Sunday, May 12, 2024
Homeರಾಜ್ಯಧಮ್ಕಿ, ಬೇಲಿ ಹಾಕುವ, ಸೆಟ್ಲಮೆಂಟ್ ಮಾಡುವ ಸಂಸ್ಕೃತಿ ನಮ್ಮದಲ್ಲ : ಕುಮಾರಸ್ವಾಮಿ

ಧಮ್ಕಿ, ಬೇಲಿ ಹಾಕುವ, ಸೆಟ್ಲಮೆಂಟ್ ಮಾಡುವ ಸಂಸ್ಕೃತಿ ನಮ್ಮದಲ್ಲ : ಕುಮಾರಸ್ವಾಮಿ

ಬೆಂಗಳೂರು,ಫೆ.20- ಧಮ್ಕಿ ಹಾಕುವ, ಸೆಟ್ಲಮೆಂಟ್ ಮಾಡುವ ಸಂಸ್ಕøತಿ ನಮ್ಮದಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧಮ್ಕಿ ಹಾಕಿ ಸಿಕ್ಕ ಸಿಕ್ಕ ಜಾಗದಲ್ಲಿ ಬೇಲಿ ಹಾಕುವುದು ನಮ್ಮ ಜಾಯಮಾನವಲ್ಲ. ನಾನು ಯಾರಿಗೂ ಧಮ್ಕಿ ಹಾಕಿಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯಸಭೆ ಚುನಾವಣೆಯಲ್ಲಿ ಆತ್ಮಸಾಕ್ಷಿಯ ಮತ ಹಾಕುವಂತೆ ಕೇಳುವುದಾಗಿ ಹೇಳಿದ್ದೇವೆ. ಜೆಡಿಎಸ್‍ಗೆ 2 ಮತ ಬರಲಿದೆ ಎಂದು ಹೇಳಿರುವುದು ತಪ್ಪಲ್ಲವೇ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದರು. ಆನೆಯಿಂದ ಮೃತಪಟ್ಟ ಕೇರಳದ ವ್ಯಕ್ತಿಗೆ 15 ಲಕ್ಷ ರೂ. ಪರಿಹಾರ ನೀಡುತ್ತಾರೆ. ನಮ್ಮ ರೈತರಿಗೆ 2 ಸಾವಿರ ರೂ. ಬರ ಪರಿಹಾರ ಕೊಡುತ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರೀಯ ನಾಯಕರು. ಅವರ ಸಲಹೆ ಮೇರೆಗೆ 15 ಲಕ್ಷ ರೂ. ಪರಿಹಾರ ಕೊಟ್ಟಿದ್ದಾರೆ. ಕೇಂದ್ರ ಸರ್ಕಾರದಿಂದ ಪರಿಹಾರವೇ ಬಂದಿಲ್ಲ ಎಂದು ಹೇಳುತ್ತಾರೆ. ಕನ್ನಡಿಗರಿಗೆ ಅನ್ಯಾಯವಾಗಿದೆ ಎನ್ನುತ್ತಾರೆ. ಸಾವಿರ ಸಾರಿ ಸುಳ್ಳು ಹೇಳಿ ನಿಜ ಮಾಡಲು ಹೊರಟಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು.

ಕೇರಳದಲ್ಲಿ ಆನೆ ದಾಳಿಯಿಂದ ಮೃತಪಟ್ಟರೆ 15 ಲಕ್ಷ ರೂ. ಕೊಡುತ್ತಾರೆ. ಆದರೆ ರಾಜ್ಯದಲ್ಲಿ ಆನೆದಾಳಿಯಿಂದ ಮೃತಪಟ್ಟರೆ 5 ಲಕ್ಷ ರೂ. ಕೊಡುತ್ತಾರೆ. ಆ ಹಣಕ್ಕೂ ಕಚೇರಿಗಳಿಗೆ ಅಲೆದಾಡಬೇಕು. ಕನ್ನಡಿಗರಿಗೆ ಅನ್ಯಾಯವಾಗಿದೆ ಎನ್ನುತ್ತಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆಯವರು ಅನ್ಯಾಯದ ವಿರುದ್ಧ ಆಕ್ಷೇಪ ಮಾಡಬೇಕಿತ್ತಲ್ಲವೇ ಎಂದು ಪ್ರಶ್ನಿಸಿದರು. ಕೇಂದ್ರ ಸಮಿತಿ ನೀಡುವ ಶಿಫಾರಸ್ಸಿನಂತೆ ರಾಜ್ಯಗಳಿಗೆ ಹಣ ನೀಡಲಾಗುತ್ತದೆ. ರಾಷ್ಟ್ರದ ಹಲವು ಆರ್ಥಿಕ ತಜ್ಞರ ಜೊತೆ ಮುಕ್ತ ಚರ್ಚೆ ಮಾಡೋಣ ಎಂದು ಹೇಳಿದರು.

ಕಾಂಗ್ರೆಸ್ ಶಾಸಕರನ್ನು ಬೇಟೆಯಾಡುತ್ತಿದೆ ಬಿಜೆಪಿ : ಬಘೇಲ್ ಆರೋಪ

ರಾಮನಗರ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಅಧಿಕಾರಿಗಳನ್ನು ಸರ್ಕಾರ ತನ್ನ ಅವಶ್ಯಕತೆಗೆ ತಕ್ಕಂತೆ ಬಳಸಿಕೊಳ್ಳುತ್ತಿದೆ. ರಾಮನಗರದಲ್ಲಿ ವಕೀಲರ ವಿರುದ್ಧ ಎಫ್‍ಐಆರ್ ಹಾಕಿದ್ದರು. ವಕೀಲರು ಒಂದು ವಾರದಿಂದ ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಸರ್ಕಾರ ಅವರಿಗೆ ಭರವಸೆ ನೀಡಬಹುದಿತ್ತು. ಆದರೆ ವಕೀಲರ ಪ್ರತಿಭಟನೆಗೆ ತಲೆಕೆಡಿಸಿಕೊಳ್ಳಬೇಡಿ ಎಂದು ಹೇಳಿದ್ದಾರೆ. ಪೊಲೀಸ್ ಇಲಾಖೆಯ ವೈಫಲ್ಯದಿಂದ ಈ ಘಟನೆ ನಡೆದಿದೆ. ಕಾನೂನು ಹೋರಾಟ ಮಾಡುವುದಾಗಿ ಅವರಿಗೆ ಭರವಸೆ ನೀಡಿದ್ದೇನೆ ಎಂದರು.

RELATED ARTICLES

Latest News