ಹಾಸನ, ಜು.17- ಮೂಳೆ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಪೊಲೀಸ್ ಕಾನ್‌ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಹೊರವಲಯದ ಗೆಂಡೆಕಟ್ಟೆ ಅರಣ್ಯದಲ್ಲಿ ನಡೆದಿದೆ. ಮೂಲತಃ ಅರಕಲಗೂಡು ತಾಲ್ಲೂಕಿನ ಚಿಕ್ಕಮೊಬ್ಬನಹಳ್ಳಿ ಗ್ರಾಮದ ನಟೇಶ (38) ಆತ್ಮಹತ್ಯೆ ಮಾಡಿಕೊಂಡ ಕಾನ್‌ಸ್ಟೇಬಲ್.
2008 ನೇ ಸಾಲಿನಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಆಗಿ ಆಯ್ಕೆಯಾಗಿದ್ದನಟೇಶ್ ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ. ಕಳೆದ ಮೂರು ತಿಂಗಳಿನಿಂದ ಮೂಳೆ ಕ್ಯಾನ್ಸರ್‌ನಿಂದ ಬಳಲುತ್ತಿದ್ದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ಒಂದು ವಾರದಿಂದ ಹಾಸನದ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಆದರೆ ನಿನ್ನೆ ಸಂಜೆ ಇದ್ದಕ್ಕಿದ್ದಂತೆ ಆಸ್ಪತ್ರೆಯಿಂದ ನಟೇಶ್ ಕಾಣೆಯಾಗಿದ್ದರು.
ಹಾಸನದ ಹೊರವಲಯದ ಗೆಂಡೆಕಟ್ಟೆ ಅರಣ್ಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶವವನ್ನು ಗಮನಿಸಿದ ಸ್ಥಳೀಯರು ಬಡಾವಣೆ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.ಕಳೆದ ಒಂದು ತಿಂಗಳ ಹಿಂದೆಯಷ್ಟೇ ಹೆಡ್ ಕಾನ್‌ಸ್ಟೇಬಲ್ ಆಗಿ ಮುಂಬಡ್ತಿ ಪಡೆದಿದ್ದ ನಟೇಶ್ ಹೊಳೆನರಸೀಪುರ ಠಾಣೆಗೆ ವರ್ಗಾವಣೆಗೊಂಡಿದ್ದರು.
- ಮಾವೋವಾದಿಗಳ ಗುಂಡೇಟಿಗೆ ಇಬ್ಬರು ಯೋಧರು ಬಲಿ
- ನಕಲಿ ಹಣಕಾಸು ಸಂಸ್ಥೆಯಿಂದ ಹೂಡಿಕೆದಾರರಿಗೆ 93 ಕೋಟಿ ವಂಚನೆ
- ಕ್ರಿಕೆಟಿಗ ಶಿಖರ್ ಧವನ್ಗೆ ಇಡಿ ಸಮನ್ಸ್
- ಜಿಎಸ್ಟಿ ಕಡಿತಗೊಳಿಸಿ ರಾಷ್ಟ್ರಕ್ಕೆ ಐತಿಹಾಸಿಕ ದೀಪಾವಳಿ ಉಡುಗೊರೆ: ಕುಮಾರಸ್ವಾಮಿ
- ಜಿಎಸ್ಟಿ ಸರಳೀಕರಣ ಬಡವರ ಪರ ; ಚಂದ್ರಬಾಬು ನಾಯ್ಡು