ಶಾಸಕರ ಸಾಮೂಹಿಕ ರಾಜೀನಾಮೆ ಬೆನ್ನಲ್ಲೇ ಅಖಾಡಕ್ಕಿಳಿದ ಗೌಡರು..!

ಬೆಂಗಳೂರು, ಜು.6- ದೋಸ್ತಿ ಪಕ್ಷದ ಶಾಸಕರ ರಾಜೀನಾಮೆ ಪರ್ವ ಮುಂದುವರೆದ ಬೆನ್ನಲ್ಲೇ ದೇವೇಗೌಡರು ಅಖಾಡಕ್ಕಿಳಿದಿದ್ದಾರೆ. ತಮ್ಮ ಪಕ್ಷದ ಶಾಸಕರಾದ ಎಚ್.ವಿಶ್ವನಾಥ್, ನಾರಾಯಣಗೌಡ ಹಾಗೂ ಕೆ.ಗೋಪಾಲಯ್ಯ ಅವರು ಕಾಂಗ್ರೆಸ್‍ನ ಅತೃಪ್ತ ಶಾಸಕರೊಂದಿಗೆ ಗುರುತಿಸಿಕೊಂಡು ಸ್ಪೀಕರ್ ಕಚೇರಿಗೆ ತೆರಳಿರುವುದು ದೇವೇಗೌಡರಿಗೆ ಶಾಕ್ ತರಿಸಿದೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅಮೆರಿಕ ಪ್ರವಾಸದ ಹಿನ್ನೆಲೆಯಲ್ಲಿ ದೇವೇಗೌಡರು ದಿಢೀರ್ ಜೆಡಿಎಸ್ ಕಚೇರಿಗೆ ಆಗಮಿಸಿ ಶಾಸಕರ ಸಭೆ ನಡೆಸುತ್ತಿದ್ದಾರೆ.

ಮೂವರು ಶಾಸಕರ ರಾಜೀನಾಮೆಯಿಂದ ಸರ್ಕಾರಕ್ಕೆ ಎದುರಾಗಬಹುದಾದ ಕಂಟಕವನ್ನು ನಿಭಾಯಿಸುವ ಕಾರ್ಯತಂತ್ರದ ಬಗ್ಗೆ ಗೌಡರು ಗಹನವಾದ ಚರ್ಚೆ ನಡೆಸುತ್ತಿದ್ದಾರೆ.

ಏತನ್ಮಧ್ಯೆ ಸರ್ಕಾರ ಉಳಿಸಿಕೊಳ್ಳುವ ಕುರಿತಂತೆ ರಾಹುಲ್ ಗಾಂಧಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೂ ಗೌಡರು ಮಾತುಕತೆ ನಡೆಸುವ ಸಾಧ್ಯತೆಗಳಿವೆ.

Sri Raghav

Admin