ಸಿಎಂ ಮನೆ ಮುಂದೆ ಎಚ್.ಡಿ.ರೇವಣ್ಣ ಏಕಾಂಗಿ ಧರಣಿ

Social Share

ಬೆಂಗಳೂರು, ಜ.18- ಹೊಳೆನರಸೀಪುರ ಸರ್ಕಾರಿ ಮಹಿಳಾ ಗೃಹ ವಿಜ್ಞಾನ ಕಾಲೇಜಿನಲ್ಲಿ ಎಂಎಸ್‍ಸಿ ಸೈಕಾಲಜಿ ಮತ್ತು ಫುಡ್ ಮತ್ತು ನ್ಯೂಟ್ರೀಷಿಯನ್ ಕೋರ್ಸ್‍ಗಳ ಆರಂಭಕ್ಕೆ ಆಗ್ರಹಿಸಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಇಂದು ಏಕಾಂಗಿ ಧರಣಿ ನಡೆಸಿದರು.
ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾ ಆವರಣದಲ್ಲಿ ಧರಣಿ ನಡೆಸಿ 2022-23ನೆ ಶೈಕ್ಷಣಿಕ ಸಾಲಿನಲ್ಲಿ ಎರಡು ಹೊಸ ಕೋರ್ಸ್‍ಗಳ ಪ್ರಾರಂಭಕ್ಕೆ ಸರ್ಕಾರ ಅನುಮತಿ ನೀಡಬೇಕೆಂದು ಒತ್ತಾಯಿಸಿದರು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಎರಡೂ ಕೋರ್ಸ್‍ಗಳ ಉಪನ್ಯಾಸಕರಿಗೆ ತಗುಲುವ ವೇತನ ವೆಚ್ಚವನ್ನು ತಾತ್ಕಾಲಿಕವಾಗಿ ಸಿಡಿಸಿ ಸಮಿತಿ ಅಥವಾ ಸ್ವಂತ ಖರ್ಚಿನಲ್ಲಿ ಭರಿಸುವುದಾಗಿ ಮುಖ್ಯಮಂತ್ರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
ಹೊಸ ಕೋರ್ಸ್‍ಗಳನ್ನು ಪ್ರಾರಂಭಿಸಲು ಮೈಸೂರು ವಿವಿ ಶಿಫಾರಸು ಮಾಡಿದ್ದು, ಆ ಶಿಫಾರಸನ್ನು ಉನ್ನತ ಶಿಕ್ಷಣ ಸಚಿವರು ತಿರಸ್ಕರಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾಲೇಜಿಗೆ ಮೂಲ ಸೌಲಭ್ಯಗಳನ್ನು ಸರಿಯಾಗಿ ಒದಗಿಸುತ್ತಿಲ್ಲ. ಸುಮಾರು 20 ಲಕ್ಷ ರೂ. ವೆಚ್ಚದಲ್ಲಿ ತಾವೇ ಒದಗಿಸಿರುವುದಾಗಿ ಅಲ್ಲದೆ 25 ಕಂಪ್ಯೂಟರ್‍ಗಳನ್ನು ಹಾಸನ ಹಾಲು ಒಕ್ಕೂಟದಿಂದ ಹಾಗೂ 5 ಲಕ್ಷ ರೂ. ವೆಚ್ಚದಲ್ಲಿ ಡೆಸ್ಕ್ ಮತ್ತಿತರ ಪ್ರಯೋಗಾಲಯದ ಉಪಕರಣಗಳನ್ನು ಒದಗಿಸಲಾಗಿದೆ. ಈ ಎರಡೂ ಹೊಸ ಕೋರ್ಸ್‍ಗೆ ತಲಾ 20 ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಿದ್ದಾರೆ ಎಂದು ಅವರು ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Articles You Might Like

Share This Article