ಬೆಂಗಳೂರು,ಜು.19- ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಹಳ್ಳಕೊಳ್ಳಗಳು, ನದಿಗಳು ಉಕ್ಕಿ ಹರಿಯುತ್ತಿದ್ದು, ಕೆಲವು ಕಡೆ ವರುಣ ಭಾರೀ ಅವಾಂತರ ಸೃಷ್ಟಿಸಿದ್ದಾನೆ.
ಚಿಕ್ಕಮಗಳೂರು, ಕೊಡಗು, ಹಾಸನ, ದಕ್ಷಿಣಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮಂಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕೊಡಗು :
ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯದ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಕಾವೇರಿ ನದಿಗೆ 5 ಸಾವಿರ ಕ್ಯೂಸೆಕ್ ನೀರು ಹರಿಬಿಡಲಾಗಿದೆ.
ಚಿಕ್ಕಮಗಳೂರು :
ಜಿಲ್ಲೆಯ ಎನ್.ಆರ್.ಪುರ, ಶೃಂಗೇರಿ, ಹೊರನಾಡು, ಕೊಪ್ಪ, ಜಯಪುರ ಸೇರಿದಂತೆ ವಿವಿಧ ಭಾಗಗಳಲ್ಲಿ ಮಳೆಯಾಗುತ್ತಿದ್ದು, ಹಳ್ಳಗಳು ತುಂಬಿ ಹರಿಯುತ್ತಿದ್ದು, 5 ದಿನ ಆರೆಂಜ್
ಅಲರ್ಟ್ ಘೋಷಿಸಲಾಗಿದೆ.
ಇನ್ನು ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಸಂಪರ್ಕ ಕಲ್ಪಿಸುವ ಚಾರ್ಮುಡಿಘಾಟ್‌ನಲ್ಲಿ ದಟ್ಟ ಮಂಜು ಆವರಿಸಿದ್ದು, ಸುಗಮ ಸಂಚಾರಕ್ಕೆ ವಾಹನ ಸವಾರರು ಪರದಾಡುವಂತಾಗಿದೆ.
ಬೆಟ್ಟದ ಮೇಲಿನಿಂದ ಜಲಪಾತಗಳು ಧುಮ್ಮಿಕ್ಕುತ್ತಿದ್ದು, ಪ್ರವಾಸಿಗರು ಸೆಲ್ಪಿ ತೆಗೆದುಕೊಳ್ಳಲು ಮುಗಿಬೀಳುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಜಲಪಾತಗಳಿಗೆ ಪ್ರವಾಸಿಗರು ತೆರಳದಂತೆ
ಪೊಲೀಸರು ಸೂಚನೆ ನೀಡಿದ್ದಾರೆ.
ಮಂಗಳೂರು :
ಜಿಲ್ಲೆಯಾದ್ಯಂತ ಬಿಟ್ಟೂಬಿಡದೆ ಮಳೆ ಸುರಿಯುತ್ತಿದ್ದು, ಜನಜೀವನ ಅಕ್ಷರಸಹ ಅಸ್ತವ್ಯಸ್ಥಗೊಂಡಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲಾ ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ.
ಬೆಂಗಳೂರು, ತುಮಕೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಕೋಲಾರ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ ಸೇರಿದಂತೆ ಮತ್ತಿತರ
ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆಯಿದೆ.
- ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪೈಲಟ್ ವಾಹನ ಅಪಘಾತ, ನಾಲ್ವರು ಪೊಲೀಸರಿಗೆ ಗಾಯ
- ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ವಿಚಾರಣೆಗೆ ಹಾಜರಾದ ಶಾಸಕ ಭೈರತಿ ಬಸವರಾಜು
- ಕೇಂದ್ರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ
- ಛತ್ತೀಸ್ಗಢದಲ್ಲಿ 6 ಮಾವೋವಾದಿಗಳ ಹತ್ಯೆ
- ಕೊನೆಗೂ ಪಹಲ್ಗಾಮ್ ಉಗ್ರರ ದಾಳಿಯನ್ನು ಖಂಡಿಸಿದ ಚೀನಾ