Wednesday, July 23, 2025
Homeರಾಜ್ಯನಟ ದರ್ಶನ್‌ ಜಾಮೀನು ರದ್ದು ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ

ನಟ ದರ್ಶನ್‌ ಜಾಮೀನು ರದ್ದು ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ

Hearing of actor Darshan's bail cancellation plea postponed

ನವದೆಹಲಿ, ಜು.22- ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ಖ್ಯಾತ ನಟ ದರ್ಶನ್‌ ಜಾಮೀನು ರದ್ದತಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಗುರುವಾರಕ್ಕೆ ಮುಂದೂಡಿದೆ. ದರ್ಶನ್‌ ಪರ ವಕೀಲರು ವಾದ ಮಂಡನೆಗೆ ಸಮಯಾವಕಾಶ ಕೋರಿದ ಕಾರಣ ಈ ಮುಂದೂಡಿಕೆ ಮಾಡಲಾಗಿದೆ.

ಸುಪ್ರೀಂ ಕೋರ್ಟ್‌ನ ನಿರ್ಧಾರ ದರ್ಶನ್‌ ಅವರ ಭವಿಷ್ಯ ಮತ್ತು ಅವರ ಡೆವಿಲ್‌‍ ಚಿತ್ರದ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳಿವೆ.ನಟ ದರ್ಶನ್‌ ಅವರು ರೇಣುಕಾಸ್ವಾಮಿ ಕೊಲೆ ಕೇಸ್‌‍ನಲ್ಲಿ ಬಂಧನಕ್ಕೆ ಒಳಗಾಗಿ, ಜಾಮೀನು ಪಡೆದು ಹೊರ ಬಂದರು. ಕರ್ನಾಟಕ ಹೈಕೋರ್ಟ್‌ ದರ್ಶನ್‌ಗೆ ಜಾಮೀನು ನೀಡಿತ್ತು. ಈ ತೀರ್ಪನ್ನು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನೆ ಮಾಡಿದೆ.

ಈ ಅರ್ಜಿ ವಿಚಾರಣೆ ಇಂದು ನಡೆಯಬೇಕಿತ್ತು. ಆದರೆ, ಈಗ ಅರ್ಜಿ ವಿಚಾರಣೆ ಗುರುವಾಕ್ಕೆ ಮುಂದೂಡಲ್ಪಟ್ಟಿದೆ. ಹೀಗಾಗಿ, ದರ್ಶನ್‌ಗೆ ಮತ್ತೆರಡು ದಿನ ರಿಲೀಫ್‌ ಸಿಕ್ಕಂತೆ ಆಗಿದೆ. ದರ್ಶನ್‌ ಪರ ಕಪಿಲ್‌ ಸಿಬಲ್‌ ವಾದ ಮಂಡಿಸಬೇಕಿತ್ತು.. ಆದರೆ, ಅವರಿಗೆ ಬೇರೆ ಪ್ರಕರಣದಲ್ಲಿ ಇಂದು ವಾದ ಮಂಡಿಸಬೇಕಿದ್ದ ಕಾರಣ ಒಂದು ದಿನ ಸಮಯ ಕೇಳಿದ್ದೇನೆ.

ಇದಕ್ಕೆ ಸುಪ್ರೀಂಕೋರ್ಟ್‌ ಸಮ್ಮತಿ ಕೊಟ್ಟಿದೆ. ಹೀಗಾಗಿ, ಈ ಅರ್ಜಿ ವಿಚಾರಣೆ ಗುರುವಾರಕ್ಕೆ ಮುಂದೂಡಲ್ಪಟ್ಟಿದೆ ಎಂದು ದರ್ಶನ್‌ ಪರ ಹಿರಿಯ ವಕೀಲ ಸಿದ್ದಾರ್ಥ್‌ ದವೆ ಹೇಳಿಕೆ ನೀಡಿದ್ದಾರೆ.
ನಾನು ಬಂಧನದ ಕಾರಣಗಳ ಬಗ್ಗೆ ವಾದ ಮಂಡಿಸುವುದಿಲ್ಲ. ಕೇಸ್‌‍ನ ಮೆರಿಟ್‌್ಸ ಮೇಲೆ ವಾದ ಮಂಡಿಸುತ್ತೇನೆ ಎಂದು ಕೂಡ ಅವರು ಹೇಳಿದ್ದಾರೆ. ಹೀಗಾಗಿ, ದರ್ಶನ್‌ ಕೇಸ್‌‍ನಲ್ಲಿ ಗುರುವಾರ ತೀರ್ಪು ಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ರೇಣುಕಾಸ್ವಾಮಿ ಕೊಲೆ ಕೇಸ್‌‍ನಲ್ಲಿ ಎಲ್ಲಾ 17 ಆರೋಪಿಗಳಿಗೆ ಜಾಮೀನು ದೊರೆತಿದೆ. ಈ ಪೈಕಿ ಎ1 ಪವಿತ್ರಾ ಗೌಡ, ಎ2 ದರ್ಶನ್‌ ಸೇರಿ 7 ಆರೋಪಿಗಳ ಜಾಮೀನು ರದ್ದು ಮಾಡುವಂತೆ ಸರ್ಕಾರ ಕೋರಿದೆ. ಈ ಪ್ರಕರಣದಲ್ಲಿ ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.ದರ್ಶನ್‌ ಜಾಮೀನು ಅರ್ಜಿಯನ್ನು ಏಕೆ ರದ್ದು ಮಾಡಬಾರದು ಎಂದು ಸುಪ್ರೀಂ ಕೋರ್ಟ್‌ ಇತ್ತೀಚೆಗೆ ದರ್ಶನ್‌ ಪರ ವಕೀಲರ ಬಳಿ ಕೇಳಿತ್ತು. ಅಲ್ಲದೆ, ದರ್ಶನ್‌ಗೆ ಜಾಮೀನು ನೀಡುವಾಗ ವಿವೇಚನೆ ಬಳಸಿಲ್ಲ ಎಂದು ಕೂಡ ಹೇಳಿತ್ತು. ಒಂದೊಮ್ಮೆ ಜಾಮೀನು ರದ್ದಾದರೆ ದರ್ಶನ್‌ ಅವರಿಗೆ ಸಂಕಷ್ಟ ಹೆಚ್ಚಲಿದೆ.

RELATED ARTICLES

Latest News