ಬೆಂಗಳೂರಲ್ಲಿ ಮಳೆ, ಸಮಾರೋಪಾದಿಯಲ್ಲಿ ಪರಿಹಾರ ಕಾರ್ಯಕ್ಕೆ CM ಸೂಚನೆ

Social Share

ಬೆಂಗಳೂರು,ಅ.20- ನಗರದಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಕೆಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಕೆಲವು ಕಡೆ ರಸ್ತೆಗಳಲ್ಲಿ ನೀರು ನಿಂತಿದ್ದು, ಸಮರೋಪಾದಿಯಲ್ಲಿ ಕಾರ್ಯಾಚರಣೆ
ನಡೆಸಬೇಕೆಂದು ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

36 ಸಾವಿರ ವಿದ್ಯಾರ್ಥಿಗಳಿಗೆ ಸ್ಕೂಟರ್ ಗಿಫ್ಟ್

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿರಂತರ ಮಳೆಯಿಂದಾಗಿ ಈ ರೀತಿ ಸಮಸ್ಯೆಗಳು ಉದ್ಭವಿಸುತ್ತಲೇ ಇವೆ. ಕಳೆದ ರಾತ್ರಿ ಮತ್ತೆ ದಾಖಲೆ ಪ್ರಮಾಣದಲ್ಲಿ ಮಳೆ ಬಂದಿದೆ. ತಕ್ಷಣವೇ ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕೆಂದು ಸೂಚಿಸಿರುವುದಾಗಿ ತಿಳಿಸಿದರು.

ಯಾವ ಯಾವ ಕಡೆ ಗುಂಡಿಗಳಿವೆಯೇ ಅವುಗಳನ್ನು ತಕ್ಷಣವೇ ಮುಚ್ಚಬೇಕು. ಪ್ರಯಾಣಿಕರಿಗೆ ಹಾಗೂ ವಾಹನ ಸವಾರರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು. ನಿರೀಕ್ಷೆಗೂ ಮೀರಿ ಮಳೆಯಾದಾಗ ಇಂತಹ ಸಮಸ್ಯೆಗಳು ಉದ್ಭವಿಸುತ್ತವೆ ಎಂದರು.

ಕಳೆದ ಬಾರಿ ಸುರಿದ ಮಳೆಯಿಂದ ಎರಡು ಕ್ಷೇತ್ರಗಳಲ್ಲಿ ಮಾತ್ರ ಸಮಸ್ಯೆ ಉಂಟಾಯಿತು. ಆದರೆ, ಕೆಲವರು ಇಡೀ ಬೆಂಗಳೂರೇ ನೀರಿನಲ್ಲಿ ಮುಳುಗಡೆಯಾಗಿದೆ ಎಂದು ಬಿಂಬಿಸುವ ಪ್ರಯತ್ನ ಮಾಡಿದರು. ಇದು ಸರಿಯಾದ ಕ್ರಮವಲ್ಲ ಎಂದು ಸಿಎಂ ಅಸಮಧಾನ ಹೊರ ಹಾಕಿದರು.

ಕನ್ನಡ ರಾಜ್ಯೋತ್ಸವದಂದು ಅಪ್ಪುಗೆ ಕರ್ನಾಟಕ ರತ್ನ ಪ್ರದಾನ

ಬೆಂಗಳೂರಿನ ವಿಷಯಗಳ ಬಗ್ಗೆ ತಿಳಿದುಕೊಳ್ಳದೆ ಕೆಲವು ವ್ಯಾಖ್ಯಾನಗಳು ಆಗುತ್ತಿವೆ. ಇದು ಸರಿಯಲ್ಲ. ವಾಸ್ತವವಾಗಿ ತಿಳಿದುಕೊಂಡು ಮಾತನಾಡಬೇಕು. ಯಾವುದೇ ಸಮಸ್ಯೆ ಬಂದರೂ ಅದನ್ನು ಎದುರಿಸುವ ಶಕ್ತಿ ಸರ್ಕಾರಕ್ಕೆ ಇದೆ ಎಂದು ಹೇಳಿದರು.

ಮಳೆ ನಿರಂತರವಾಗಿ ಸುರಿಯುತ್ತಿರುವುದರಿಂದ ಸಮಸ್ಯೆಯಾಗಿದೆ. ಪಾಟ್‍ಹೋಲ್‍ಗಳನ್ನು ಮುಚ್ಚುವ ಕೆಲಸ ನಡೆಯುತ್ತಿದೆ. ಈ ಹಿಂದೆಯೂ ಸರ್ಕಾರ ಕ್ರಮಗಳನ್ನು ತೆಗೆದುಕೊಂಡಿತ್ತು. ಆದರೆ, ದಾಖಲೆ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಳೆ ನಿರ್ವಹಣೆಗಾಗಿ ಎನ್‍ಡಿಆರ್‍ಎಫ್ ಬಲಪಡಿಸಿದ್ದೇವೆ. ನಿವೃತ್ತ ಸೈನಿಕರನ್ನು ಇದಕ್ಕೆ ತೆಗೆದುಕೊಂಡಿದ್ದೇವೆ. ಮೊನ್ನೆ ಸುರಿದ ಭಾರೀ ಮಳೆಯಿಂದ ಉಂಟಾಗಿದ್ದ ಸಮಸ್ಯೆಯನ್ನು ನಿಭಾಯಿಸಿದ್ದಾರೆ.

ಇನ್ನು ಮುಂದೆ ಯಾವುದೇ ರೀತಿಯ ಸಮಸ್ಯೆಗಳು ಉದ್ಭವವಾಗುವುದಿಲ್ಲ. ಯಾವುದೇ ಅವಘಡವಾದರೂ ಅದನ್ನು ತಪ್ಪಿಸುವ ಕೆಲಸ ಸರ್ಕಾರ ಮಾಡಲಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೀಪಾವಳಿ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ 50 ಡೆಸಿಬಲ್‍ಗಿಂತ ಕಡಿಮೆ ಸಾಮಥ್ರ್ಯದ ಪಟಾಕಿಗಳನ್ನು ಹಾರಿಸಬೇಕೆಂದು ಮನವಿ ಮಾಡಿದರು.

ಯುಕೆ ಪ್ರಧಾನಿ ಲಿಜ್‍ಟ್ರಸ್ ಸರ್ಕಾರದ ಮತೊಬ್ಬ ಸಚಿವೆ ರಾಜೀನಾಮೆ

ಆಸ್ಪತ್ರೆ, ಜನಸಂದಣಿ ಮತ್ತಿತರ ಕಡೆ ಪಟಾಕಿಯನ್ನು ಸಿಡಿಸಬಾರದು. ಪ್ರತಿಯೊಬ್ಬರೋ ಪರಿಸರ ಸ್ನೇಹಿ ಪಟಾಕಿಯನ್ನು ಹೊಡೆಯಬೇಕು. ನಿಮ್ಮ ಸುರಕ್ಷತೆ ನಿಮ್ಮ ಕೈಯಲ್ಲಿದೆ ಎಂದು ಕಿವಿ ಮಾತು ಹೇಳಿದರು.

Articles You Might Like

Share This Article