ರೈತರನ್ನು ಗೌರವದಿಂದ ಕಾಣಲು ದೇವೇಗೌಡರ ಆಗ್ರಹ..

ಬೆಂಗಳೂರು, ನ.26- ದೇಶಕ್ಕೆ ಅನ್ನ ನೀಡುವ ರೈತರನ್ನು ಗೌರವದಿಂದ ಕಾಣಬೇಕೆಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಈ ಸಂಬಂಧ ಟ್ವಿಟ್ ಮಾಡಿರುವ ಅವರು, ಕೇಂದ್ರ ಸರ್ಕಾರದ ಕೃಷಿ ನೀತಿ ವಿರೋಸಿ ರೈತರು ನಡೆಸುತ್ತಿರುವ ದೆಹಲಿ ಚಲೋ ರ‍್ಯಾಲಿತಡೆಯಲು ಪೊಲೀಸ್ ಪಡೆಯನ್ನು ಬಳಕೆ ಮಾಡಿರುವ ಚಿತ್ರಗಳನ್ನು ಗಮನಿಸಿದ್ದೇನೆ.

ಪ್ರತಿಭಟನಾ ರ‍್ಯಾಲಿ ನಡೆಸುತ್ತಿರುವವರಿಗೆ ತೊಂದರೆಯಾಗುತ್ತಿರುವುದನ್ನು ಗಮನಿಸಿದ್ದೇನೆ. ರೈತರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಂಡುಕೊಳ್ಳಬೇಕೇ ಹೊರತು ಪೊಲೀಸ್ ಪಡೆಯಿಂದ ಸಮಸ್ಯೆ ಪರಿಹರಿಸಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.