ರಾಷ್ಟ್ರೀಯ ಪಕ್ಷಗಳಿಂದ ಜಾತಿ ನಡುವೆ ಸಂಘರ್ಷ ಸೃಷ್ಟಿ: ರೇವಣ್ಣ

Social Share

ಬೇಲೂರು, ಜ.4- 2016ರಲ್ಲಿ ಮತಾಂತರ ವಿರೋಧ ಮಸೂದೆಯನ್ನು ಕಾಂಗ್ರೆಸ್ ಮಂಡನೆ ಮಾಡಿತ್ತು. ಈಗ ಬಿಜೆಪಿ ಸರ್ಕಾರ ಮತ್ತಷ್ಟು ಕಾನೂನು ಸೇರಿಸಿ ಜಾರಿಗೆ ತಂದಿದ್ದಾರೆ ಎಂದು ಮಾಜಿ ಸಚಿವ ಹಾಗೂ ಶಾಸಕ ಎಚ್.ಡಿ.ರೇವಣ್ಣ ಹೇಳಿದರು. ಪಟ್ಟಣದ ಶ್ರೀ ಶಿವಕುಮಾರ ಸ್ವಾಮೀಜಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರಿಗೆ ಅಭಿನಂದನೆ ಹಾಗೂ ಜನ ಪ್ರತಿನಿಗಳು, ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದಅವರು, ಎರಡು ರಾಷ್ಟ್ರೀಯ ಪಕ್ಷಗಳು ಜಾತಿ ಜಾತಿಗಳ ನಡುವೆ ಹೊಡೆದಾಡಿಸಿ ಸಂಘರ್ಷ ಸೃಷ್ಟಿಸುತ್ತಿದ್ದಾರೆ.
ಇವರಿಗೆ ಬುದ್ಧಿ ಕಲಿಸಲು ದೇವರೆ ಬರಬೇಕಿದೆ. ಸರ್ಕಾರಿ ಶಾಲೆಗಳಲ್ಲಿ ಬಡವರ ಮಕ್ಕಳೆ ವಿದ್ಯಾಭ್ಯಾಸ ಮಾಡುತ್ತಿರುವುದು. ಆದರೆ, ಸ್ವಾತಂತ್ರ್ಯ ಬಂದು 75 ವರ್ಷವಾದರೂ ಶಿಕ್ಷಣ ಇಲಾಖೆ ಮಾತ್ರ ಖಾಸಗಿ ಸಂಸ್ಥೆಗಳ ಪರ ಕೆಲಸ ಮಾಡುತ್ತಿದೆ ಎಂದರು.
ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರಾಜ್ಯಾದ್ಯಂತ ಸಾಕಷ್ಟು ಶಾಲಾ-ಕಾಲೇಜುಗಳನ್ನು ಮಾಡಿದ್ದೆವು. ಆ ಶಾಲೆಗಳಿಗೆ ಶಿಕ್ಷಕರಿಲ್ಲ, ಬೆಂಚು, ಕುರ್ಚಿಗಳಿಲ್ಲ, ಸೌಲಭ್ಯಗಳಿಲ್ಲ. ಆದರೆ ಈ ಸರ್ಕಾರದ ಮಂತ್ರಿಗಳಿಗೆ ಕಣ್ಣುಕಾಣಲ್ವ. ಸರ್ಕಾರ ದೇಗುಲಗಳ ಅಭಿವೃದ್ಧಿಗೆ ಹಣಕೊಡುವಲ್ಲಿ ವಿಫಲವಾಗಿದೆ. ಇದರಿಂದ ಹಳೆ ದೇಗುಲಗಳು ಬಿದ್ದು ನಶಿಸುತ್ತಿವೆ. ಈ ಬಗ್ಗೆ ಸರ್ಕಾರ ಗಮನ ಹರಿಸುತ್ತಿಲ ಎಂದು ಹರಿಹಾಯ್ದರು.
ಕಾಂಗ್ರೆಸ್ ಪಕ್ಷದವರು ಮೇಕೆದಾಟು ಯೋಜನೆ ಎಂದು ಪಾದಯಾತ್ರೆ ಮಾಡುತ್ತಿದ್ದಾರೆ. ಆದರೆ, ರಣಘಟ್ಟ ಯೋಜನೆ ಏಕೆ ಮಾಡಲು ಮುಂದಾಗಲಿಲ್ಲ.ಎಚ್.ಡಿ.ಕುಮಾರಸ್ವಾಮಿಯವರೇ ಬರಬೇಕಾಯಿತು ಎಂದು ಕಾಂಗ್ರೆಸ್‍ನವರನ್ನು ಛೇಡಿಸಿದರು.
