Wednesday, November 13, 2024
Homeರಾಜಕೀಯ | Politicsಭ್ರಷ್ಟ ಸರ್ಕಾರ ಪತನಗೊಳ್ಳುವವರೆಗೂ ಹೋರಾಟ : ಅಬ್ಬರಿಸಿದ ಹೆಚ್ಡಿಕೆ

ಭ್ರಷ್ಟ ಸರ್ಕಾರ ಪತನಗೊಳ್ಳುವವರೆಗೂ ಹೋರಾಟ : ಅಬ್ಬರಿಸಿದ ಹೆಚ್ಡಿಕೆ

ಮೈಸೂರು, ಆ.10-ರಾಜ್ಯದ ಕಾಂಗ್ರೆಸ್‌‍ ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು, ಈ ಸರ್ಕಾರ ಸರಿ ಹೋಗಬೇಕು. ಇಲ್ಲದಿದ್ದರೆ ಪತನಗೊಳಿಸುವವರೆಗೂ ಹೋರಾಟ ಮುಂದುವರೆಸುತ್ತೇವೆ ಎಂದು ಹೇಳಿದರು.

ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಮೈಸೂರು ಚಲೋ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌‍ ಸರ್ಕಾರವನ್ನು ಪತನಗೊಳಿಸುತ್ತೇವೆ ಎಂದು ಎಲ್ಲೂ ಹೇಳಿಲ್ಲ ಎಂದರು.ಖಾಕಿ ಚಡ್ಡಿ ಹಾಕಿದ್ದಾರೆಂದು ನನ್ನ ಬಗ್ಗೆ ಹೇಳಿದ್ದಾರೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಚಡ್ಡಿ ಎಲ್ಲವೂ ಕಪ್ಪು ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು..

ರಾಜ್ಯದಲ್ಲಿ 136 ಸ್ಥಾನ ಗೆದ್ದಿದ್ದು, ಸಿದ್ದರಾಮಯ್ಯ ಅವರಿಗೆ ಕಲ್ಲುಬಂಡೆಯಾಗಿ ನಿಂತಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಇದೇ ರೀತಿ ಈ ಹಿಂದೆ ನನಗೂ ಶಿವಕುಮಾರ್‌ ಹೇಳಿದ್ದರು. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌‍​ನವರು 9ನೇ ಸ್ಥಾನವನ್ನು ಹೇಗೆ ಗೆದ್ದಿದ್ದಾರೆ ಗೊತ್ತಿದೆ. ಅದಕ್ಕೆ ನಾನು 8 ಸ್ಥಾನ ಗೆದ್ದಿದ್ದಾರೆ ಎಂದು ಹೇಳುತ್ತೇನೆ ಎಂದರು.

ನನ್ನ ಕಂಡರೆ ಹೊಟ್ಟೆಉರಿ ಎಂಬ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಒಳ್ಳೆಯ ಆಡಳಿತ ನೀಡಿದರೆ ನಮಗೆ ಯಾಕೆ ಹೊಟ್ಟೆಉರಿ. ನನ್ನ ಮೇಲೆ ಒಂದು ಕಪ್ಪುಚುಕ್ಕೆ ಇಲ್ಲವೆಂದು ಮುಖ್ಯಮಂತ್ರಿ ಹೇಳಿದ್ದಾರೆ. ಅಲ್ಲದೆ, ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗದ ಮುಖ್ಯಮಂತ್ರಿ ಅಲ್ಲ, ರಾಜ್ಯದ ಆರೂವರೆ ಕೋಟಿ ಜನರ ಮುಖ್ಯಮಂತ್ರಿ ಎಂದು ವಾಗ್ದಾಳಿ ನಡೆಸಿದರು.

ಕಾನೂನು ಬಾಹಿರವಾಗಿ ಸೈಟ್‌ ಪಡೆದ ಬಗ್ಗೆ ಪ್ರಶ್ನೆ ಮಾಡ್ತಿದ್ದೇವೆ. ಅರಿಶಿಣ ಕುಂಕುಮ ರೀತಿ ಭೂಮಿ ದಾನ ಮಾಡಿದ್ದು ತಪ್ಪಾ ಎಂದಿದ್ದಾರೆ. ಕಾನೂನು ಬದ್ಧವಾಗಿ ಭೂಮಿ ಕೊಟ್ಟಿದ್ದರೆ ನಾವು ಪ್ರಶ್ನೆ ಮಾಡುತ್ತಿರಲಿಲ್ಲ. ಸಿದ್ದರಾಮಯ್ಯಅವರಿಗೆ ಕೊಟ್ಟಿರುವುದು ಸರ್ಕಾರದ ಭೂಮಿ. ಮುಖ್ಯಮಂತ್ರಿ ಮೂಗಿನ ನೇರವಾಗಿ ಕಾನೂನು ಬಾಹಿರ ಚಟುವಟಿಕೆ ನಡೆದಿದೆ. ಈಗಲೂ ನಾನು 14 ನಿವೇಶನ ಮರಳಿಸಲು ಸಿದ್ಧ ಎಂದಿದ್ದಾರಂತೆ. ನಿವೇಶನ ಹಿಂದಿರುಗಿಸಿದರೆ ಕಾನೂನುಬಾಹಿರ ಚಟುವಟಿಕೆ ಮುಚ್ಚಲು ಸಾಧ್ಯವೆ? ಎಂದು ಪ್ರಶ್ನಿಸಿದರು.

RELATED ARTICLES

Latest News