ಹಾಸನ, ಡಿ.27- ನಗರದ ಕೊರಿಯರ್ ಕಚೇರಿಗೆ ಪಾರ್ಸಲ್ ಬಂದಿದ್ದ ಮಿಕ್ಸಿ ಸ್ಪೋಟಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಅನುಮಾನ ಮೇರೆಗೆ ಇಬ್ಬರನ್ನು ಠಾಣೆಗೆ ಕರೆಸಿ ವಿಚಾರಣೆಗೊಳಪಡಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದರು.
ಸ್ಪೋಟದ ಸ್ಥಳಕ್ಕೆ ಇಂದು ಬೆಳಗ್ಗೆ ಆಗಮಿಸಿದ ಎಸ್ಪಿ ಅವರು ಸ್ಥಳ ಪರಿಶೀಲನೆ ನಡೆಸಿ ನಂತರ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ತಡರಾತ್ರಿ ಮೈಸೂರಿನ ಎಫ್ಎಸ್ಎಲ್ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಮಿಕ್ಸಿ ಸ್ಪೋಟಗೊಂಡ ಸ್ಥಳದಲ್ಲಿ ಸ್ಯಾಂಪಲ್ ಕೂಡ ಸಂಗ್ರಹಿಸಲಾಗಿದೆ. ಸ್ಪೋಟಕ ವಸ್ತುಗಳ ಕಾಯಿದೆಯಡಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಆಂತರಿಕ ಭದ್ರತೆಗೆ ಧಕ್ಕೆಯಾಗುವ ಯಾವುದೇ ಸುಳಿವಿನ ಮಾಹಿತಿ ಇಲ್ಲ ಎಂದು ಅವರು ಹೇಳಿದರು.
ಉತ್ತರ ಕರ್ನಾಟಕ ಭಾಗದ ಹಲವು ರೈತ ನಾಯಕರು ಕಾಂಗ್ರೆಸ್ ಸೇರ್ಪಡೆ
ಹಾಸನದ ಕುವೆಂಪು ನಗರದಲ್ಲಿ ಕೊರಿಯರ್ ಕಚೇರಿಯಲ್ಲಿ ಮಿಕ್ಸಿ ಸ್ಪೋಟಗೊಂಡು ಸಿಬ್ಬಂದಿ ಶಶಿ ಎಂಬುವರು ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಪೋಟದ ತೀವ್ರತೆ ಎಷ್ಟಿತ್ತೆಂದರೆ ಕಚೇರಿಯ ಕಿಟಕಿ ಗಾಜುಗಳ ಪುಡಿಪುಡಿಯಾಗಿವೆ.
235 ಕೋಟಿ ರೂ. ಪರಿಹಾರ ನೀಡಲು DLF ಸಂಸ್ಥೆಗೆ ನೋಟೀಸ್
ಕೋರಿಯರ್ ಕಚೇರಿಯಲ್ಲಿ ಸುತ್ತ ಮುತ್ತಲಿನ ಜನತೆ ಸ್ಪೋಟದಿಂದ ಆತಂಕಕ್ಕೀಡಾಗಿದ್ದಾರೆ. ಕೊರಿಯರ್ ಮಾಡಲಿಕ್ಕೆ ಈ ಮಿಕ್ಸಿ ಪಾರ್ಸಲ್ ಎಲ್ಲಿಂದ ಬಂದಿದೆ. ಯಾರಿಗೆ ಬಂದಿತ್ತು ಎಂಬುದರ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಮಂಗಳೂರಿನ ಕುಕ್ಕರ್ ಬ್ಲಾಸ್ಟ್ ಪ್ರಕರಣದ ಮಾದರಿಯಲ್ಲೇ ಮಿಕ್ಸಿ ಸ್ಪೋಟಗೊಂಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
Hassan, Mixi Blast, courier, shop,