Tuesday, May 28, 2024
Homeರಾಜ್ಯಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಾಳೆ ಹೆಚ್‌ಡಿಕೆಗೆ ಶಸ್ತ್ರಚಿಕಿತ್ಸೆ

ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಾಳೆ ಹೆಚ್‌ಡಿಕೆಗೆ ಶಸ್ತ್ರಚಿಕಿತ್ಸೆ

ಬೆಂಗಳೂರು,ಮಾ.20- ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಾಳೆ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ನಿನ್ನೆ ಚೆನ್ನೈಗೆ ತೆರಳಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಕುಮಾರಸ್ವಾಮಿ ಅವರಿಗೆ ಕೆಲ ಪರೀಕ್ಷೆಗಳನ್ನು ನಡೆಸಿದ್ದು, ನಾಳೆ ಹೃದಯ ಶಸ್ತ್ರಚಿಕಿತ್ಸೆ ನಡೆಸಲಾಗುತ್ತದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ಶಸ್ತ್ರಚಿಕಿತ್ಸೆ ಬಳಿಕ ಮೂರ್ನಾಲ್ಕು ದಿನ ವಿಶ್ರಾಂತಿ ಪಡೆಯಲಿದ್ದಾರೆ. ಮಾ.25 ರಂದು ಆಸ್ಪತ್ರೆಯಿಂದ ಬಿಡುಗಡೆಗೊಂಡು ಬೆಂಗಳೂರಿಗೆ ಮರಳಲಿದ್ದಾರೆ. ಅಮೆರಿಕದ ಪರಿಣಿತ ವೈದ್ಯರು ಕುಮಾರಸ್ವಾಮಿಯವರಿಗೆ ಶಸ್ತ್ರಚಿಕಿತ್ಸೆ ಮಾಡಲಿದ್ದಾರೆ.

ಶಸ್ತ್ರಚಿಕಿತ್ಸೆ ಬಗ್ಗೆ ಕುಮಾರಸ್ವಾಮಿಯವರೇ ಮಾಹಿತಿ ನೀಡಿ ಹುಟ್ಟಿನಿಂದ ಹೃದಯ ಸಂಬಂಧಿ ಸಮಸ್ಯೆಯಿದೆ. ಈಗಾಗಲೇ 2 ಬಾರಿ ಹೃದಯ ಶಸ್ತ್ರಚಿಕಿತ್ಸೆಯನ್ನು ಮಾಡಿಸಿಕೊಳ್ಳಲಾಗಿದೆ. ಬಿಡುವಿಲ್ಲದ ರಾಜಕೀಯ ಜೀವನದ ಶೈಲಿಯಿಂದಾಗಿ ಸಮಸ್ಯೆ ಉಂಟಾಗಿದೆ.

ಈ ಬಾರಿ ಉನ್ನತ ಮಟ್ಟದ ಶಸ್ತ್ರಚಿಕಿತ್ಸೆ ಮಾಡುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ಹೇಳಿದ್ದರು.ಆಸ್ಪತ್ರೆಯಿಂದ ಮರಳಿದ ಬಳಿಕ ಲೋಕಸಭಾ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

RELATED ARTICLES

Latest News