ದುಬೈ,ಆ.28 (ಪಿಟಿಐ)- ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ಕೊರೊನಾ ಸೋಂಕಿನಿಂದ ಮುಕ್ತರಾಗಿದ್ದಾರೆ. ಹೀಗಾಗಿ ಅವರು ಇಂದು ನಡೆಯಲಿರುವ ಪಾಕ್ ವಿರುದ್ಧದ ಏಷ್ಯಾ ಕಪ್ ಆರಂಭಿಕ ಪಂದ್ಯದಲ್ಲಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.
ಹೀಗಾಗಿ ಹಂಗಾಮಿ ಕೋಚರ್ ಆಗಿದ್ದ ವಿವಿಎಸ್ ಲಕ್ಷ್ಮಣ್ ಅವರು ತಾಯ್ನಾಡಿಗೆ ಹಿಂತಿರುಗಲಿದ್ದಾರೆ ಎಂದು ಬಿಸಿಸಿಐ ಅಧಿಕಾರಿಗಳು ತಿಳಿಸಿದ್ದಾರೆ. ಆಗಸ್ಟ್ 23 ರಂದು ದ್ರಾವಿಡ್ ಅವರಿಗೆ ಸೋಂಕು ಕಾಣಿಸಿಕೊಂಡಿದ್ದರಿಂದ ಅವರನ್ನು ಹೋಂ ಐಸೋಲೇಷನ್‍ಗೆ ಒಳಪಡಿಸಲಾಗಿತ್ತು.
ದ್ರಾವಿಡ್ ಅವರನ್ನು ಬಿಸಿಸಿಐ ವೈದ್ಯಕೀಯ ತಂಡ ಮೇಲ್ವಿಚಾರಣೆ ನಡೆಸುತ್ತಿದೆ. ಸೌಮ್ಯ ಜ್ವರದ ಲಕ್ಷಣ ಇರುವುದರಿಂದ ಅವರ ಮೇಲೆ ನಿಗಾ ಇರಿಸಲಾಗಿದೆ. ಅವರು ಚೇತರಿಕೆ ಕಂಡ ಕೂಡಲೇ ದ್ರಾವಿಡ್ ತಂಡ ಸೇರಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ಅಧ್ಯಕ್ಷ ಜಯ್ ಶಾ ತಿಳಿಸಿದ್ದರು.