ಹೊರಟ್ಟಿ ಬಿಜೆಪಿ ಸೇರ್ಪಡೆ ಕುರಿತು ಚರ್ಚೆ ಬೇಡ : ಹೆಚ್‌ಡಿಕೆ

ಬೆಂಗಳೂರು,ಮಾ.29- ವಿಧಾನಪರಿಷತ್‍ನ ಸಭಾಪತಿ ಬಸವರಾಜ ಹೊರಟ್ಟಿ ಅವರು ಬಿಜೆಪಿ ಸೇರಲಿದ್ದಾರೆ ಎಂಬ ವಿಚಾರದ ಬಗ್ಗೆ ಚರ್ಚೆ ಬೇಡ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಕರ ಕ್ಷೇತ್ರದಿಂದ 7 ಬಾರಿ ಗೆಲುವು ಸಾಧಿಸಿರುವ ಹೊರಟ್ಟಿ ಅವರಿಗೆ ಎಲ್ಲಾ ವಿಚಾರವೂ ಗೊತ್ತಿದೆ. ಅವರು ಹಿರಿಯರು. ಅವರ ಬಗ್ಗೆ ಹೆಚ್ಚು ಹೇಳಬೇಕಿಲ್ಲ ಎಂದರು.

ಉಪಹಾರಕ್ಕಾಗಿ ಕರೆದಿದ್ದರು. ಅದಕ್ಕಾಗಿ ಹೋಗಿದ್ದೆ. ಕೆಲವು ರಾಜಕೀಯ ವಿಚಾರಗಳನ್ನು ಚರ್ಚೆ ಮಾಡಿದ್ದೆ. ಅದನ್ನು ಬಹಿರಂಗಪಡಿಸುವುದಿಲ್ಲ ಎಂದು ಹೇಳಿದರು.