Friday, November 22, 2024
Homeಜಿಲ್ಲಾ ಸುದ್ದಿಗಳು | District Newsಪಾರದರ್ಶಕವಾಗಿ ಮತಎಣಿಕೆಗೆ ಕ್ರಮ ಕೈಗೊಳ್ಳುವಂತೆ ಎಚ್‌.ಡಿ.ರೇವಣ್ಣ ಮನವಿ

ಪಾರದರ್ಶಕವಾಗಿ ಮತಎಣಿಕೆಗೆ ಕ್ರಮ ಕೈಗೊಳ್ಳುವಂತೆ ಎಚ್‌.ಡಿ.ರೇವಣ್ಣ ಮನವಿ

ಹಾಸನ, ಜೂ.2- ಲೋಕಸಭಾ ಚುನಾವಣೆ ಮತ ಎಣಿಕೆಯು ಪಾರದರ್ಶಕವಾಗಿ ನಡೆಯಲು ಕ್ರಮ ಕೈಗೊಳ್ಳಬೇಕೆಂದು ಮಾಜಿ ಸಚಿವ ಎಚ್‌.ಡಿ.ರೇವಣ್ಣ ಭಾರತೀಯ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.

ಹರದನಹಳ್ಳಿಯ ನಿವಾಸದಲ್ಲಿ ಜೆಡಿಎಸ್‌‍ ಶಾಸಕರು ಹಾಗೂ ಮುಖಂಡರ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾರದರ್ಶಕವಾಗಿ ಮತ ಎಣಿಕೆ ನಡೆಸಬೇಕು. ಈ ಸಂಬಂಧ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಆಯೋಗ ನಿರ್ದೇಶನ ನೀಡಬೇಕು ಎಂದರು.

ಮತ ಎಣಿಕೆ ಕೇಂದ್ರಗಳಿಗೆ ಮಾಧ್ಯಮದವರಿಗೆ ಅವಕಾಶ ಕಲ್ಪಿಸಬೇಕೆಂದ ಅವರು, ಹಾಸನ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕೇಂದ್ರಕ್ಕೆ ಜೂನ್‌ 4 ರಂದು ಬೆಳಿಗ್ಗೆ 6 ಗಂಟೆಗೆ ನಮ ಪಕ್ಷದ ಚುನಾವಣಾ ಏಜೆಂಟ್‌, ಮುಖಂಡರು ಹೋಗುತ್ತಾರೆ. ಪಕ್ಷದ ಎಲ್ಲಾ ಮುಖಂಡರು ಮತ ಎಣಿಕೆ ಸಂದರ್ಭದಲ್ಲಿ ಇರುತ್ತಾರೆ ಎಂದರು.

ಇಂದು ಶಾಸಕರಾದ ಡಾ.ಸಿ.ಎನ್‌.ಬಾಲಕೃಷ್ಣ, ಸ್ವರೂಪ್‌ ಪ್ರಕಾಶ್‌ ಅವರನ್ನೊಳಗೊಂಡಂತೆ ಸಭೆ ನಡೆಸಿದ್ದೇವೆ ಎಂದು ತಿಳಿಸಿದರು.

ಸಮೀಕ್ಷೆ : ಪ್ರತಿಕ್ರಿಯೆಗೆ ರೇವಣ್ಣ ನಕಾರ
ಲೋಕಸಭಾ ಚುನಾವಣೆ ಮತದಾನೋತ್ತರ ಸಮೀಕ್ಷೆಗಳ ಬಗ್ಗೆ ಪ್ರತಿಕ್ರಿಯಿಸಲು ಮಾಜಿ ಸಚಿವ ಎಚ್‌.ಡಿ.ರೇವಣ್ಣ ನಿರಾಕರಿಸಿದರು.ಹೊಳೆನರಸೀಪುರದ ಲಕ್ಷ್ಮೀನರಸಿಂಹ ದೇವಾಲಯ ಹಾಗೂ ಹರದನಹಳ್ಳಿಯ ದೇವೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌‍ 3 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು, ಎಲ್ಲಾ ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮೆ ದೇಶದ ಪ್ರಧಾನಿಯಾಗುವುದು ನಿಶ್ಚಿತ, ಈ ದೇಶ ಉಳಿಯಬೇಕಾದರೆ ಮೋದಿಯವರು ಪ್ರಧಾನಮಂತ್ರಿಯಾಗಲೇಬೇಕು, ಲಕ್ಷ್ಮೀನರಸಿಂಹ ಸ್ವಾಮಿ ಕೃಪೆ ಇರುವವರೆಗೂ ನಮಗೇನೂ ತೊಂದರೆಯಿಲ್ಲ ಎಂದು ಹೇಳಿದರು.

ಸ್ವಾತಂತ್ರ್ಯ ಬಂದು 75 ವರ್ಷ ಕಳೆದಿದೆ. ಶಿಕ್ಷಣ ಕ್ಷೇತ್ರಕ್ಕೆ ಒತ್ತು ಕೊಟ್ಟ ಮುಖ್ಯಮಂತ್ರಿ ಎಂದರೆ ಎಚ್‌.ಡಿ.ಕುಮಾರಸ್ವಾಮಿಯವರು. 1,600 ಪ್ರೌಢಶಾಲೆ, 600 ಪದವಿ ಪೂರ್ವ ಕಾಲೇಜು, 250 ಪದವಿ ಕಾಲೇಜುಗಳನ್ನು ಅವರ ಅವಧಿಯಲ್ಲಿ ತೆರೆಯಲಾಯಿತು. ಏಳೆಂಟು ಸಾವಿರ ಕೋಟಿ ರೂ. ಶಾಲಾ-ಕಾಲೇಜುಗಳ ಕಟ್ಟಡಗಳಿಗೆ ನೀಡಿದ್ದರು. ಅಲ್ಲದೆ, 4,800 ಶಿಕ್ಷಕರು, 1,600 ಪದವಿ ಪೂರ್ವ ಕಾಲೇಜು ಉಪನ್ಯಾಸಕರನ್ನು ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಹಾಗೂ ಬಿ.ಎಸ್‌‍.ಯಡಿಯೂರಪ್ಪ ಅವರು ಉಪಮುಖ್ಯಮಂತ್ರಿಯಾಗಿದ್ದಾಗ ನೇಮಕ ಮಾಡಲಾಗಿದೆ.

ಬಿಜೆಪಿ-ಜೆಡಿಎಸ್‌‍ ಮೈತ್ರಿಯಿಂದ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯನ್ನು ಎದುರಿಸುತ್ತಿದ್ದೇವೆ. ಒಟ್ಟಾಗಿ ಎಲ್ಲರೂ ಕೆಲಸ ಮಾಡಿದ್ದೇವೆ. ನಮ ಪಕ್ಷದ ಅಭ್ಯರ್ಥಿ ವಿವೇಕಾನಂದ ಅವರು ಗೆಲ್ಲುವ ವಿಶ್ವಾಸವಿದೆ. ಹಾಸನ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲೂ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಿದ್ದೇವೆ ಎಂದರು.

RELATED ARTICLES

Latest News