ಸಿದ್ದು ವಿರುದ್ಧ ಎಚ್‍ಡಿಕೆ ಕಿಡಿ

Social Share

ಮುದೇಬಿಹಾಳ, ಜ. 22- ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಕೆಡವಲು ಧರ್ಮಸ್ಥಳದ ಸಿದ್ದವನದಲ್ಲಿ ನಡೆಸಿದ ಷಡ್ಯಂತ್ರವನ್ನು ಬಿಚ್ಚಿಡಬೇಕಾಗುತ್ತದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ವಿರುದ್ಧ ಕೆಂಡಾಮಂಡಲರಾದ ಮಾಜಿ ಮುಖ್ಯಮಂತ್ರಿಗಳು, ಜನರು ಕಷ್ಟ ಹೇಳಿಕೊಂಡು ನಮ್ಮ ಬಳಿ ನಿರಂತರವಾಗಿ ಬರುತ್ತಾರೆ. ಅನಗತ್ಯವಾಗಿ ಜೆಡಿಎಸ್ ಪಕ್ಷದ ಬಗ್ಗೆ ಮಾತನಾಡಬೇಡಿ ಎಂದು ತರಾಟೆಗೆ ತೆಗೆದುಕೊಂಡರು.

ಮುಖ್ಯಮಂತ್ರಿ ಆಸೆಗಾಗಿ ಪಕ್ಷ ಬಿಟ್ಟು ಹೋಗಿದ್ದು ನೆನಪು ಇದೇಯಾ ನಿಮಗೆ? ನಿಮ್ಮಿಂದ ನಾನು ಪಾಠವನ್ನು ಹೇಳಿಸಿಕೊಳ್ಳುವ ಅಗತ್ಯ ನನಗೆ ಇಲ್ಲ. ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರು ಕಟ್ಟಿದ ಪಕ್ಷವನ್ನು ಉಳಿಸಿಕೊಂಡು ಹೊರಟಿದ್ದೇವೆ. ಅಂಥ ಪಕ್ಷವನ್ನು, ಅವರ ಸಿದ್ದಾತವನ್ನು ಗಾಳಿಗೆ ತೂರಿ ಮುಖ್ಯಮಂತ್ರಿಕುರ್ಚಿ ಹಿಂದೆ ಓಡಿ ಹೋದವರು ಯಾರು? ನಿಮ್ಮ ಯೋಗ್ಯತೆ ಏನು ಅಂತಾ ಗೊತ್ತಿದೆ ಎಂದು ಅವರು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ನನ್ನ ನೇತೃತ್ವದ ಮೈತ್ರಿ ಸರ್ಕಾರ ಕೆಡವಲು ನೀವು ಏನು ಮಾಡಿದಿರಿ ಎನ್ನುವುದು ಗೊತ್ತಿದೆ. ಎಲ್ಲಿ ಕೂತು, ಯಾರ ಜತೆ ಕೂಡಿ ಕುತಂತ್ರ ಮಾಡಿದಿರಿ ಎನ್ನುವುದು ನನಗೆ ತಿಳಿದಿದೆ. ಬಿಜೆಪಿಗೆ ಅಕಾರ ಹೋಗಬಾರದು ಎಂದು ನಿಮ್ಮ ಪಕ್ಷದ ವರಿಷ್ಠರು ನಮ್ಮ ಬಾಗಿಲಿಗೆ ಬಂದಿದ್ದರು. ಎಐಸಿಸಿದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಇದೆಲ್ಲಾ ಗೊತ್ತಿಲ್ಲವೆ? ಆಗ ನೀವು ಎಲ್ಲಿದ್ದೀರಿ? ಎಂದು ಕಿಡಿಕಾರಿದರು.

ಜೆಡಿಎಸ್ ಸ್ವಂತಬಲದ ಮೇಲೆ ಅಧಿಕಾರ ಹಿಡಿಯಲು ಬೆಂಬಲ ನೀಡಿ: ನಿಖಿಲ್

ನನ್ನ ಸರಕಾರ ಹೇಗೆ ಹೋಯಿತು? ಅದನ್ನು ತೆಗೆಯಲು ನಿಮ್ಮ ಕಾಣಿಕೆ ಏನು? ಬಿಜೆಪಿಯವರ ಜತೆ ಹೇಗೆಲ್ಲೆ ಕುಮ್ಮಕ್ಕಾಗಿದ್ದಿರಿ? ಯಾರನ್ನೆಲ್ಲ ಎಲ್ಲೆಲ್ಲಿಗೆ ಕಲಿಸಿದಿರಿ ಎನ್ನುವುದರ ಮಾಹಿತಿ ಇದೆ. ಆದರೆ, ಜಾತ್ಯತೀತ ತತ್ವ ಆಸ್ತಿ ಎನ್ನುವ ರೀತಿ ವರ್ತಿಸುತ್ತಿದ್ದಿರಿ. ಜಯಪ್ರಕಾಶ್ ನಾರಾಯಣ್ ಅವರ ಸಿದ್ದಾz್ದÁಂತಕ್ಕೆ ನೀವು ಬದ್ಧರಾಗಿ ಇದ್ದಿದರೆ ನೀವು ಅಧಿಕಾರಕ್ಕಾಗಿ ಮಾತೃಪಕ್ಷವನ್ನು ಕಾಲಿನಲ್ಲಿ ಒದ್ದು ಹೋಗುತ್ತಿರಲಿಲ್ಲ ಎಂದು ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ವಿರುದ್ಧ ಗುಡುಗಿದರು.

