Friday, June 28, 2024
Homeರಾಜ್ಯಸೆಮಿಕಂಡಕ್ಟರ್‌ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇನೆ : ಹೆಚ್‌ಡಿಕೆ ಭರವಸೆ

ಸೆಮಿಕಂಡಕ್ಟರ್‌ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇನೆ : ಹೆಚ್‌ಡಿಕೆ ಭರವಸೆ

ಬೆಂಗಳೂರು, ಜೂ.15-ಸೆಮಿಕಂಡಕ್ಟರ್‌ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಕೈ ಜೋಡಿಸಿ ಕೆಲಸ ಮಾಡುವುದಾಗಿ ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕಾ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ನಿನ್ನೆ ಬೆಂಗಳೂರಿಗೆ ಆಗಮಿಸಿದ ಕುಮಾರಸ್ವಾಮಿ ಅವರು, ಜೆಪಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಸನಾನ ಸ್ವೀಕರಿಸಿ ಮಾತನಾಡುವ ವೇಳೆ ಸೆಮಿಕಂಡಕ್ಟರ್‌ ತಯಾರಿಸಲು ಬಂಡವಾಳ ಹೂಡಿಕೆಗೆ ಆಗಮಿಸಿರುವ ಅಮೇರಿಕಾದ ಕಂಪನಿಯೊಂದಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೀಡಲಾಗುವ ಬೃಹತ್‌ ಪ್ರಮಾಣದ ಸಬ್ಸಿಡಿಯ ಬಗ್ಗೆ ಪ್ರಸ್ತಾಪಿಸಿದ್ದರು. ಇದು ನಾನಾ ರೀತಿಯ ವ್ಯಾಖ್ಯಾನಗಳಿಗೆ ಕಾರಣವಾಗಿತ್ತು.

ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ತಮ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿರುವ ಕುಮಾರಸ್ವಾಮಿ ಅವರು, ಸೆಮಿಕಂಡಕ್ಟರ್‌ ಕೈಗಾರಿಕೆಯು ಕಾರ್ಯತಂತ್ರದ ವಲಯವಾಗಿದೆ. ಎಲೆಕ್ಟ್ರಾನಿಕ್‌್ಸ ಮತ್ತು ಆಟೋಮೊಬೈಲ್‌ ಉತ್ಪಾದನೆಗೆ ಮೂಲಭೂತಸೌಲಭ್ಯಗಳು ಅಗತ್ಯ. ಇವೆರಡೂ ಕ್ಷೇತ್ರಗಳು ಸಾಕಷ್ಟು ಉದ್ಯೋಗಗಳನ್ನು ಸೃಷ್ಟಿಸಿವೆ ಎಂದಿದ್ದಾರೆ.

ಸೆಮಿಕಂಡಕ್ಟರ್‌ ಕ್ಷೇತ್ರದ ಅಭಿವೃದ್ಧಿಯ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ತೆಗೆದುಕೊಂಡಿರುವ ಕ್ರಮಗಳನ್ನು ನಾನು ಪ್ರಶಂಸಿಸುತ್ತೇನೆ. ಭವಿಷ್ಯದಲ್ಲಿ ಈ ವಲಯದ ಅಭಿವೃದ್ಧಿಗೆ ತಮ ಇಲಾಖೆಯಿಂದ ಸಹಭಾಗಿಯಾಗಿ ಕೆಲಸ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ.

RELATED ARTICLES

Latest News