Thursday, May 2, 2024
Homeರಾಜ್ಯ64ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿ ಮಾಜಿ ಸಿಎಂ ಹೆಚ್ಡಿಕೆ

64ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿ ಮಾಜಿ ಸಿಎಂ ಹೆಚ್ಡಿಕೆ

ಬೆಂಗಳೂರು, ಡಿ.16- ಜೆಡಿಎಸ್ ರಾಜ್ಯಾಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಇಂದು 64ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ತಮ್ಮ ಜನ್ಮದಿನದ ಸಂದರ್ಭದಲ್ಲಿ ಕುಮಾರಸ್ವಾಮಿ ಅವರು ಸಿಂಗಾಪುರ ಪ್ರವಾಸ ಕೈಗೊಂಡಿದ್ದಾರೆ. ವಿದೇಶ ಪ್ರವಾಸದಲ್ಲಿರುವ ಕುಮಾರಸ್ವಾಮಿ ಅವರಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವು ಗಣ್ಯರು ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

ಪಕ್ಷದ ಕಾರ್ಯಕರ್ತರು, ಮುಖಂಡರು, ಹಿತೈಷಿಗಳು ಯಾರೂ ಹುಟ್ಟುಹಬ್ಬದ ಶುಭಕೋರಲು ತಮ್ಮ ಮನೆಗೆ ಬರುವುದು ಬೇಡ. ಹುಟ್ಟುಹಬ್ಬದ ಸಂದರ್ಭದಲ್ಲಿ ತಾವು ಲಭ್ಯವಿರುವುದಿಲ್ಲ. ತಾವಿದ್ದಲ್ಲಿಂದಲೇ ಶುಭಾಶಯ ಕೋರಿ ಎಂದು ಕುಮಾರಸ್ವಾಮಿ ಅವರು, ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಪೋಸ್ಟ್ ಮಾಡಿ ಮನವಿ ಮಾಡಿದ್ದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಭಗವಂತ ನಿಮಗೆ ಉತ್ತಮ ಆರೋಗ್ಯ, ಆಯುಷ್ಯ ಕರುಣಿಸಿ, ಸುದೀರ್ಘ ಅವಧಿ ಜನಸೇವೆ ಮಾಡುವ ಅವಕಾಶವನ್ನು ನೀಡಲಿ ಎಂದು ಹಾರೈಸಿದ್ದಾರೆ.

ತುಮಕೂರು ನೂತನ ಜಿಲ್ಲಾಧಿಕಾರಿಯಾಗಿ ಶುಭ ಕಲ್ಯಾಣ್ ಅಧಿಕಾರ ಸ್ವೀಕಾರ

ಕುಮಾರಸ್ವಾಮಿ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಎನ್‍ಡಿಎ ಮೈತ್ರಿಕೂಟಕ್ಕೆ ಸೇರ್ಪಡೆಗೊಂಡು ರಾಷ್ಟ್ರ ಹಿತಾಸಕ್ತಿಗಾಗಿ ಕೈ ಜೋಡಿಸಿರುವ ನಿಮಗೆ ದೇವರು ಉತ್ತಮ ಆಯುರಾರೋಗ್ಯ ಕರುಣಿಸಿ ಸಾರ್ವಜನಿಕ ಜೀವನದಲ್ಲಿ ಇನ್ನೂ ಹೆಚ್ಚಿನ ಜನಸೇವೆ ಮಾಡುವ ಶಕ್ತಿಯನ್ನು ಕರುಣಿಸಲಿ ಎಂದು ಹಾರೈಸಿದ್ದಾರೆ.

ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಿ ಅನ್ನದಾನ ಮಾಡಿದರು. ಅಲ್ಲದೆ, ಬೆಂಗಳೂರಿನ ಮಲ್ಲೇಶ್ವರದಲ್ಲಿ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಿದ್ದರು.

ಐಎನ್‍ಎಸ್ ಸುದ್ದಿಸಂಸ್ಥೆಯ ಷೇರು ಖರೀದಿಸಿದ ಅದಾನಿ

ಮಾಜಿ ಸಚಿವ ಸಾ.ರಾ.ಮಹೇಶ್, ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಬೆಂಗಳೂರು ಮಹಾನಗರ ಜೆಡಿಎಸ್ ಅಧ್ಯಕ್ಷ ರಮೇಶ್‍ಗೌಡ ಅವರು ಸಹ ಕುಮಾರಸ್ವಾಮಿ ಅವರೊಂದಿಗೆ ಸಿಂಗಾಪುರ ಪ್ರವಾಸಕ್ಕೆ ತೆರಳಿದ್ದಾರೆ. ಪ್ರವಾಸ ಮುಗಿಸಿ ಕುಮಾರಸ್ವಾಮಿ ಅವರು ಡಿ.18ರಂದು ನಗರಕ್ಕೆ ಮರಳುವ ನಿರೀಕ್ಷೆ ಇದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

RELATED ARTICLES

Latest News