ಬಿಜೆಪಿ ಪಕ್ಷದವರಿಗಿಂತ ಭ್ರಷ್ಟಾಚಾರದಲ್ಲಿ ನಿವೇನೂ ಕಮ್ಮಿ ಇಲ್ಲ. ನೀವು ಬೇಕಾದಷ್ಟು ಅಕ್ರಮಗಳನ್ನು ನಡೆಸಿದ್ದೀರಿ. ನಾನು ಎತ್ತಿದ ಪ್ರಶ್ನೆಗಳಿಗೆ ಈವರೆಗೆ ಉತ್ತರ ಕೊಡಲು ನಿಮ್ಮಿಂದ ಉತ್ತರ ಕೊಡಲು ಆಗಿಲ್ಲ. ಮತ್ತೆ ನಮ್ಮ ಪಕ್ಷದ ಬಗ್ಗೆ ನಾಲಿಗೆ ಜಾರಿ ಬಿಡುತ್ತಿರಾ? ನಾಚಿಕೆ ಇಲ್ಲವೇ? ಎಂದು ಅವರು ಟೀಕಿಸಿದರು.

ನಾನು ಸದಾ ಜನಗಳ ಮಧ್ಯೆ ಇರುವ ಸಾಮಾನ್ಯ ವ್ಯಕ್ತಿ. ಆದರೆ ನೀವು ಸಂಜೆ 6 ಗಂಟೆಯಾದ ಮೇಲೆ ಯಾರ ಕೈಗೆ ಸಿಗುತ್ತಿದ್ದಿರಿ? ಮಧ್ಯಾನ್ಹ ಊಟಕ್ಕೆಂದು ಹೋದರೆ ನಾಪತ್ತೆ ಆಗಿಬಿಡುತ್ತಿದ್ದಿರಿ. ಈ ಬಗ್ಗೆ ಕೂಡ ನೀವು ಭಾಷಣ ಮಾಡಬೇಕಲ್ಲವೇ ಎಂದು ಪ್ರಶ್ನೆ ಮಾಡಿದರು.

ದುಬೈ ಅಧಿಕಾರಿಯಂತೆ ನಟಿಸಿ ಲೀಲಾ ಪ್ಯಾಲೇಸ್‍ಗೆ ವಂಚಿಸಿದ್ದ ಆರೋಪಿ ಸೆರೆ

ಪ್ರಜಾಧ್ವನಿ ಅಲ್ಲ, ಅಧಿಕಾರಕ್ಕಾಗಿ ಕಾಂಗ್ರೆಸ್ ಧ್ವನಿ: ಪಂಚರತ್ನ ರಥಯಾತ್ರೆ ಬಗ್ಗೆ ಮಾತನಾಡಿರುವ ಸಿದ್ದರಾಮಯ್ಯ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕುಮಾರಸ್ವಾಮಿ ನಿಮ್ಮದು ಪ್ರಜಾಧ್ವನಿ ಅಲ್ಲ. ಅಧಿಕಾರಕ್ಕಾಗಿ ನಡೆಸುತ್ತಿರುವ ಧ್ವನಿ ಎಂದು ಟೀಕಿಸಿದರು.

ಪಂಚರತ್ನ ರಥಯಾತ್ರೆ 50 ದಿನ ದಾಟಿ ಮುನ್ನಡೆಯುತ್ತಿದೆ. ಅದು ಇವರೆಲ್ಲರ ನಿದ್ದೆಗೆಡಿಸಿದೆ. ಹೋದ ಕಡೆ ಎಲ್ಲಾ ನಮಗೆ ಉತ್ತಮ ಸ್ಪಂದನೆ ದೊರೆಯುತ್ತಿದೆ. ಸಹಿಸಿಕೊಳ್ಳುವುದು ಅವರಿಗೆ ಆಗುತ್ತಿಲ್ಲ ಎಂದರು. ಮುದ್ದೇಬಿಹಾಳ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಾ.ಸಿ.ಎನ್. ಸೋಲಾಪೂರ, ಪಕ್ಷದ ಜಿಲ್ಲಾಧ್ಯಕ್ಷ ಬಸನಗೌಡ ಮಾಡಗಿ ಇತರರು ಹಾಜರಿದ್ದರು.

HD Kumaraswamy, Siddaramaiah, Congress, JDS,

Articles You Might Like

Share This Article