ಬಿಜೆಪಿಯ ‘ಬಿ’ ಟೀಮ್ ಆರೋಪಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ತಿರುಗೇಟು

ಮದ್ದೂರು, ಮೇ 2- ಕಾಂಗ್ರೆಸ್ ಪಕ್ಷದವರು ಜೆಡಿಎಸ್ ಎಂಬ ಪಕ್ಷವನ್ನು ಬಿಜೆಪಿಯ ಬಿ.ಟೀಂ ಆರೋಪಕ್ಕೆ ಚುನಾವಣೆ ಫಲಿತಾಂಶದ ಬಳಿಕ ಉತ್ತರ ಸಿಗಲಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ತಿರುಗೇಟು ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರವರು, ಜನತಾ ಜಲಧಾರೆ ಕಾರ್ಯಕ್ರಮವನ್ನು ಕಾಂಗ್ರೆಸ್ ಪಕ್ಷದವರು ರಾಜಕೀಯ ಗಿಮಿಕ್ ಎಂದು ಹೇಳುತ್ತಿದ್ದಾರೆ ಆದರೆ ಜನತಾ ಜಲದಾರೆಯು 5 ಅಂಶಗಳ ಯೋಜನೆಯಾಗಿದ್ದು ನೀರಾವರಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಲು ರಾಜ್ಯದ ರೈತರ ಹಿತಕಾಯಲು ರೂಪಿಸಿರುವ ಯೋಜನೆಯಾಗಿದೆ.

ಅಲ್ಲದೆ ಕಾಂಗ್ರೆಸ್ ಪಕ್ಷದವರು ಮೇಕೆದಾಟು ಯೋಜನೆಯ ಕ್ರೆಡಿಟ್ ಪಡೆಯಲು ಯತ್ನಿಸುತ್ತಿದ್ದಾರೆ, ಜನತಾ ಜಲಧಾರೆ ಕಾರ್ಯಕ್ರಮ ಮೇ 13ಕ್ಕೆ ಮುಕ್ತಾಯಗೊಳ್ಳುತ್ತಿದ್ದು ಕೊನೆಯ ದಿನಗಳಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರ ನೇತೃತ್ವದಲ್ಲಿ ನೀರಾವರಿ ಯೋಜನೆಗಳಿಗೆ ಜೆಡಿಎಸ್ ಪಕ್ಷ ಮಾಡುತ್ತಿರುವ ಹೋರಾಟಗಳನ್ನು ಜನರ ಮುಂದಿಡುತ್ತೇವೆ ಎಂದರು.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಸ್ವತಂತ್ರವಾಗಿ ಅಧಿಕಾರಕ್ಕೆ ತರಲು ಹಲವಾರು ಜನಪ್ರಿಯ ಯೋಜನೆಗಳನ್ನು ಮಾಜಿ ಮುಖ್ಯಮಂತ್ರಿ ಹೆಚ್ ,ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ರೂಪಿಸಿದ್ದೇವೆ ಆ ಯೋಜನೆಗಳನ್ನು ಜನರ ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತೇವೆ ಎಂದರು .

ಮದ್ದೂರು ತಾಲೋಕಿನ ಜನಪ್ರಿಯ ಶಾಸಕ ಡಿ.ಸಿ. ತಮ್ಮಣ್ಣ ಮಾಜಿ ಶಾಸಕಿ ಕಲ್ಪನಾ ಸಿದ್ದರಾಜು ,ಜಿಲ್ಲಾ ಜೆಡಿಎಸ್ ಘಟಕದ ಅಧ್ಯಕ್ಷ ಡಿ,ರಮೇಶ್ , ಮುಖಂಡರಾದ ಮಾದನಾಯಕನಹಳ್ಳಿ ರಾಜಣ್ಣ ಮುಂತಾದವರು ಹಾಜರಿದ್ದರು