Friday, April 4, 2025
Homeರಾಜ್ಯಪೆನ್‌ಡ್ರೈವ್‌ ವಿಚಾರದಲ್ಲಿ ಪ್ರಧಾನಿ ಹೆಸರೇಕೆ ಎಳೆದು ತರುತ್ತೀರಿ..? : ಕುಮಾರಸ್ವಾಮಿ

ಪೆನ್‌ಡ್ರೈವ್‌ ವಿಚಾರದಲ್ಲಿ ಪ್ರಧಾನಿ ಹೆಸರೇಕೆ ಎಳೆದು ತರುತ್ತೀರಿ..? : ಕುಮಾರಸ್ವಾಮಿ

ಹುಬ್ಬಳ್ಳಿ,ಏ.30- ಪೆನ್‌ಡ್ರೈವ್‌ ವಿಚಾರದಲ್ಲಿ ಕಾಂಗ್ರೆಸ್‌ನ ಮಹಾನ್‌ ನಾಯಕರು ಪ್ರತಿಭಟನೆ ಮಾಡಿಸಿದ್ದಾರೆ. ಮಹಿಳೆಯರ ಬದುಕನ್ನು ಬೀದಿಗೆ ತಂದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಪ್ರಮುಖ ಆರೋಪಿಯ ಬಗ್ಗೆಯೂ ತನಿಖೆಯಾಗಲಿದೆ.

ಪೆನ್‌ಡ್ರೈವ್‌ ಬಹಿರಂಗಪಡಿಸಿದವರ ಬಗ್ಗೆಯೂ ಚರ್ಚೆಯಾಗಲಿದೆ. ಮಹಾನ್‌ ನಾಯಕ ಉಪಮುಖ್ಯಮಂತ್ರಿ ಪ್ರತಿಭಟನೆ ಮಾಡಿಸಿದ್ದಾರೆ. ಇದನ್ನು ಇಷ್ಟಕ್ಕೆ ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪೆನ್‌ಡ್ರೈವ್‌ ವಿಚಾರಕ್ಕೆ ಸಂಬಂಧಿಸಿದಂತೆ ಯಾರೂ ಆತಂಕಕ್ಕೆ ಒಳಗಾಗಬೇಕಿಲ್ಲ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ತಪ್ಪು ಮಾಡಿದವರಿಗೆ ಶಿಕ್ಷೆಯಾಗುತ್ತದೆ ಎಂದರು. ಈ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೆಸರನ್ನು ಏಕೆ ಎಳೆದು ತರುತ್ತಿದ್ದೀರಿ? ಪ್ರತಿಭಟನೆ ಮಾಡುವುದಾದರೆ ಮಹಾನ್‌ ನಾಯಕರ ಮನೆ ಮುಂದೆ ಮಾಡಿ ಎಂದು ಕಾಂಗ್ರೆಸ್‌ನವರಿಗೆ ತಿರುಗೇಟು ನೀಡಿದರು.

ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ವರ್ಚಸ್ಸು ಹಾಳಾಗಬಾರದೆಂಬ ಕಾಳಜಿ ಇದೆ. ಈ ಹಿನ್ನಲೆಯಲ್ಲಿ ಪಕ್ಷ ಆತಂರಿಕ ವೇದಿಕೆಯಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದರು.

RELATED ARTICLES

Latest News