ಚನ್ನಪಟ್ಟಣ ಅಭ್ಯರ್ಥಿ ಆಯ್ಕೆಗೆ ಯಾವುದೇ ಆತುರವಿಲ್ಲ : ಹೆಚ್ಡಿಕೆ

ಬೆಂಗಳೂರು,ಜೂ.23-ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮೈತ್ರಿ ಅಭ್ಯರ್ಥಿ ಆಯ್ಕೆ ಮಾಡಲು ಆತುರವಿಲ್ಲ ಎಂದು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಕುಮಾರಸ್ವಾಮಿ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಧಾನವಾಗಿ ಮೈತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡೋಣ. ಸದ್ಯಕ್ಕೆ ಅಭ್ಯರ್ಥಿ ಆಯ್ಕೆ ಮಾಡುವ ಆತುರ ನಮಗಿಲ್ಲ ಎಂದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅವರನ್ನು ಸ್ಪರ್ಧಿಸಬೇಡಿ ಎಂದು ತಡೆದಿರುವವರು ಯಾರು ಎಂದು ಪ್ರಶ್ನಿಸಿದರು. ಚನ್ನಪಟ್ಟಣಕ್ಕೆ ಶಿವಕುಮಾರ್ ಭೇಟಿ ಕೊಡುತ್ತಿರುವ … Continue reading ಚನ್ನಪಟ್ಟಣ ಅಭ್ಯರ್ಥಿ ಆಯ್ಕೆಗೆ ಯಾವುದೇ ಆತುರವಿಲ್ಲ : ಹೆಚ್ಡಿಕೆ