ಬೆಂಗಳೂರು,ಆ.8- ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರವನ್ನು ಹೈಕೋರ್ಟ್ ಆ.29 ಕ್ಕೆ ಮುಂದೂಡಿದೆ. ವಿಚಾರಣೆ ನಡೆಸಿದ ಹೈಕೋರ್ಟ್‍ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಆಕ್ಷೇಪಣೆ ಸಲ್ಲಿಸಲು ವಿಶೇಷ ಅಭಿಯೋಜಕರಿಗೆ ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿದೆ.
ತಮ್ಮ ವಿರುದ್ಧ ದಾಖಲಾಗಿದ್ದ ಎರಡನೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಅವರು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಸಂದರ್ಭದಲ್ಲಿ ಸರ್ಕಾರಿ ಪರ ವಕೀಲರು ವಾದ ಮಂಡಿಸಿ ಮಹಿಳೆಗೆ ಕಿರುಕುಳವಾಗಿದೆ ಎಂದು ಆಕೆಯ ಹೇಳಿಕೆಯನ್ನು ಉಲ್ಲೇಖಿಸಿದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ನಿರೀಕ್ಷಣಾ ಜಾಮೀನು ವಿಚಾರಣೆಯನ್ನು ಆ.29 ಕ್ಕೆ ಮುಂದೂಡಿದೆ.