳು ಕಣಕ್ಕಿಳಿಯುತ್ತಿರುವುದು ಸಾಮಾನ್ಯವಾಗಿದೆ.

ಹಾಸನ ಲೋಕಸಭೆ ಕ್ಷೇತ್ರದಿಂದ ಪ್ರಸ್ತುತ ಬಿ.ಶಿವರಾಂ, ಜತ್ತೇನಹಳ್ಳಿ ರಾಮಚಂದ್ರ, ರಾಜ್‍ಶೇಖರ್, ಬಿಜೆಪಿಯಲ್ಲಿರುವ ಎ.ಟಿ.ರಾಮಸ್ವಾಮಿ ಸೇರಿದಂತೆ ಹಲವು ನಾಯಕರು ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಆದರೆ, ಸಮರ್ಥ ಅಭ್ಯರ್ಥಿ ಎನ್ನುವುದಾದರೆ ಅವರ್ಯಾರೂ ಜೆಡಿಎಸ್ ನಾಯಕರೆದುರು ಪ್ರಭಲವಾಗಿ ಕಾಣಿಸಿಕೊಳ್ಳುವುದಿಲ್ಲ ಎಂಬ ವಿಶ್ಲೇಷಣೆಗಳಿವೆ. ಹೀಗಾಗಿ ಅರಸೀಕೆರೆ ಕ್ಷೇತ್ರದ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರನ್ನೇ ಕಣಕ್ಕಿಳಿಸುವ ಪ್ರಯತ್ನಗಳಾಗುತ್ತಿವೆ.

ಶಿವಲಿಂಗೇಗೌಡ ಕಳೆದ ವಿಧಾನಸಭೆ ಚುನಾವಣೆಯಲ್ಲಷ್ಟೇ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಪ್ರಬಲ ಪೈಪೋಟಿ ನಡುವೆಯೂ ಅರಸೀಕೆರೆ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಕುರಿತು ಗೌರವಾಧಾರಗಳ ಜೊತೆಯಲ್ಲೇ ಮಾತನಾಡುವ ಶಿವಲಿಂಗೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಎಚ್.ಡಿ.ರೇವಣ್ಣ ವಿರುದ್ಧ ಪದೇಪದೇ ಸಂಘರ್ಷಕ್ಕಿಳಿಯುತ್ತಿದ್ದಾರೆ.

2ನೇ ದಿನದ ನ್ಯಾಯಯಾತ್ರೆಯಲ್ಲಿ ಜನರ ಸಮಸ್ಯೆ ಆಲಿಸಿದ ರಾಹುಲ್

2014 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯೂ ಆಗಿದ್ದ ಎ.ಮಂಜು ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿಯತ್ತ ಮುಖ ಮಾಡಿ ಅಲ್ಲಿಂದ ಮತ್ತೆ ಜೆಡಿಎಸ್ ಸೇರ್ಪಡೆಯಾಗಿ ಈಗ ಶಾಸಕರಾಗಿದ್ದಾರೆ. ಜೆಡಿಎಸ್‍ನಲ್ಲೇ ಇದ್ದ ಎ.ಟಿ.ರಾಮಸ್ವಾಮಿ, ಬಿಜೆಪಿಯಲ್ಲಿದ್ದು ಲೋಕಸಭೆ ಚುನಾವಣೆ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ಮಾಜಿ ಶಾಸಕ ಪ್ರೀತಂ ಗೌಡ ಕೂಡ ಲೋಕಸಭೆ ಚುನಾವಣೆ ಮೇಲೆ ಕಣ್ಣಿಟ್ಟಿದ್ದಾರೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಜೆಡಿಎಸ್‍ನ ಭದ್ರಕೋಟೆಯನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಆದರೆ ಕಾಂಗ್ರೆಸ್‍ನಲ್ಲಿ ಚಾಲ್ತಿಯಲ್ಲಿರುವ ನಾಯಕರು ಗೆಲ್ಲುವ ಸಾಧ್ಯತೆಗಳು ಕ್ಷೀಣವಾಗಿದೆ ಎಂಬ ವಿಶ್ಲೇಷಣೆಗಳಿವೆ. ಇದಕ್ಕೆ ಪುಷ್ಠಿ ಎನ್ನುವಂತೆ ಟಿಕೆಟ್ ಆಕಾಂಕ್ಷಿಯಾಗಿರುವ ಬಿ.ಶಿವರಾಂ ಅವರೇ ಹಾಸನ ಲೋಕಸಭಾ ಕ್ಷೇತ್ರಕ್ಕೆ ಕೆ.ಎಂ.ಶಿವಲಿಂಗೇಗೌಡ ಪ್ರಬಲ ಅಭ್ಯರ್ಥಿ ಎಂದು ಹೇಳಿದ್ದಾರೆ. ಇದು ಪಕ್ಷದಲ್ಲಿ ಸಂಚಲನ ಮೂಡಿಸಿದೆ.

RELATED ARTICLES

Latest News