ಬೆಂಗಳೂರು,ಮಾ.6- ಆರೋಗ್ಯ ತಪಾಸಣೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಇಂದು ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ಕಳೆದ ಐದು ದಿನಗಳ ಹಿಂದೆ ಕಾಲು ನೋವು ಹಾಗೂ ಮಂಡಿ ನೋವು ಹೆಚ್ಚಾದ ಹಿನ್ನಲೆಯಲ್ಲಿ ಆರೋಗ್ಯ ತಪಾಸಣೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಸಾಮಾನ್ಯ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿ ವಿವಿಧ ಪರೀಕ್ಷೆಗಳನ್ನು ಮಾಡಿದ ಬಳಿಕ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಗೆ ದಾಖಲಾದ ದಿನವೇ ಟ್ವೀಟ್ ಮಾಡಿದ ದೇವೇಗೌಡರು, ರೋಟಿನ್ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದರು.
65 ಕಾನೂನುಗಳನ್ನು ರದ್ದುಗೊಳಿಸಲು ಸಂಸತ್‍ನಲ್ಲಿ ಮಸೂದೆ ಮಂಡನೆ
ದೇವೇಗೌಡರು ಆರಾಮಾಗಿದ್ದು, ಊಟ ತಿಂಡಿ ಮಾಡಿಕೊಂಡು ಚೆನ್ನಾಗಿದ್ದಾರೆ. ಯಾವುದೇ ತುರ್ತು ಚಿಕಿತ್ಸೆ ಅಗತ್ಯವಿಲ್ಲ ಎಂದು ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರು ಕೂಡ ಅಂದು ತಿಳಿಸಿದ್ದರು.
ಜೆಡಿಎಸ್‍ನ ಪಂಚರತ್ನ ರಥಯಾತ್ರೆ ಸಮಾರೋಪ ಸಮಾರಂಭ ಮಾ.26ರಂದು ಮೈಸೂರಿನಲ್ಲಿ ನಡೆಯಲಿದೆ.
ಮನೆ ಬಾಗಿಲಿಗೆ ಚಿಕಿತ್ಸೆ, ಪರೀಕ್ಷಾ ಸೌಲಭ್ಯ ತಲುಪಿಸಲು ಸರ್ಕಾರದ ಪ್ರಯತ್ನ: ಮೋದಿ
ಅಂದು ಕುಂಬಳಗೋಡಿನಿಂದ ಮೈಸೂರಿನವರೆಗೆ ತೆರೆದ ವಾಹನದಲ್ಲಿ ಸುಮಾರು 100 ಕಿ.ಮೀ. ಗೌಡರು ರೋಡ್ ಶೋ ಮಾಡುವ ಉದ್ದೇಶವಿದೆ. ಪಕ್ಷದ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದಲೇ ಗೌಡರು ಆಸ್ಪತ್ರೆಗೆ ದಾಖಲಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು ಎಂದು ಹೇಳಲಾಗಿದೆ.
HD Deve Gowda, discharged, hospital,