Thursday, May 2, 2024
Homeರಾಜ್ಯಸೀಟು ಹಂಚಿಕೆ ಚರ್ಚೆ, ದೆಹಲಿಗೆ ಹಾರಿದ ಎಚ್‍ಡಿಕೆ

ಸೀಟು ಹಂಚಿಕೆ ಚರ್ಚೆ, ದೆಹಲಿಗೆ ಹಾರಿದ ಎಚ್‍ಡಿಕೆ

ಬೆಂಗಳೂರು, ಜ.17- ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕ್ಷೇತ್ರ ಹಂಚಿಕೆ ಅಂತಿಮಗೊಳಿಸುವ ಸಂಬಂಧ ಬಿಜೆಪಿ ವರಿಷ್ಠರೊಂದಿಗೆ ಸಮಾಲೋಚನೆ ನಡೆಸಲು ಜೆಡಿಎಸ್ ರಾಜ್ಯಾಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದು ಬೆಳಿಗ್ಗೆ ದೆಹಲಿಗೆ ತೆರಳಿದ್ದಾರೆ.

ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟವನ್ನು ಜೆಡಿಎಸ್ ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಲಾಗುತ್ತಿದೆ. ಬಿಜೆಪಿಯೊಂದಿಗೆ ಕ್ಷೇತ್ರಗಳ ಹಂಚಿಕೆ ಇಂದು ಬಹುತೇಕ ಅಂತಿಮಗೊಳ್ಳಲಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ಕ್ಷೇತ್ರ ಹಂಚಿಕೆ ಬಗ್ಗೆ ಕುಮಾರಸ್ವಾಮಿ ಮಾತುಕತೆ ನಡೆಸಲಿದ್ದಾರೆ.

ಸಾಧ್ಯವಾದರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಯಾಗಲಿದ್ದಾರೆ ಎಂದು ಜೆಡಿಎಸ್ ಮೂಲಗಳು ಹೇಳಿವೆ. ಇಂದು ಬೆಳಿಗ್ಗೆ ತಮ್ಮ ಪುತ್ರ ಹಾಗೂ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರೊಂದಿಗೆ ಕುಮಾರಸ್ವಾಮಿ ದೆಹಲಿಗೆ ತೆರಳಿದ್ದಾರೆ. ಬಿಜೆಪಿ ವರಿಷ್ಠರೊಂದಿಗಿನ ಮಾತುಕತೆ ಸಂಜೆಯಷ್ಟರಲ್ಲಿ ಪೂರ್ಣ ಗೊಂಡರೆ ರಾತ್ರಿಯೇ ನಗರಕ್ಕೆ ಅವರು ಮರಳಲಿದ್ದಾರೆ. ಮಾತು ಕತೆ ವಿಳಂಬವಾದರೆ ನಾಳೆ ವಾಪಸ್ಸಾಗಲಿದ್ದಾರೆ ಎಂದು ತಿಳಿಸಿವೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದ್ದು, ನಾಲ್ಕರಿಂದ ಐದು ಕ್ಷೇತ್ರಗಳಲ್ಲಿ ಮಾತ್ರ ಜೆಡಿಎಸ್ ಉತ್ಸುಕವಾಗಿದೆ. ಉಳಿದ ಕ್ಷೇತ್ರಗಳನ್ನು ಬಿಜೆಪಿಗೆ ಬಿಟ್ಟುಕೊಟ್ಟು ಚುನಾವಣೆಯಲ್ಲಿ ಬೆಂಬಲ ನೀಡಲಿದೆ.

ಕೆನಡಾದಲ್ಲಿ ಕ್ಷೀಣಿಸಿದ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ

ಜೆಡಿಎಸ್ ಪ್ರಾಬಲ್ಯವಿರುವ ಹಾಸನ, ಮಂಡ್ಯ, ತುಮಕೂರು, ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳನ್ನು ಬಿಟ್ಟುಕೊಡುವಂತೆ ಬಿಜೆಪಿಯ ಮುಂದೆ ಬೇಡಿಕೆ ಇಡಲಾಗಿದೆ. ತುಮಕೂರು ಕ್ಷೇತ್ರವನ್ನು ಬಿಜೆಪಿಯೇ ಉಳಿಸಿಕೊಳ್ಳುವ ವಿಚಾರವನ್ನು ಜೆಡಿಎಸ್ ಮುಂದಿಟ್ಟಿದೆ ಎನ್ನಲಾಗಿದೆ.

ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ಮೈತ್ರಿ ಅಭ್ಯರ್ಥಿಯನ್ನು ಸಹ ಮಾತುಕತೆ ಸಂದರ್ಭದಲ್ಲಿ ಅಂತಿಮಗೊಳಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

RELATED ARTICLES

Latest News