ಬೆಂಗಳೂರು, ಜ.13- ಮೇಕೆದಾಟು ಯೋಜನೆ ವಿಚಾರ ಸುಪ್ರೀಂಕೋರ್ಟ್‍ನಲ್ಲಿರುವುದರಿಂದ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಲಯದಲ್ಲಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸುವುದು ಸರಿಯಲ್ಲ. ಮೇಕೆದಾಟು ಯೋಜನೆ ಕುರಿತಂತೆ ಎರಡು ರಾಷ್ಟ್ರೀಯ ಪಕ್ಷಗಳು ಜಾಹೀರಾತು ಕೊಟ್ಟಿರುವುದನ್ನು ಗಮನಿಸಿದ್ದೇನೆ. ಆ ಬಗ್ಗೆ ಚರ್ಚಿಸುವುದಿಲ್ಲ.
ಜೆಡಿಎಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದರು. ಕೋವಿಡ್ ಮತ್ತು ಓಮಿಕ್ರಾನ್ ವೇಗವಾಗಿ ಹರಡುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕೈಲಾದ ಪ್ರಯತ್ನ ಮಾಡುತ್ತಿದ್ದಾರೆ. ತಜ್ಞರ ಸಲಹೆ ಆಧರಿಸಿ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದರು.
