ಎನ್‌ಡಿಎ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳಿದ ಎಚ್‌.ಡಿ.ಕುಮಾರಸ್ವಾಮಿ

ಬೆಂಗಳೂರು,ಜೂ.5- ಎನ್‌ಡಿಎ ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸಲು ಜೆಡಿಎಸ್‌‍ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಇಂದು ಬೆಳಿಗ್ಗೆ ನವದೆಹಲಿಗೆ ತೆರಳಿದರು.ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಭಾಗವಹಿಸುವಂತೆ ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡಲಾಗಿತ್ತು. ಇಂದು ಸಂಜೆ ನವದೆಹಲಿಯಲ್ಲಿ ಎನ್‌ಡಿಎ ಮೈತ್ರಿಕೂಟದ ಮಿತ್ರಪಕ್ಷಗಳ ಸಭೆ ನಡೆಯಲಿದ್ದು, ಲೋಕಸಭಾ ಚುನಾವಣಾ ಫಲಿತಾಂಶ, ಕೇಂದ್ರ ಸರ್ಕಾರ ರಚನೆಯ ರೂಪುರೇಷೆ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಿದ್ದಾರೆ. ಜೆಡಿಎಸ್‌‍, ಎನ್‌ಡಿಎ ಮೈತ್ರಿಕೂಟದ ಭಾಗವಾಗಿರುವುದರಿಂದ ಕುಮಾರಸ್ವಾಮಿಯವರಿಗೆ ಆಹ್ವಾನ ನೀಡಲಾಗಿದೆ. ರಾಜ್ಯದಲ್ಲಿ ಜೆಡಿಎಸ್‌‍ 2 … Continue reading ಎನ್‌ಡಿಎ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳಿದ ಎಚ್‌.ಡಿ.ಕುಮಾರಸ್ವಾಮಿ