ಹರದನಹಳ್ಳಿ ಜನ್ಮಸ್ಥಳ, ಬಿಡದಿ ಕರ್ಮಸ್ಥಳ. ಇದೇ ನನ್ನ ಪಾಲಿನ ಧರ್ಮಸ್ಥಳ: ಎಚ್‍ಡಿಕೆ ಟ್ವೀಟ್

Social Share

ಬೆಂಗಳೂರು, ಜ.4- ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಸಹೋದರರ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹರದನಹಳ್ಳಿ ನನ್ನ ಜನ್ಮಸ್ಥಳ. ಬಿಡದಿ ನನ್ನ ಕರ್ಮಸ್ಥಳ. ಇದೇ ನನ್ನ ಪಾಲಿನ ಧರ್ಮಸ್ಥಳ ಎಂದಿದ್ದಾರೆ.


ಡಿ.ಕೆ.ಶಿವಕುಮಾರ್ ಹೆಸರನ್ನು ಪ್ರಸ್ತಾಪಿಸದೆ ಟ್ವೀಟ್ ಮೂಲಕ ಟೀಕಾಪ್ರಹಾರ ನಡೆಸಿರುವ ಕುಮಾರಸ್ವಾಮಿ, ಈ ಮಣ್ಣಲ್ಲಿಯೇ ನಾನು ಮಣ್ಣಾಗುವೆ ಎಂದು ಈಗಾಗಲೇ ಹೇಳಿದ್ದೇನೆ. ಇದರ ಹೊರತಾಗಿ ರಾಮನಗರಕ್ಕೆ ರಿಯಲ್ ಎಸ್ಟೇಟ್ ಮಾಡಲು ನಾನು ಬಂದವನಲ್ಲ ಎಂದು ತಿರುಗೇಟು ನೀಡಿದ್ದಾರೆ.
ಕಲ್ಲು ಬಂಡೆಗಳನ್ನು ನುಂಗಿ, ಮಣ್ಣು ಬಗೆದು ಪರರಿಗೆ ಬಿಕರಿ ಮಾಡಿಕೊಂಡು ಕೋಟೆ-ಕೊತ್ತಲಗಳನ್ನು ಕಟ್ಟಿಕೊಂಡು ಮೆರೆಯುತ್ತಿರುವ ಡಿಸೈನ್ ವೀರರಿಗೆ ನಮ್ಮ ನೆಲ, ನಮ್ಮ ಜಲ ಎನ್ನುವುದು ಈಗ ನೆನಪಿಗೆ ಬಂದಿದೆ. ಅಭದ್ರತೆ ಅಡಿಪಾಯವನ್ನೇ ಅಲ್ಲಾÁಡಿಸುತ್ತಿದೆ ಅಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಕನಕಪುರ, ರಾಮನಗರ ಯಾರೋಬ್ಬರ ಸ್ವತ್ತಲ್ಲ. ಈ ನೆಲದ ಮಕ್ಕಳು ಎಂದು ಬಡಾಯಿ ಬಿಡುವ ಸಹೋದರರು ಇದೇ ನೆಲವನ್ನು ಹೇಗೆಲ್ಲಾÁ ನುಂಗಿ ನೀರು ಕುಡಿಯುತ್ತಿದ್ದಾರೆ ಎಂಬುದು ನನಗಿಂತ ಇಲ್ಲಿನ ಜನರಿಗೇ ಚೆನ್ನಾಗಿ ಗೊತ್ತು. ಆಟ ಎಂದ ಮೇಲೆ ಅಂತ್ಯವೂ ಇರಬೇಕಲ್ಲವೇ? ಆ ಕ್ಷಣ ಹತ್ತಿರ ಬಂದಿದೆಯೇನೋ ಎಂಬ ಸಂದೇಹ ವ್ಯಕ್ತಪಡಿಸಿದ್ದಾರೆ.
ನಾವು ಹಾಸನದಿಂದ ಬಂದಿದ್ದೇವೆ, ಇಲ್ಲಿನ ಜನ ನಮ್ಮನ್ನು ಮನೆ ಮಕ್ಕಳೆಂದು ಭಾವಿಸಿದ್ದಾರೆ. ನಾವೂ ಹಾಗೆಯೇ ನಡೆದುಕೊಂಡಿದ್ದೇವೆ. ಜನರ ಪ್ರೀತಿ, ಅಭಿಮಾನ, ನಮ್ಮ ದುಡಿಮೆ ಫಲವಾಗಿ ಜಿvಯಲ್ಲಿ ರಾಜಕೀಯ ಮಾಡುತ್ತಿದ್ದೇವೆ. ಜನರೇ ನಮಗೆ ಅಕಾರ ನೀಡಿದ್ದಾರೆ ಎಂದಿದ್ದಾರೆ.
ಹಾದಿ ತಪ್ಪಿದ ರಾಜಕಾರಣ ಬಹಳ ದಿನ ನಡೆಯಲ್ಲ. ಹಣ, ದರ್ಪ, ಧಮ್ಕಿ, ಮಾಕು ಇನ್ನು ಸಾಕು. ಜನ ಕೊಟ್ಟೂ ನೋಡುತ್ತಾರೆ, ಕೆಲವೊಮ್ಮೆ ಬಿಟ್ಟೂ ನೋಡುತ್ತಾರೆ. ಅನುಭವದಿಂದ ಪಾಠ ಕಲಿತರೆ ಒಳ್ಳೆಯದು. ಉಳಿದದ್ದು ಅವರಿಗೇ ಬಿಟ್ಟಿದ್ದು ಎಂದು ಹೇಳಿದ್ದಾರೆ.

Articles You Might Like

Share This Article