ಶಾಸಕ ಕೆ.ಎಸ್.ಲಿಂಗೇಶ್ ಮಾತನಾಡಿ, ಜಿಲ್ಲೆಯಲ್ಲಿಜೆಡಿಎಸ್ ಸಾಮೂಹಿಕ ನಾಯಕತ್ವದಲ್ಲಿ ಗಟ್ಟಿಯಾಗಿದೆ. ಮುಂದಿನ ವಿಧಾನ ಸಭಾ ಚುನಾವಣೆಗೆ ಅಡ್ಡಿಯಾಗುತ್ತದೆ ಎಂಬ ಭಯದಿಂದ ಬಿಜೆಪಿ ಸರ್ಕಾರ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯನ್ನು ಮುಂದೂಡುತ್ತಿದೆ ಎಂದರು.
ಈ ಎರಡು ರಾಷ್ಟ್ರೀಯ ಪಕ್ಷಗಳು ಜೆಡಿಎಸ್ ಪಕ್ಷವನ್ನು ತುಳಿಯಲು ಮಾಡಿದ ಕುತಂತ್ರವಾಗಿದೆ.
ಆದರೆ, 2023ಕ್ಕೆ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೊಮ್ಮೆ ಮುಖ್ಯಮಂತ್ರಿಗಳಾಗಿ ಅಕಾರ ಹಿಡಿಯಲಿದ್ದಾರೆ. ಇದಕ್ಕಾಗಿ ಕಾರ್ಯಕರ್ತರು ತಳಮಟ್ಟದಲ್ಲಿ ಪಕ್ಷ ಸಂಘಟನೆಗೆ ಮುಂದಾಗಬೇಕಿದೆ ಎಂದರು.
ವಿಧಾನ ಪರಿಷತ್ ನೂತನ ಸದಸ್ಯ ಡಾ.ಸೂರಜ್‍ರೇವಣ್ಣ ಮಾತನಾಡಿ, ನಾನು ವಿಧಾನ ಪರಿಷತ್ ಸದಸ್ಯನಾಗಲು ಸಹಕರಿಸಿದ ಜಿಲ್ಲೆಯ ಜನತೆಗೆ ಕೃತಜ್ಞತೆ ಸಲ್ಲಿಸುತ್ತೇನೆ ಹಾಗೂ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕೆಲಸ ಮಾಡಲು ಮುಂದಾಗುತ್ತೇನೆ. ಜಿಲ್ಲೆ ಮತ್ತು ತಾಲೂಕಿನ ಸಮಸ್ಯೆಗಳ ಬಗ್ಗೆ ಪರಿಷತ್ತಿನಲ್ಲಿ ಪ್ರಸ್ತಾಪಿಸುತ್ತೇನೆ. ನಮ್ಮ ಹಿರಿಯರ ಸಲಹೆ-ಸಹಕಾರ ಪಡೆದು ಕೆಲಸ ಮಾಡುತ್ತೇನೆ ಎಂದರು.
ಜೆಡಿಎಸ್ ತಾಲೂಕು ಅಧ್ಯಕ್ಷ ತೋ.ಚ.ಅನಂತ ಸುಬ್ಬರಾಯ, ಜಿಪಂ ಮಾಜಿ ಅಧ್ಯಕ್ಷ ಚಂದ್ರೇಗೌಡ, ಹೆಚ್‍ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಎ.ನಾಗರಾಜ್, ಜಿಪಂ ಮಾಜಿ ಸದಸ್ಯೆ ಲತಾಮಂಜೇಶ್ವರಿ, ಮುಖಂಡರಾದ ಮಲ್ಲೇಗೌಡ, ಮಹೇಶ್, ಭಾರತೀ ಅರುಣ್‍ಕುಮಾರ್, ಪದ್ಮಾಕ್ಷಿ ಸತ್ಯನಾರಾಯಣ್, ಕಮಲ ಚನ್ನಪ್ಪ ಸೇರಿದಂತೆ ಇತರರಿದ್ದರು.

Articles You Might Like

Share This Article