ಕಾಟಾಚಾರಕ್ಕೆ ವಿಧಾನಸಭೆ ಚುನಾವಣೆ ಅಭ್ಯರ್ಥಿಗಳಾಗಬೇಡಿ : ಹೆಚ್‌ಡಿಕೆ

Social Share

ಬೆಂಗಳೂರು, ಡಿ.15- ಕಾಟಾಚಾರಕ್ಕೆ ವಿಧಾನಸಭೆ ಚುನಾವಣೆ ಅಭ್ಯರ್ಥಿಯಾಗುವುದು ಬೇಡ. ಕುಗ್ರಾಮದ ಕಾರ್ಯಕರ್ತನನ್ನು ಕೂಡ ನಿರ್ಲಕ್ಷ್ಯ ಮಾಡಬೇಡಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸೂಚಿಸಿದರು.

ಮಾಗಡಿ ಕ್ಷೇತ್ರದಲ್ಲಿಂದು ಪಂಚರತ್ನ ರಥಯಾತ್ರೆ ಕೈಗೊಳ್ಳುವ ಮುನ್ನ ಜೆಡಿಎಸ್ ಕಚೇರಿಯಲ್ಲಿ ಪಕ್ಷದ ಶಾಸಕರು, ಮುಂದಿನ ವಿಧಾನಸಭೆ ಚುನಾವಣೆಯ ಸಂಭವನೀಯ ಅಭ್ಯರ್ಥಿಗಳ ಸಭೆ ನಡೆಸಿದ ಅವರು ಈ ಸೂಚನೆ ನೀಡಿದರು.
ಕ್ರಿಯಾಶೀಲ ಅಭ್ಯರ್ಥಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ನಿಧಾನಗತಿಯ ಕೆಲ ಅಭ್ಯರ್ಥಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಗೆಲ್ಲುವ ವಿಶ್ವಾಸ ಇಲ್ಲದಿದ್ದರೆ ಕಷ್ಟ. ಇತರೆ ಮುಖಂಡರು, ಕಾರ್ಯಕರ್ತರನ್ನು ನಿರ್ಲಕ್ಷಿಸಿದರೆ ಕಠಿಣ ನಿರ್ಧಾರ ಕೈಕೊಳ್ಳಲು ಹಿಂಜರಿಯಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದರು.

136 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ : ಭವಿಷ್ಯ ನುಡಿದ ಡಿಕೆಶಿ

ರಾಷ್ಟ್ರೀಯ ಪಕ್ಷಗಳ ತಂತ್ರಗಾರಿಕೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟರು. ಕಾಂಗ್ರೆಸ್, ಬಿಜೆಪಿ ಚುನಾವಣಾ ಸಿದ್ಧತೆಯ ಬಗ್ಗೆ ಮಾಹಿತಿ ನೀಡಿ, ಪಕ್ಷ ಗೆಲ್ಲುವ ಎಲ್ಲಾ ಅವಕಾಶವಿದೆ. ಪ್ರತಿ ಅಭ್ಯರ್ಥಿಯೂ ಗೆಲ್ಲಲೇಬೇಕು. ಈಗಾಗಲೇ 19 ವಿಧಾನಸಭೆ ಕ್ಷೇತ್ರಗಳ ಪಂಚರತ್ನ ರಥಯಾತ್ರೆ ಪೂರ್ಣಗೊಳಿಸಲಾಗಿದೆ. ಪಂಚರತ್ನ ರಥಯಾತ್ರೆ ಯಶಸ್ಸಿನ ಬಗ್ಗೆ ಅಭ್ಯರ್ಥಿಗಳಿಗೆ ಅವರು ಮಾಹಿತಿ ನೀಡಿದರು.

hd kumaraswamy, assembly election, jds candidates,

Articles You Might Like

Share This Article