ಹಾಸನ,ಜು.3-ಜಿಲ್ಲೆಯಲ್ಲಿ ಹೃದಯಾಘಾತ ಸರಣೆ ಸಾವಿನ ಪ್ರಕರಣಗಳು ಸಧ್ಯಕ್ಕೆ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ನಿನ್ನೆಯಿಂದ ಮತ್ತೆ ನಾಲ್ವರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 31 ಕ್ಕೆ ಏರಿಕೆಯಾಗಿದೆ.
ರಾತ್ರಿ ಮಲಗಿದ್ದಲ್ಲೇ ಹೃದಯಾಘಾತದಿಂದ ಗ್ರಾಮ ಪಂಚಾಯಿತಿ ಸದಸ್ಯ ಸಂತೋಷ್ (41) ಮೃತಪಟ್ಟಿರುವ ಘಟನೆ ಆಲೂರು ತಾಲ್ಲೂಕಿನ ಕಲ್ಲಾರೆ ಗ್ರಾಮದಲ್ಲಿ ನಡೆದಿದೆ.ರಾತ್ರಿ ಊಟ ಮಾಡಿ ಮಲಗಿದ್ದು, ಬೆಳಗ್ಗೆ ಮೇಲೆ ಏಳಲೇ ಇಲ್ಲ. ಕೂಡಲೇ ಕುಟುಂಬಸ್ಥರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲೇ ಮೃತಪಟ್ಟಿದ್ದಾರೆ.
ಸಂತೋಷ್ ಕಾರಗೋಡು ಗ್ರಾಪಂ ಸದಸ್ಯರಾಗಿದ್ದರು. ಮತ್ತೊಂದು ಪ್ರಕರಣದಲ್ಲಿ ನಗರದ ಕರಿಗೌಡ ಕಾಲೋನಿಯ ಸಂಪತ್‌ಕುಮಾರ್ (53) ಎಂಬುವವರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಹಿಂಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.
ಮತ್ತೊಂದೆಡೆ ಸಕಲೇಶಪುರ ತಾಲ್ಲೂಕಿನ, ಬೆಳಗೋಡು ಹೋಬಳಿಯ ಚಿಕ್ಕನಾಯಕನ ಹಳ್ಳಿ ಗ್ರಾಮದಲ್ಲಿ ಸಿಬಿ ವಿರೂಪಾಕ್ಷ (70) ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗ್ರಾಮಕ್ಕೆ ವಾಪಸ್ ಬರುತ್ತಿದ್ದಾಗ ವೃದ್ಧೆ ದೇವಮ (72) ಮಾರ್ಗಮಧ್ಯೆ ಹೃದಯಾಘಾತದಿಂದ ಕೊನೆ ಉಸಿರೆಳೆದಿದ್ದಾರೆ.
ಸಕಲೇಶಪುರ ತಾಲ್ಲೂಕಿನ ಅರೆಕೆರೆ ಗ್ರಾಮದ ದೇವಮ ಬೆಂಗಳೂರಿನಲ್ಲಿ ಎದೆ ನೋವಿಗೆ ವೈದ್ಯರ ಸಲಹೆ ಪಡೆದು ವಾಪಸ್ ಗ್ರಾಮಕ್ಕೆ ತೆರಳುತ್ತಿದ್ದಾಗ ಘಟನೆ ನಡೆದಿದೆ.ಒಟ್ಟಿನಲ್ಲಿ ಕಳೆದ 45 ದಿನಗಳಿಂದ ಜಿಲ್ಲೆಯಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 31ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯ ಜನತೆಯನ್ನು ಬೆಚ್ಚಿ ಬೀಳಿಸಿದೆ.
- ಮದುವೆಯಾಗದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ
- ಉದ್ಯಮಿಯನ್ನು ಕಟ್ಟಿ ಹಾಕಿ ಚಿನ್ನ,ಹಣ ಲೂಟಿ
- ಸಣ್ಣ ವ್ಯಾಪಾರಿಗಳಿಗೆ ಜಿಎಸ್ಟಿ ನೋಟಿಸ್ ಗೊಂದಲಕ್ಕೆ ಕೇಂದ್ರ ಸರ್ಕಾರವೇ ಹೊಣೆ : ಸಿಎಂ ಸ್ಪಷ್ಟನೆ
- ಉದ್ಧಟತನ ತೋರುವ ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಡಿಕೆಶಿಗೆ ‘ಕೈ’ಕಮಾಂಡ್ ಸೂಚನೆ
- ಒಬ್ಬ ಮಹಿಳೆಯೊಂದಿಗೆ ಇಬ್ಬರು ಪುರುಷರ ಮದುವೆ : ಹಿಮಾಚಲದಲ್ಲಿ ಮರುಜೀವ ಪಡೆದ ಬಹುಪತಿತ್ವ