ಬೆಂಗಳೂರು,ಆ.12- ರಾಜಧಾನಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸೌಧದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ಸಿಬ್ಬಂದಿ ಹಾಗೂ ಭೇಟಿ ನೀಡುವ ಸಾರ್ವಜನಿಕರು ಸೇರಿದಂತೆ ಎಲ್ಲರೂ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಡಿ.ರಣದೀಪ್ ಸುತ್ತೋಲೆ ಹೊರಡಿಸಿದ್ದಾರೆ.
ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಆರೋಗ್ಯಸೌಧದ (ಅರೋಗ್ಯ ಇಲಾಖೆಯ ಕೇಂದ್ರ ಕಚೇರಿ) ಆವರಣ ಹಾಗೂ ಕಚೇರಿಯಲ್ಲಿ ಮಾಸ್ಕ್ ಧರಿಸದವರಿಗೆ 250 ರೂಪಾಯಿ ದಂಡ ವಿಧಿಸಲಾಗುವುದು ಎಂದು ಉಲ್ಲೇಖಿಸಿದ್ದಾರೆ.
ಈ ನಿಯಮದ ಕುರಿತು ಆರೋಗ್ಯಸೌಧದ ಮುಖ್ಯ ಇಂಜಿನಿಯರ್, ಎಲ್ಲಾ ಹೌಸ್ ಕೀಪಿಂಗ್ ವಿಭಾಗದವರಿಗೆ ಮಾಹಿತಿ ನೀಡಿ, ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.